ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ಸ್ ಇಲ್ಲ: ಮಂಡಳಿ ಸ್ಪಷ್ಟನೆ

ಮಾರ್ಚ್ 10ರಂದು ಹೊರಡಿಸಲಾದ ಸುತ್ತೋಲೆ ನಕಲಿ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ತಪ್ಪುದಾರಿಗೆಳೆಯುವಂಥದ್ದು ಎಂದು ಮಂಡಳಿ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕಳೆದ ಮಾರ್ಚ್ 7 ರಂದು ಭೌತಶಾಸ್ತ್ರದ ದ್ವಿತೀಯ ಪಿಯುಸಿ (PUC) ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಬಹು ಆಯ್ಕೆಯ ಪ್ರಶ್ನೆಗಳು (MCQ ಗಳು) ಕಷ್ಟಕರವಾಗಿದ್ದರಿಂದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕ ನೀಡುತ್ತಿದೆ ಎಂದು ಹಬ್ಬಿರುವ ಸುದಂತಿ ನಿಜವಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

“ಪತ್ರಿಕೆಯ ಭಾಗ ಎಯಲ್ಲಿ ಬ್ಲೂಪ್ರಿಂಟ್ ಅಲ್ಲದ ಬಹು ಆಯ್ಕೆ ಮಾದರಿ ಪ್ರಶ್ನೆಗಳನ್ನು ಪ್ರಯತ್ನಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲು ಮಂಡಳಿಯು ನಿರ್ಧರಿಸಿದೆ. ಪ್ರಶ್ನೆಗಳನ್ನು ಹಾಗೆಯೇ ಪ್ರಯತ್ನಿಸದೆ ಬಿಟ್ಟುಬಿಟ್ಟ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು ಮಾರ್ಚ್ 10ರಂದು ಹೊರಡಿಸಲಾದ ಸುತ್ತೋಲೆ ನಕಲಿ ಮತ್ತು ವಿದ್ಯಾರ್ಥಿಗಳು ಮತ್ತು ಪೋಷಕರನ್ನು ತಪ್ಪುದಾರಿಗೆಳೆಯುವಂಥದ್ದು ಎಂದು ಮಂಡಳಿ ತಿಳಿಸಿದೆ.

ಈ ಬಗ್ಗೆ TNIE ಯೊಂದಿಗೆ ಮಾತನಾಡಿದ ಪ್ರಭಾರಿ ಮತ್ತು ಪಿಯುಸಿ ಪರೀಕ್ಷೆಗಳ ನಿರ್ದೇಶಕ ಗೋಪಾಲಕೃಷ್ಣ ಎಚ್‌ಎನ್, ಸುತ್ತೋಲೆ ನಕಲಿಯಾಗಿದ್ದು, ಮಂಡಳಿಯಿಂದ ಹೊರಡಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ಇಲಾಖೆ ಗ್ರೇಸ್ ಮಾರ್ಕ್‌ಗಳನ್ನು ನೀಡಲಿದೆ ಎಂದು ಸುತ್ತೋಲೆ ಇಂಟರ್ನೆಟ್, ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಆದರೆ ನಾವು ಇದುವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಪತ್ರಿಕೆಯಲ್ಲಿ ಕಾಣಿಸಿಕೊಂಡ ಎಲ್ಲಾ ಪ್ರಶ್ನೆಗಳು ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಭಾಗವಾಗಿತ್ತು. ಈಗ ಎಲ್ಲೆಡೆ ಹರಿದಾಡುತ್ತಿರುವ ಸುತ್ತೋಲೆ ಮಂಡಳಿಯ ಅಧಿಕೃತ ಸುತ್ತೋಲೆಯಲ್ಲ ಎಂದು ಸ್ಪಷ್ಟಪಡಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com