ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ನಂ.13 ಆರೋಪಿಯಾಗಿರುವ 37 ವರ್ಷದ ಸುಜಿತ್ ಕುಮಾರ್ ಅಲಿಯಾಸ್ ಸುಜಿತ್ ಎಸ್‌ಆರ್ ಅವರಿಗೆ ಜಾಮೀನು ನೀಡಲು ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ.
ಪತ್ರಕರ್ತೆ ಗೌರಿ ಲಂಕೇಶ್
ಪತ್ರಕರ್ತೆ ಗೌರಿ ಲಂಕೇಶ್

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ನಂ.13 ಆರೋಪಿಯಾಗಿರುವ 37 ವರ್ಷದ ಸುಜಿತ್ ಕುಮಾರ್ ಅಲಿಯಾಸ್ ಸುಜಿತ್ ಎಸ್‌ಆರ್ ಅವರಿಗೆ ಜಾಮೀನು ನೀಡಲು ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣದ ವಿಚಾರಣೆಯಲ್ಲಿನ ವಿಳಂಬವು ಆರೋಪಿಗೆ ಜಾಮೀನು ನೀಡಲು ಕಾರಣವಾಗಬೇಕು ಎಂಬ ಕಲ್ಪನೆಯನ್ನು ಸತ್ಯಾಸತ್ಯತೆ ಮತ್ತು ಸಾಕ್ಷ್ಯಗಳು ಬೆಂಬಲಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಧೀಶ ಮುರಳೀಧರ ಪೈ ಬಿ ಅವರು, ಸುಜಿತ್ ಸಾಕಷ್ಟು ಸಮಯದಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ ಎಂದು ದಾಖಲೆಗಳು ಸೂಚಿಸುತ್ತವೆ. 2022ರ ಜುಲೈ 4 ರಂದು ವಿಚಾರಣೆ ಪ್ರಾರಂಭವಾದರೂ ಇನ್ನೂ ಪೂರ್ಣಗೊಂಡಿಲ್ಲ. 527 ಸಾಕ್ಷಿಗಳ ಪೈಕಿ ಪ್ರಾಸಿಕ್ಯೂಷನ್ 119 ಅನ್ನು ವಿಚಾರಣೆಗೊಳಪಡಿಸಿದೆ. ಆದಾಗ್ಯೂ, ಉಳಿದ ಅಥವಾ ಕೈಬಿಡಲಾದ ಸಾಕ್ಷಿಗಳ ವಿವರಗಳೊಂದಿಗೆ ಪ್ರಾಸಿಕ್ಯೂಷನ್ ಇನ್ನೂ ಬರಬೇಕಾಗಿದೆ. ಅಲ್ಲದೆ, ಪ್ರಕರಣದ ತ್ವರಿತ ವಿಚಾರಣೆಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.

2018ರ ಮೇನಿಂದ ತಾನು ನ್ಯಾಯಾಂಗ ಬಂಧನದಲ್ಲಿದ್ದೇನೆ ಎಂದು ಪ್ರತಿಪಾದಿಸಿದ ಸುಜಿತ್, 527 ಸಾಕ್ಷಿಗಳಲ್ಲಿ ಸುಮಾರು 100 ಸಾಕ್ಷಿಗಳನ್ನು ಪ್ರಾಸಿಕ್ಯೂಷನ್ ವಿಚಾರಣೆ ನಡೆಸಿದೆ ಮತ್ತು ಶೀಘ್ರದಲ್ಲೇ ವಿಚಾರಣೆಯನ್ನು ಪೂರ್ಣಗೊಳಿಸುವ ಸಾಧ್ಯತೆಯಿಲ್ಲ ಎಂದು ಹೇಳಿದರು.

ಪತ್ರಕರ್ತೆ ಗೌರಿ ಲಂಕೇಶ್
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಜಾಮೀನು ಆದೇಶ ರದ್ದುಗೊಳಿಸುವಂತೆ 'ಸುಪ್ರೀಂ' ನೋಟಿಸ್

ಆರೋಪಿ ವಿರುದ್ಧ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ, ಮಹಾರಾಷ್ಟ್ರದ ಎಟಿಎಸ್ ಕಲಾ ಚೌಕಿ ಪೊಲೀಸ್ ಠಾಣೆ ಹಾಗೂ ದಾವಣಗೆರೆ ಲೇಔಟ್ ಠಾಣೆಯಲ್ಲಿ ತಲಾ ಒಂದು ಪ್ರಕರಣಗಳು ಹಾಗೂ ಉಡುಪಿ ಟೌನ್ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣಗಳು ದಾಖಲಾಗಿವೆ ಎಂದು ಪ್ರಾಸಿಕ್ಯೂಷನ್ ಜಾಮೀನಿಗೆ ವಿರೋಧ ವ್ಯಕ್ತಪಡಿಸಿದೆ.

ಸುಜಿತ್ ಅವರು ಸ್ಫೋಟಕ ವಸ್ತುಗಳ ಕಾಯ್ದೆ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಆರೋಪ ಎದುರಿಸುತ್ತಿದ್ದಾರೆ ಎಂದು ದಾಖಲೆಗಳು ಪ್ರಾಥಮಿಕವಾಗಿ ತೋರಿಸುತ್ತವೆ. ಈ ಪ್ರಕರಣದಲ್ಲಿ 102 ಸಾಕ್ಷಿಗಳನ್ನು ವಿಚಾರಣೆಗೆ ಒಳಪಡಿಸಿದ್ದಲ್ಲದೆ, ಅಷ್ಟೇ ಸಂಖ್ಯೆಯ ಸಾಕ್ಷಿಗಳನ್ನು ಕೈಬಿಡಲಾಗಿದೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ತಿಳಿಸಿದೆ.

ಪತ್ರಕರ್ತೆ ಗೌರಿ ಲಂಕೇಶ್
ಗೌರಿ ಲಂಕೇಶ್ ಹತ್ಯೆ ಪ್ರಕರಣ: ಆರೋಪಿ ಮೋಹನ್ ನಾಯಕ್‍ಗೆ ಹೈಕೋರ್ಟ್‍ನಿಂದ ಷರತ್ತುಬದ್ಧ ಜಾಮೀನು ಮಂಜೂರು

2017ರ ಸೆಪ್ಟೆಂಬರ್ 5 ರಂದು ನಡೆದ ಗೌರಿ ಲಂಕೇಶ್ ಹತ್ಯೆಯಲ್ಲಿ ಭಾಗಿಯಾಗಿರುವ 18 ಆರೋಪಿಗಳಲ್ಲಿ ಸುಜಿತ್ ಒಬ್ಬರಾಗಿದ್ದಾರೆ. ಸುಜಿತ್ 2010ರಿಂದ ಸಂಘಟಿತ ಅಪರಾಧ ಸಿಂಡಿಕೇಟ್‌ನ ಭಾಗವಾಗಿದ್ದಾರೆ ಮತ್ತು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ವೀರೇಂದ್ರ ತಾವಡೆ ಮೂಲಕ ಇತರ ಆರೋಪಿಗಳೊಂದಿಗೆ ಸಂಪರ್ಕಕ್ಕೆ ಬಂದಿದ್ದಾರೆ. ಸುಜಿತ್ ಆರೋಪಿಗಳಲ್ಲಿ ಒಬ್ಬನಾದ ನವೀನ್ ಕುಮಾರ್‌ನಿಂದ ಕಾರ್ಟ್ರಿಡ್ಜ್‌ಗಳನ್ನು ಪಡೆದಿದ್ದಾನೆ ಮತ್ತು ಗೌರಿ ಮತ್ತು ಇತರ ಗಣ್ಯ ವ್ಯಕ್ತಿಗಳನ್ನು ಹತ್ಯೆ ಮಾಡಲು ಅವುಗಳನ್ನು ಇಟ್ಟುಕೊಂಡಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com