ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಬದಲಾವಣೆ ಬಗ್ಗೆ ಜನವರಿಯಲ್ಲೇ ಸುಳಿವು ನೀಡಿದ್ದ kannadaprabha.com ಅಂಕಣ!

ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ಕನ್ನಡಪ್ರಭ.ಕಾಮ್ ಅಂಕಣ
ಕನ್ನಡಪ್ರಭ.ಕಾಮ್ ಅಂಕಣ

ಬೆಂಗಳೂರು: ಲೊಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ. ಕಳೆದ 2-3 ದಿನಗಳಿಂದಲೂ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆ ಮಾಡಲಾಗಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪಿದೆ.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈತಪ್ಪುವ ಸಾಧ್ಯವಿದೆ ಎಂದು ಕಳೆದ 2 ತಿಂಗಳ ಹಿಂದೆಯೇ ಅಂದರೆ ಜನವರಿ 05 ರಂದೇ ಕನ್ನಡಪ್ರಭ.ಕಾಮ್ ನ ಸುದ್ದಿ ವಿಶ್ಲೇಷಣೆ ಅಂಕಣದಲ್ಲಿ ಬರೆಯಲಾಗಿತ್ತು.

ಲೋಕಸಭೆ: ಬಿಜೆಪಿಗೆ ಆ ನಾಲ್ಕು ಕ್ಷೇತ್ರಗಳದ್ದೇ ತಲೆನೋವು ಎಂಬ ಶಿರ್ಷಿಕೆಯಡಿಯಲ್ಲಿ ಜ.05 ರಂದು ಪ್ರಕಟವಾಗಿದ್ದ ಅಂಕಣದಲ್ಲಿ ಮೈಸೂರು-ಕೊಡಗು, ಬೆಂಗಳೂರು ಉತ್ತರ, ಉಡುಪಿ ಚಿಕ್ಕಮಗಳೂರು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಬದಲಾವಣೆಯಾಗುವ ಸಾಧ್ಯತೆ ಇದ್ದು ಬಿಜೆಪಿಗೆ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿದೆ ಎಂದು ವಿಶ್ಲೇಷಿಸಲಾಗಿತ್ತು. ಅದರಂತೆಯೇ ಈಗ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ, ಉಡುಪಿ ಚಿಕ್ಕಮಗಳೂರು, ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿಗಳನ್ನು ಬದಲಾವಣೆ ಮಾಡಿ ಬಿಜೆಪಿ ಪಟ್ಟಿ ಪ್ರಕಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com