ಮದುವೆಯಾಗುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ: ಆರೋಪಿಗೆ 1 ಲಕ್ಷ ರೂ. ದಂಡ ವಿಧಿಸಿದ ಹೈಕೋರ್ಟ್

ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಫಕೀರಪ್ಪ ಹಟ್ಟಿಗೆ ಕರ್ನಾಟಕ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ಮದುವೆಯಾಗುವುದಾಗಿ ಭರವಸೆ ನೀಡಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಮಹದೇವಪುರ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಫಕೀರಪ್ಪ ಹಟ್ಟಿಗೆ ಕರ್ನಾಟಕ ಹೈಕೋರ್ಟ್ 1 ಲಕ್ಷ ರೂ. ದಂಡ ವಿಧಿಸಿದೆ.

ಸತ್ಯಾಂಶಗಳನ್ನು ಮುಚ್ಚಿಟ್ಟಿದ್ದಕ್ಕಾಗಿ ವಿಶೇಷ ನ್ಯಾಯಾಲಯ ಅವರಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಾಲಯದಲ್ಲಿ ವಂಚನೆ ಮಾಡಿದ್ದಕ್ಕಾಗಿ ಅವರ ವಿರುದ್ಧ ನ್ಯಾಯವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವಂತೆ ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ.

ಫಕೀರಪ್ಪ ಅವರಿಗೆ ನೀಡಿರುವ ಜಾಮೀನನ್ನು ರದ್ದುಗೊಳಿಸುವಂತೆ ಕೋರಿ 27 ವರ್ಷದ ಸಂತ್ರಸ್ತೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್‌ಪಿ ಸಂದೇಶ್ ಅವರು ಅಂಗೀಕರಿಸಿದ್ದಾರೆ.

ಪ್ರಾತಿನಿಧಿಕ ಚಿತ್ರ
ಸಿದ್ದಗಂಗಾ ಜಾತ್ರೆಗೆ ಬಂದಿದ್ದ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

ಆರೋಪಿಯ ಜಾಮೀನು ರದ್ದತಿಯನ್ನು ಪರಿಗಣಿಸಿ ಕಸ್ಟಡಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯವು ಪೊಲೀಸರಿಗೆ ಸೂಚಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com