ದೊಡ್ಡಬಳ್ಳಾಪುರ: ಹಾಸ್ಟೆಲ್ ಮಹಡಿಯಿಂದ ಬಿದ್ದು ಬಿ-ಟೆಕ್ ವಿದ್ಯಾರ್ಥಿ ನಿಗೂಢ ಸಾವು!

ಹಾಸ್ಟೆಲ್ ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಹಾಸ್ಟೆಲ್ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಹಾಸ್ಟೆಲ್ ನ ಆರನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಹಾಸ್ಟೆಲ್ ನಲ್ಲಿ ನಡೆದಿದೆ.

ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ದಾಸರಿ ಬ್ರಹ್ಮಸಾಯಿರೆಡ್ಡಿ, ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.

ವಿದ್ಯಾರ್ಥಿಯ ಸಾವಿನ ನಂತರ ಕಾಲೇಜು ಆಡಳಿತ ಮಂಡಳಿ ವಿರುದ್ಧ ನಿರ್ಲಕ್ಷ್ಯದ ಆರೋಪದ ಮೇಲೆ ಐಪಿಸಿ 304 ಎ ದಾಖಲಿಸಲಾಗಿದೆ. ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ದಾಸರಿ ಬ್ರಹ್ಮಸಾಯಿ ರೆಡ್ಡಿ ಮಂಗಳವಾರ ರಾತ್ರಿ 7.30ರ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆ.

ರೆಡ್ಡಿ ಮೊದಲ ವರ್ಷದ ಕಂಪ್ಯೂಟರ್ ಸೈನ್ಸ್ ವಿದ್ಯಾರ್ಥಿಯಾಗಿದ್ದು, ಕ್ಯಾಂಪಸ್‌ನೊಳಗಿನ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಹಾಸ್ಟೆಲ್ ನಲ್ಲಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಕಟ್ಟಡದ ಆರನೇ ಮಹಡಿಯಿಂದ ಬಿದ್ದಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

ವಿದ್ಯಾರ್ಥಿ ಬಳಿ ಯಾವುದೇ ಡೆತ್ ನೋಟ್ ಇಲ್ಲ. ವಿದ್ಯಾರ್ಥಿಯ ಲ್ಯಾಪ್‌ಟಾಪ್ ಕೂಡ ವಶಪಡಿಸಿಕೊಳ್ಳಲಾಗಿದೆ. ವಿದ್ಯಾರ್ಥಿಯ ಜೇಬಿನಲ್ಲಿದ್ದ ಮೊಬೈಲ್ ಫೋನ್ ಸಂಪೂರ್ಣ ಹಾಳಾಗಿದೆ. ಸದ್ದು ಕೇಳಿದ ನಂತರ ವಾರ್ಡನ್ ಮತ್ತು ಸೆಕ್ಯುರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್ ಕೊಠಡಿಗಳಿಂದ ಹೊರಗೆ ಧಾವಿಸಿದರು. ಆತ ಸ್ಥಳದಲ್ಲೇ ಸಾವನ್ನಪ್ಪಿದ್ದ ಎಂದು ತನಿಖಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಹೆಡ್ ಫೋನ್ ತಂದ ಕುತ್ತು; ಹಳಿಗಳ ಮೇಲೆ ನಡೆಯುತ್ತಿದ್ದವನಿಗೆ ರೈಲು ಡಿಕ್ಕಿ, ಸ್ಥಳದಲ್ಲೇ ವಿದ್ಯಾರ್ಥಿ ಸಾವು

ವಿದ್ಯಾರ್ಥಿ ಹೇಗೆ ಕೆಳಗೆ ಬಿದ್ದಿದ್ದಾನೆ ಎಂಬುದು ಸ್ಪಷ್ಟವಾಗಿಲ್ಲ. ಆರನೇ ಮಹಡಿಯಲ್ಲಿ ರೀತಿಯ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ರೆಡ್ಡಿ ಅಲ್ಲಿಗೆ ಹೋಗಿ ಏನು ಮಾಡುತ್ತಿದ್ದ ಎಂಬುದು ಹಲವು ಅನುಮಾನಗಳೆಗೆ ಎಡೆ ಮಾಡಿಕೊಟ್ಟಿದೆ. . ನಿರ್ವಹಣೆಯ ಜೊತೆಗೆ, ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಂಡವರ ವಿರುದ್ಧವೂ ಪ್ರಕರಣ ದಾಖಲು ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು. ಸಾವಿಗೆ ನಿಖರವಾದ ಕಾರಣವನ್ನು ಕಂಡುಹಿಡಿಯಲು ಪೊಲೀಸರು ಸೀನ್ ಆಫ್ ಕ್ರೈಮ್ ಆಫೀಸರ್ಸ್ (SOCO) ನಿಂದ ವರದಿಗಾಗಿ ಕಾಯುತ್ತಿದ್ದಾರೆ. ರೆಡ್ಡಿಯ ಪೋಷಕರು ಕೃಷಿಕರಾಗಿದ್ದು, ಮೃತದೇಹವನ್ನು ದೊಡ್ಡಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಯ ನಂತರ ಅವರಿಗೆ ಹಸ್ತಾಂತರಿಸಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com