ಬಿಜೆಪಿ ಶಾಸಕ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಜಿ ಸಚಿವ ಪ್ರಭು ಚೌಹಾಣ್
ಮಾಜಿ ಸಚಿವ ಪ್ರಭು ಚೌಹಾಣ್
Updated on

ಬೀದರ್: ಔರಾದ್ ವಿಧಾನಸಭ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಭು ಚೌಹಾಣ್ ಅವರು 3 ದಿನಗಳ‌ ಹಿಂದೆ ಮುಂಬೈ ನಗರಕ್ಕೆ ತೆರಳಿದ್ದರು. ಗುರುವಾರ ಸಂಜೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಮುಂಬೈ ನಗರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಮಾಜಿ ಸಚಿವ ಪ್ರಭು ಚೌಹಾಣ್
ಬೀದರ್: ಸಚಿವ ಪ್ರಭು ಚೌಹಾಣ್​ಗೆ ಸೇರಿದ ಕಾರು ಪಲ್ಟಿ

ಸದ್ಯ ಅವರಿಗೆ ಕಿರು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಪ್ರಸ್ತುತ ಚೌಹಾಣ್ ಆರೋಗ್ಯ ಸ್ಥಿರವಾಗಿದೆ. ಇನ್ನೆರಡು ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆಯಾಗಲಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.‌

ಬೀದರ್‌ ಕ್ಷೇತ್ರದಿಂದ ಭಗವಂತ್ ಖೂಬಾಗೆ ಟಿಕೆಟ್ ನೀಡಬೇಡಿ ಎಂದು ಪ್ರಭು ಚೌಹಾಣ್ ಪಟ್ಟು ಹಿಡಿದಿದ್ದರು. ಅಲ್ಲದೇ ಖುದ್ದು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಕಾಲಿಗೆ ಬಿದ್ದು ಬೇಡಿಕೊಂಡಿದ್ದರು. ಆದರೆ, ಬಿಜೆಪಿ ಹೈಕಮಾಂಡ್, ಮತ್ತೆ ಬೀದರ್​ ಟಿಕೆಟ್​ ಭಗವಂತ್ ಖೂಬಾಗೆ ನೀಡಿದೆ. ಇದರ ಬೆನ್ನಲ್ಲೇ ಪ್ರಭು ಚೌಹಾಣ್ ಆರೋಗ್ಯದಲ್ಲಿ ಏರುಪೇರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com