7ನೇ ವೇತನ ಆಯೋಗದ ವರದಿ ಸಲ್ಲಿಕೆ: ಸಲಹೆ ಆಧರಿಸಿ ಸರ್ಕಾರ ತೀರ್ಮಾನ- ಸಿಎಂ ಭರವಸೆ!

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ವರದಿ ಸಲ್ಲಿಕೆ ಮಾಡಿದೆ.
7ನೇ ವೇತನ ಆಯೋಗದ ವರದಿ ಸಲ್ಲಿಕೆ
7ನೇ ವೇತನ ಆಯೋಗದ ವರದಿ ಸಲ್ಲಿಕೆ

ಬೆಂಗಳೂರು: ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ವರದಿ ಸಲ್ಲಿಕೆ ಮಾಡಿದೆ.

ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ರಚಿಸಲಾಗಿದ್ದ 7ನೇ ವೇತನ ಆಯೋಗದ ಅವಧಿ ಮಾರ್ಚ್‌ 15ಕ್ಕೆ ಮುಕ್ತಾಯವಾಗಿದ್ದು, ಶನಿವಾರ (ಮಾರ್ಚ್ 16) ಬೆಳಿಗ್ಗೆ ಈ ವರದಿ ಸಲ್ಲಿಕೆ ಮಾಡಲಾಗಿದೆ.

ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅವರು ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ವರದಿ ಸಲ್ಲಿಕೆ ಮಾಡಿದ್ದಾರೆ.

7ನೇ ವೇತನ ಆಯೋಗದ ವರದಿ ಸಲ್ಲಿಕೆ
ವರದಿ ಬಳಿಕ ಚರ್ಚಿಸಿ 7ನೇ ವೇತನ ಆಯೋಗ ಜಾರಿ ಕುರಿತು ತೀರ್ಮಾನ: ಸಿದ್ದರಾಮಯ್ಯ ಭರವಸೆ

ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿದ್ದು, ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯ ರಾಜ್ಯದ ಏಳನೇ ವೇತನ ಆಯೋಗದವರು ಇಂದು ತಮ್ಮನ್ನು ಭೇಟಿಯಾಗಿ ವರದಿ ಸಲ್ಲಿಸಿದರು. ಆಯೋಗದ ಸದಸ್ಯರಾದ ಪಿ.ಬಿ. ರಾಮಮೂರ್ತಿ, ಶ್ರೀಕಾಂತ್ ವನಹಳ್ಳಿ, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಹಣಕಾಸು ಇಲಾಖೆ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್, ವೇತನ ಆಯೋಗದ ಸದಸ್ಯ ಕಾರ್ಯದರ್ಶಿ ಹೆಫ್ಸಿಬಾರಾಣಿ ಕೊರ್ಲಪಾಟಿ ಉಪಸ್ಥಿತರಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಅಂತೆಯೇ ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು ಸಲ್ಲಿಸಿದ್ದು ಮೂಲವೇತನದ ಶೇಕಡ 27.5 ರಷ್ಟು ಹೆಚ್ಚಳ ಮಾಡಲು ಶಿಫಾರಸು ಮಾಡಿದೆ. ವರದಿಯನ್ನು ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ. ವೇತನ ಆಯೋಗದ ಅವಧಿಯನ್ನು ಮೂರು ತಿಂಗಳು ವಿಸ್ತರಿಸಲಾಗಿತ್ತು. ಈ ಅವಧಿಯು ಮಾರ್ಚ್ 15ರಂದು ಮುಕ್ತಾಯಗೊಂಡಿದೆ. ನಿನ್ನೆ ನಾನು ಮೈಸೂರಿನಲ್ಲಿದ್ದ ಕಾರಣ ವರದಿ ಸ್ವೀಕರಿಸಲು ಸಾಧ್ಯವಾಗಿರಲಿಲ್ಲ. ಅದಕ್ಕಾಗಿ ಇಂದು ವರದಿಯನ್ನು ಸ್ವೀಕರಿಸಲಾಗಿದೆ. ವರದಿಯಲ್ಲಿ ಕನಿಷ್ಠ ಮೂಲವೇತನವನ್ನು ರೂ.17,000 ದಿಂದ ರೂ.27,000 ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗಿದೆ. ಇದರೊಂದಿಗೆ ಇನ್ನೂ ಅನೇಕ ಶಿಫಾರಸುಗಳಿದ್ದು ವರದಿಯನ್ನು ಆರ್ಥಿಕ ಇಲಾಖೆಗೆ ನೀಡಲಾಗಿದೆ. ಆರ್ಥಿಕ ಇಲಾಖೆಯು ವರದಿಯನ್ನು ಕೂಲಂಕುಷವಾಗಿ ಅಧ್ಯಯನ ಮಾಡಿದ ನಂತರ ನೀಡುವ ಸಲಹೆಗಳ ಆಧಾರದಲ್ಲಿ ಸರ್ಕಾರ ತೀರ್ಮಾನ ಕೈಗೊಳ್ಳಲಿದೆ ಎಂದು ಭರವಸೆ ನೀಡಿದ್ದಾರೆ.

ಅಂದಹಾಗೆ ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್ ಅವರ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು 7ನೇ ವೇತನ ಆಯೋಗ ರಚಿಸಲಾಗಿತ್ತು. 6 ತಿಂಗಳು ಗಡುವು ನೀಡಲಾಗಿತ್ತು. ಈ ಅವಧಿಯಲ್ಲಿ ಸರ್ಕಾರ ಶೇ 17ರಷ್ಟು ಮಧ್ಯಂತರ ಪರಿಹಾರ ಘೋಷಿಸಿತ್ತು. ಅದಕ್ಕಾಗಿ ವಾರ್ಷಿಕ 10 ಸಾವಿರ ಕೋಟಿ ರೂ ಹೆಚ್ಚುವರಿ ನೀಡಲಾಗಿತ್ತು. ಅವಧಿಯನ್ನು 2023 ಮೇ 15ರಿಂದ ನವೆಂಬರ್‌ 18ರವರೆಗೆ ವಿಸ್ತರಿಸಲಾಗಿತ್ತು. ನಂತರ 2ನೇ ಬಾರಿ ಇದೇ ಮಾರ್ಚ್ 15ರವರೆಗೆ ವಿಸ್ತರಿಸಲಾಗಿತ್ತು. ಆಯೋಗದ ಅವಧಿ ಮುಕ್ತಾಯವಾಗಿದ್ದು, ಆಯೋಗ ಅಧ್ಯಕ್ಷ ಮತ್ತು ಸದಸ್ಯರು ಮುಖ್ಯಮಂತ್ರಿಗೆ ವರದಿ ಸಲ್ಲಿಸಿದ್ದಾರೆ.

ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಗೆ ಮುನ್ನ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡುವ ನಿರೀಕ್ಷೆ ಇದೆ’ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com