ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸು ದಾಖಲು

ಯಡಿಯೂರಪ್ಪ ವಿರುದ್ಧ ಪೋಕ್ಸೋ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಎಫ್ ಐಆರ್ ದಾಖಲು
ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
ಬಿ ಎಸ್ ಯಡಿಯೂರಪ್ಪ(ಸಂಗ್ರಹ ಚಿತ್ರ)
Updated on

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.

ಬಾಲಕಿ ತಾಯಿ ನೀಡಿದ ದೂರಿನ ಆಧಾರದಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪನವರ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಸೆಕ್ಷನ್ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖವಾಗಿದೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯ ಕೋರಿ ತನಿಖೆಗೆ ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕೆಂದು ಕೋರಿದ್ದಾರೆ.

ಸಂತ್ರಸ್ತೆ ತಾಯಿ ಸಲ್ಲಿಸಿದ ದೂರಿನಲ್ಲೇನಿದೆ?: ಸಹಾಯ ಕೋರಿ ಯಡಿಯೂರಪ್ಪನವರ ಮನೆಗೆ ಹೋಗಿದ್ದಾಗ 10 ನಿಮಿಷಗಳ ಕಾಲ ಮಾತನಾಡಿದ ಯಡಿಯೂರಪ್ಪನವರು, ನನ್ನ ಮಗಳನ್ನು ಕೋಣೆಗೆ ಕರೆದೊಯ್ದು ಬಾಗಿಲು ಹಾಕಿದರು. ಐದು ನಿಮಿಷಗಳ ಕಾಲ ಕೊಠಡಿಯಲ್ಲಿಯೇ ಇದ್ದರು, ಆ ಸಮಯದಲ್ಲಿ ಅವರು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದರು. ನಂತರ ನನ್ನ ಮಗಳು ಕೋಣೆಯಿಂದ ಗಾಬರಿಪಟ್ಟು ಓಡಿಬಂದು ನನ್ನಲ್ಲಿ ದುಃಖದಿಂದ ಅಳುತ್ತಾ ಆದ ಘಟನೆಯನ್ನು ಹೇಳಿಕೊಂಡಳು ಎಂದು ಎಫ್ ಐಆರ್ ನಲ್ಲಿ ದಾಖಲಿಸಿದ್ದಾರೆ.

ಯಡಿಯೂರಪ್ಪನವರು ನಂತರ ಕ್ಷಮೆಯಾಚಿಸಿ ವಿಷಯವನ್ನು ಹೊರಗೆ ಯಾರಿಗೂ ಬಹಿರಂಗಪಡಿಸದಂತೆ ವಿನಂತಿಸಿದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ ಸದಾಶಿವನಗರ ಪೊಲೀಸರು ನಿನ್ನೆ ರಾತ್ರಿ ಮಾಜಿ ಸಿಎಂ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಕ್ಕಳ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ 8 (ಲೈಂಗಿಕ ದೌರ್ಜನ್ಯ) ಮತ್ತು ಐಪಿಸಿ ಸೆಕ್ಷನ್ 354 (ಎ) (ಲೈಂಗಿಕ ಕಿರುಕುಳ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಯಡಿಯೂರಪ್ಪನವರ ವಿರುದ್ಧ ದಾಖಲಾದ ದೂರು
ಯಡಿಯೂರಪ್ಪನವರ ವಿರುದ್ಧ ದಾಖಲಾದ ದೂರು

53 ಮಂದಿ ವಿರುದ್ಧ ಮಹಿಳೆ ದೂರು: ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ ತಂದೊಡ್ಡಲಿದೆ.

ಯಡಿಯೂರಪ್ಪ ಅವರು 2008 ರಿಂದ 2011 ರವರೆಗೆ, ಮೇ 2018 ರಲ್ಲಿ ಮತ್ತು ನಂತರ ಜುಲೈ 2019 ರಿಂದ 2021 ರವರೆಗೆ ಕರ್ನಾಟಕದ ಮುಖ್ಯಮಂತ್ರಿ ಸ್ಥಾನವನ್ನು ಹೊಂದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com