ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ
ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಪ್ರಕರಣವನ್ನು ಅಪರಾಧ ತನಿಖಾ ಇಲಾಖೆಗೆ ವರ್ಗಾಯಿಸಲು ಆದೇಶಿಸಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಬಾಲಕಿ ತಾಯಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾಳೆ. ಮಾಜಿ ಸಿಎಂ ವಿರುದ್ಧ ಪೋಕ್ಸೊ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಾಜಿ ಸಿಎಂ ಯಡಿಯೂರಪ್ಪ
ಯಡಿಯೂರಪ್ಪ ವಿರುದ್ಧ ದೂರು,ಮಹಿಳೆ ಮಾನಸಿಕ ಅಸ್ವಸ್ಥೆ ಎಂಬ ಮಾಹಿತಿ ನಮಗೆ ಸಿಕ್ಕಿದ್ದು,ತನಿಖೆ ನಡೆಸುತ್ತೇವೆ: ಗೃಹ ಸಚಿವ ಡಾ. ಪರಮೇಶ್ವರ್

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಜಿ ಪರಮೇಶ್ವರ, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com