ರಾಜ್ಯ
Ramzan: ದಾವಣಗೆರೆಯಲ್ಲಿ ಪಾನಿಪೂರಿ ಸೇವಿಸಿ ಅಸ್ವಸ್ಥನಾಗಿದ್ದ ಬಾಲಕ ಚಿಕಿತ್ಸೆ ಫಲಿಸದೆ ಸಾವು
ರಂಜಾನ್ ಹಬ್ಬ ಹಿನ್ನೆಲೆ ಉಪವಾಸ ಬಳಿಕ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕನೋರ್ವ ಇಂದು ಮೃತಪಟ್ಟಿದ್ದಾನೆ.
ದಾವಣಗೆರೆ: ರಂಜಾನ್ ಹಬ್ಬ ಹಿನ್ನೆಲೆ ಉಪವಾಸ ಬಳಿಕ ಪಾನಿಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕನೋರ್ವ ಇಂದು ಮೃತಪಟ್ಟಿದ್ದಾನೆ.
ಹಜರತ್ ಬಿಲಾಲ್ ಎಂಬುವರ ಪುತ್ರ 6 ವರ್ಷದ ಇರ್ಫಾನ್ ಮೃತಪಟ್ಟಿದ್ದಾನೆ. ಕಳೆದ ಮಾರ್ಚ್ 15ರಂದು ದಾವಣಗೆರೆಯ ಹರಿಹರ ತಾಲೂಕಿನ ಮಲೆಬೆನ್ನೂರಿನ ಜಾಮೀಯಾ ಮಸೀದಿ ಬಳಿ ಮಕ್ಕಲು ಪಾನಿಪೂರಿ ಸೇವಿಸಿದ್ದರು.
ಪಾನಿಪೂರಿ ಸೇವಿಸಿದ್ದ ಮಕ್ಕಳಲ್ಲಿ ವಾಂತಿ, ಭೇದಿ, ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಪೈಕಿ ನಾಲ್ವರಿಗೆ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಇಂದು ಚಿಕಿತ್ಸೆ ಫಲಿಸದೆ ಬಾಲಕ ಇರ್ಫಾನ್ ಸಾವನ್ನಪ್ಪಿದ್ದಾನೆ.
ಘಟನೆ ಬಳಿಕ ಪಾನಿಪುರಿ ಅಂಗಡಿ ಮಾಲೀಕ ಪರಾರಿ ಆಗಿದ್ದಾನೆ. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ