ಲೋಕಸಭೆ ಚುನಾವಣೆ ಘೋಷಣೆ: ಬೆಳಗಾವಿಯಲ್ಲಿ ಗೋಣಿ ಚೀಲದಲ್ಲಿ ಸಾಗಿಸುತ್ತಿದ್ದ ಹಣ ವಶ!

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬೆಳಗಾವಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಳಗಾವಿ: ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಬೆಳಗಾವಿ ಪೊಲೀಸರು ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣವನ್ನು ವಶಕ್ಕೆ ಪಡೆದುಕೊಂಡಿದೆ.

ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ನೀತಿ ಸಂಹಿತೆ ಜಾರಿಯಾಗಿದ್ದು ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು ಹೈ ಅಲರ್ಟ್ ಆಗಿದ್ದು ದಾಖಲೆ ಇಲ್ಲದೆ ಗೋಣಿಚೀಲದಲ್ಲಿ ಸಾಗಿಸುತ್ತಿದ್ದ ಎರಡು ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ.

ಸಂಗ್ರಹ ಚಿತ್ರ
ಲೋಕಸಭೆ ಚುನಾವಣೆ ಜತೆಗೆ ಸುರಪುರ ಉಪ ಚುನಾವಣೆ ಘೋಷಣೆ; ಮೇ 7 ರಂದು ಮತದಾನ

ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಹಳ್ಳೂರು ಚೆಕ್ ಪೋಸ್ಟ್ ನಲ್ಲಿ ಪರಿಶೀಲನೆ ನಡೆಸಿದ ಪೊಲೀಸರು ಈ ವೇಳೆ ಎರಡು ಲಕ್ಷ ನಗದು ಹಾಗೂ ಒಂದು ಆಲ್ಟೊ ಕಾರನ್ನು ಜಪ್ತಿ ಮಾಡಿದ್ದು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com