ದಕ್ಷಿಣ ಕನ್ನಡದಲ್ಲಿ ಬಿಜೆಪಿಗೆ ಮತ್ತಷ್ಟು ಬಲ: ಪಕ್ಷ ಸೇರಿದ ಹಿಂದುತ್ವ ನಾಯಕ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರ ವಿಲೀನ!

ಹಿಂದುತ್ವ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಮಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪುತ್ತಿಲ ಅವರು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡಿದ್ದಾರೆ.
ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆ
ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆTNIE

ಮಂಗಳೂರು: ಹಿಂದುತ್ವ ನಾಯಕ ಅರುಣ್ ಕುಮಾರ್ ಪುತ್ತಿಲ ಅವರು ಇಂದು ಮಂಗಳೂರಿನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಪುತ್ತಿಲ ಅವರು ಬಿಜೆಪಿಯೊಂದಿಗಿನ ಭಿನ್ನಾಭಿಪ್ರಾಯವನ್ನು ಬಗೆಹರಿಸಿಕೊಂಡಿದ್ದು, ಅವರನ್ನು ದಕ್ಷಿಣ ಕನ್ನಡ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪಕ್ಷದ ಶಾಲು ಹೊದಿಸಿ ಅಧಿಕೃತವಾಗಿ ಪಕ್ಷಕ್ಕೆ ಸ್ವಾಗತಿಸಿ ಪುತ್ತಿಲ ಪರಿವಾರದ ಸಂಘಟನೆಯ ಸದಸ್ಯರ ಸಮ್ಮುಖದಲ್ಲಿ ಪಕ್ಷದ ಸದಸ್ಯತ್ವವನ್ನು ಹಸ್ತಾಂತರಿಸಿದರು.

ನಂತರ ಮಾತನಾಡಿದ ಸತೀಶ್ ಕುಂಪಲ, ಭಿನ್ನಾಭಿಪ್ರಾಯಗಳಿರಬಹುದು ಇದನ್ನು ಪರಿಹರಿಸಲಾಗುತ್ತಿದೆ. ಪಕ್ಷದೊಳಗೆ ಏನೇ ಭಿನ್ನಾಭಿಪ್ರಾಯಗಳಿದ್ದರೂ ಬಗೆಹರಿಸಿಕೊಳ್ಳುತ್ತೇವೆ. ಇನ್ನು ಮುಂದೆ ಪುತಿಲ ಪರಿವಾರ ಇರುವುದಿಲ್ಲ. ನಾವೆಲ್ಲರೂ ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇವೆ. ಅಲ್ಲದೆ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿ ಮಾಡುವ ಗುರಿ ಇದೆ ಎಂದರು.

ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರ್ಪಡೆ
ಹಿಂದೂಗಳು ಮನೆಯಲ್ಲಿ ತಲ್ವಾರ್ ಇಟ್ಟುಕೊಳ್ಳಬೇಕು: ಹಿಂದೂ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಎಫ್ಐಆರ್

ಇದೇ ವೇಳೆ ಪುತ್ತಿಲ ಪರಿವಾರವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಲಾಗಿದ್ದು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸುವುದಾಗಿ ಅರುಣ್ ಕುಮಾರ್ ಪುತ್ತಿಲ ಹೇಳಿದರು. ನರೇಂದ್ರ ಮೋದಿ ಅವರು ಇನ್ನೂ 10 ವರ್ಷಗಳ ಕಾಲ ಪ್ರಧಾನಿಯಾಗಬೇಕು. ಎಲ್ಲಾ ಕಾರ್ಯಕರ್ತರು ಪಕ್ಷವನ್ನು ಬಲಪಡಿಸಲು ಸಹಾಯ ಮಾಡುತ್ತಾರೆ.

ನಾನು ಆರ್‌ಎಸ್‌ಎಸ್ ಕಾರ್ಯಕರ್ತ ಮತ್ತು ನಾನು ಕಳೆದ 35 ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಪಕ್ಷಕ್ಕೆ ಸೇರ್ಪಡೆಗೊಳ್ಳುವಾಗ ನಾನು ಯಾವುದೇ ಹುದ್ದೆಯನ್ನು ಬಯಸುವುದಿಲ್ಲ. ಬಿಜೆಪಿ, ನಾನು ಬೇಷರತ್ತಾಗಿ ಬಿಜೆಪಿಗೆ ಸೇರ್ಪಡೆಗೊಂಡಿದ್ದೇನೆ, ಪಕ್ಷದ ವರಿಷ್ಠರ ಸೂಚನೆಗಳನ್ನು ಪಾಲಿಸುತ್ತೇನೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com