ರಂಗೇರಿದ ಲೋಕಸಭಾ ಚುನಾವಣೆ ಅಖಾಡ: ಮಾರ್ಚ್ 15 ರಿಂದ 4 ದಿನ ಕರ್ನಾಟದಲ್ಲಿ ಪ್ರಧಾನಿ ಮೋದಿ ಪ್ರಚಾರ

ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದೆರೆ, ಈ ನಡುವಲ್ಲೇ ಪ್ರಬಲ ಪಕ್ಷಗಳು ಚುನಾವಣೆಗೆ ಸಿದ್ಧತೆಗಳ ನಡೆಸುತ್ತಿದ್ದು, ಕೇಂದ್ರ ನಾಯಕರ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿವೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬೆಂಗಳೂರು: ಲೋಕಸಭಾ ಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಿಲ್ಲ. ಆದೆರೆ, ಈ ನಡುವಲ್ಲೇ ಪ್ರಬಲ ಪಕ್ಷಗಳು ಚುನಾವಣೆಗೆ ಸಿದ್ಧತೆಗಳ ನಡೆಸುತ್ತಿದ್ದು, ಕೇಂದ್ರ ನಾಯಕರ ಮೂಲಕ ಮತದಾರರನ್ನು ಸೆಳೆಯಲು ಮುಂದಾಗಿವೆ.

ಈ ನಿಟ್ಟಿನಲ್ಲಿ ಚುನಾವಣೆ ಸಂದರ್ಭದಲ್ಲಿ ಹೆಚ್ಚು ಮತದಾರರ ಗಮನ ಸೆಳೆಯಲು ರಾಜ್ಯದಲ್ಲಿ ಪ್ರಧಾನಿ ಮೋದಿ ಅವರು ಪ್ರಚಾರ ಮಾಡುತ್ತಿದ್ದಾರೆ.

ಮಾರ್ಚ್ 15 ರಿಂದ 19 ರವರೆಗೆ ದಕ್ಷಿಣದ 5 ರಾಜ್ಯಗಳಲ್ಲಿ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಕರ್ನಾಟಕದ 12 ಲೋಕಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಪ್ರವಾಸ ನಡೆಸಲಿದ್ದಾರೆ. ಈ ಮೂಲಕ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಲು ತಂತ್ರ ಹೆಣೆಯಲಾಗುತ್ತಿದೆ.

ಪ್ರಧಾನಿ ಮೋದಿ
ಅಭಿವೃದ್ಧಿಯಿಂದಾಗಿ ತುಷ್ಟೀಕರಣದ ವಿಷ ದುರ್ಬಲವಾಗುತ್ತಿದೆ: ಮೋದಿ

ಮಾ.15 ರಂದು ಕೋಲಾರಕ್ಕೆ ಭೇಟಿ ನೀಡಲಿದ್ದು, ಇದೇ ವೇಳೆ ತುಮಕೂರು, ಚಿಕ್ಕಬಳ್ಳಾಪುರ ಕ್ಷೇತ್ರಗಳ ಮೇಲೂ ಗಮನ ಹರಿಸಲಿದ್ದಾರೆ.

ಮಾ.17 ರಂದು ಶಿವಮೊಗ್ಗ ಕ್ಷೇತ್ರಕ್ಕೆ ಭೇಟಿ ನೀಡಲಿದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು ಕ್ಷೇತ್ರಗಳ ಬಗ್ಗೆ ವಿಶೇಷ ಗಮನ ನೀಡಲಿದ್ದಾರೆ.

ಮಾ.18 ರಂದು ಬೀದರ್ ಹಾಗೂ ಕಲಬುರಗಿ ಮತ್ತು ಮಾ.19 ರಂದು ಧಾರವಾಡಕ್ಕೆ ಭೇಟಿ ನೀಡಲಿದ್ದು, ಬೆಳಗಾವಿ, ಹಾವೇರಿ ಜಿಲ್ಲೆಗಳ ಮೇಲೆ ಫೋಕಸ್ ಮಾಡಲಿದ್ದಾರೆ.

ಈ ವೇಳೆ ಕೆಲವು ಕಾಮಗಾರಿಗಳಿಗೆ ಚಾಲನೆ ನೀಡಲಿದ್ದು, ಕೆಲವು ಉದ್ಘಾಟನಾ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com