ತಮಿಳುನಾಡಿಗೆ ಒಂದು ಹನಿ ನೀರನ್ನೂ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಕಾವೇರಿ ನೀಡು ಬಿಡುಗಡೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಳ್ಳಿಹಾಕಿದ್ದು, ಕರ್ನಾಟಕಕ್ಕೇ ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.
ತಮಿಳುನಾಡಿಗೆ ಒಂದು ಹನಿ ನೀರನ್ನೂ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ

ಮೈಸೂರು: ತಮಿಳುನಾಡಿಗೆ ಕಾವೇರಿ ನೀಡು ಬಿಡುಗಡೆ ಮಾಡಲಾಗುತ್ತಿದೆ ಎಂಬ ಬಿಜೆಪಿ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಳ್ಳಿಹಾಕಿದ್ದು, ಕರ್ನಾಟಕಕ್ಕೇ ನೀರಿಲ್ಲದಿರುವಾಗ ತಮಿಳುನಾಡಿಗೆ ನೀರು ಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದ್ದಾರೆ.

ಹೆಗ್ಗವಾಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜಲಾಶಯಗಳಲ್ಲಿ ನೀರಿಲ್ಲ, ಬಿಜೆಪಿ ಆರೋಪ ನಿರಾಧಾರ. ಕೇಂದ್ರದ ನಿರ್ದೇಶನ ಅಥವಾ ತಮಿಳುನಾಡು ನಮಗೆ ನೀರು ಕೊಡುವಂತೆ ಮನವಿ ಮಾಡಿದರೂ ನಾವು ನೀರು ಕೊಡುವುದಿಲ್ಲ ಎಂದು ಹೇಳಿದರು.

ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಲಾಭಕ್ಕಾಗಿ ಬಿಜೆಪಿ ಸರ್ಕಾರ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಜಾರಿಗೆ ಅಧಿಸೂಚನೆ ಹೊರಡಿಸಿದೆ. ಧಾರ್ಮಿಕ ಆಧಾರದ ಮೇಲೆ ಪೌರತ್ವ ನೀಡುವುದನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿದರು.

ತಮಿಳುನಾಡಿಗೆ ಒಂದು ಹನಿ ನೀರನ್ನೂ ಕೊಡುವುದಿಲ್ಲ: ಸಿಎಂ ಸಿದ್ದರಾಮಯ್ಯ
ಚಾಮರಾಜನಗರಕ್ಕೆ ಬಂದಷ್ಟು ನನ್ನ ಖುರ್ಚಿ ಭದ್ರವಾಗುತ್ತೆ: ಸಿಎಂ ಸಿದ್ದರಾಮಯ್ಯ

ಇದೇ ವೇಳೆ ಅನಂತ್ ಕುಮಾರ್ ಹೆಗಡೆ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಂವಿಧಾನ ಬದಲಿಸಲು ಲೋಕಸಭೆಯಲ್ಲಿ 400 ಸ್ಥಾನಗಳ ಪಡೆಯಲು ಬಿಜೆಪಿ ಪ್ರಯತ್ನಿಸುತತಿದೆ ಎಂಬ ಹೇಳಿಕೆಯನ್ನು ಯಾವುದೇ ಸಾಮಾನ್ಯ ವ್ಯಕ್ತಿ ನೀಡಿಲ್ಲ, ಕೇಂದ್ರದ ಮಾಜಿ ಸಚಿವರು ನೀಡಿರುವ ಹೇಳಿಕೆಯಾಗಿದೆ. ಆದರೆ, ಪಕ್ಷವು ಇದು ಅವರ ವೈಯಕ್ತಿಕ ಹೇಳಿಕೆ ಎಂದು ಹೇಳಿದೆಯೇ ವಿನಃ ಟೀಕಿಸಿಲ್ಲ ಎಂದು ತಿಳಿಸಿದರು.

ಬಳಿಕ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ಕೈತಪ್ಪಲು ಯಡಿಯೂರಪ್ಪ ಹಾಗೂ ಸಿದ್ದರಾಮಯ್ಯ ನಡುವೆ ನಡೆಸಿರುವ ಒಳಒಪ್ಪಂದವೇ ಕಾರಣ ಎಂಬ ವರದಿಗಳನ್ನು ನಿರಾಕರಿಸಿದ ಅವರು, ಇದು ಬಿಜೆಪಿ ನಿರ್ಧಾರವಾಗಿದೆ. ಯದುವೀರ್ (ಕೃಷ್ಣದತ್ತ ಚಾಮರಾಜ ಒಡೆಯರ್ -- ಹಿಂದಿನ ಮೈಸೂರು ರಾಜಮನೆತನದ ವಂಶಸ್ಥರು) ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸುವಂತೆ ನಾನು ಹೇಳಿಲ್ಲ. ಅಭ್ಯರ್ಥಿ ಯಾರೇ ಆಗಲಿ ನಾವು ಮೈಸೂರಿನಲ್ಲಿ ಗೆಲ್ಲಲೇ ಬೇಕು ಎಂದು ಹೇಳಿದರು.

ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ನೀಡಿದರೆ ಮುಖ್ಯಮಂತ್ರಿ ಸ್ಥಾನ ಕುತ್ತು ಬರುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಅವರು ಎರಡು ಬಾರಿ ಸಂಸದರಾಗಿದ್ದಾರೆ. ನನ್ನ ಕುರ್ಚಿ ಏಕೆ ಅಲುಗಾಡುತ್ತದೆ? ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com