ರಾಜ್ಯ ಸರ್ಕಾರ ಲೂಟಿಯಲ್ಲಿ ತೊಡಗಿದೆ, ಕಾಂಗ್ರೆಸ್ ಗೆ ಭ್ರಷ್ಟಾಚಾರವೇ ಆಕ್ಸಿಜನ್: ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿOnline desk

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಕಲಬುರಗಿಯಿಂದ ಲೋಕಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಜನತೆ ಸಂಕಷ್ಟದಲ್ಲಿ ಎದುರಿಸುತ್ತಿರುವಾಗ ಸರ್ಕಾರ ಲೂಟಿಯಲ್ಲಿ ತೊಡಗಿದೆ ಎಂದು ಮೋದಿ ಆರೋಪಿಸಿದ್ದಾರೆ.

ಜನತೆಗೆ ಕಾಂಗ್ರೆಸ್ ಬಗ್ಗೆ ಸತ್ಯ ಅರಿವಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲಿದ್ದಾರೆ ಎಂದು ಹೇಳಿರುವ ಮೋದಿ, ಕಾಂಗ್ರೆಸ್ ಎಷ್ಟೇ ಬಾರಿ ತಮ್ಮ ಉಡುಪುಗಳನ್ನು ಬದಲಾಯಿಸಿದರೂ ಅವರ ದುಷ್ಕೃತ್ಯಗಳು ಬದಲಾಗುವುದಿಲ್ಲ, ಈ ಬಗ್ಗೆ ಜಾಗೃತರಾಗಿರುವ ಕರ್ನಾಟಕದ ಮಂದಿ ಕಾಂಗ್ರೆಸ್ ನೆಡೆಗೆ ಆಕ್ರೋಶಗೊಂಡಿದ್ದಾರೆ ಎಂದು ಮೋದಿ ವಾಗ್ದಾಳಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ
ಕಲಬುರಗಿ ಲೋಕಸಭಾ ಕ್ಷೇತ್ರ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಳಿಯ ದೊಡ್ಮನಿ ಸ್ಪರ್ಧೆ?

ಹಲವು ಅವಕಾಶಗಳು ಸಿಕ್ಕಿದ್ದರೂ ಕಾಂಗ್ರೆಸ್ ಸುಧಾರಣೆ ಮಾಡಿಕೊಳ್ಳುವುದಕ್ಕೆ ತಯಾರಿಲ್ಲ. ಸಮಾಜಘಾತುಕ ಶಕ್ತಿಗಳಿಗೆ ರಾಜ್ಯದಲ್ಲಿ ಬಹಿರಂಗವಾಗಿಯೇ ಬೆಂಬಲ ಸಿಗುತ್ತಿದೆ. ಜನರ ಮನಸ್ಸಿನಲ್ಲಿ ಭಯ ಉಂಟುಮಾಡಲಾಗುತ್ತಿದೆ. ಜನರು ಆತಂಕಗೊಂಡಿರುವಾಗ ಕಾಂಗ್ರೆಸ್ ಲೂಟಿಯಲ್ಲಿ ನಿರತವಾಗಿದೆ. ಕಲ್ಲಿದ್ದಲಿನ ಕಪ್ಪುತನವನ್ನು ಹೋಗಲಾಡಿಸಬಹುದು ಆದರೆ ಭ್ರಷ್ಟಾಚಾರವನ್ನು ಕಾಂಗ್ರೆಸ್‌ನಿಂದ ಬೇರ್ಪಡಿಸಲು ಸಾಧ್ಯವಿಲ್ಲ. ಇಂತಹವರಿಗೆ ಭ್ರಷ್ಟಾಚಾರವೇ ಆಮ್ಲಜನಕ ಎಂದು ಮೋದಿ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ
ಮೈಸೂರು-ಚೆನ್ನೈ, ಕಲಬುರಗಿ-ಬೆಂಗಳೂರು ಸೇರಿ 10 ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಭಗವಂತ ಖೂಬಾ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ, ಗುಲ್ಬರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಉಮೇಶ ಜಾಧವ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com