ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವ ನನಗೆ ಬೇಡ: ಸಿಎಂ, ಡಿಸಿಎಂಗೆ ಅಕ್ಕಯ್ ಪದ್ಮಶಾಲಿ ಪತ್ರ

ಅಕ್ಕಯ್ ಪದ್ಮಶಾಲಿ
ಅಕ್ಕಯ್ ಪದ್ಮಶಾಲಿ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಸದಸ್ಯತ್ವದಿಂದ ತಮ್ಮನ್ನು ಕೈಬಿಡುವಂತೆ ಮನವಿ ಮಾಡಿ ಲೈಂಗಿಕ ಅಲ್ಪಸಂಖ್ಯಾತರ ಪರ ಹಕ್ಕುಗಳ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

“ಲೈಂಗಿಕ ಅಲ್ಪಸಂಖ್ಯಾತ ಸಮುದಾಯದ ಸಾಮಾಜಿಕ ಹಾಗೂ ರಾಜಕೀಯದ ವಿಚಾರದ ನನ್ನ ಹೋರಾಟವು ಪ್ರಪಂಚದಾದ್ಯಂತ ಪಸರಿಸಿದೆ. ನಮ್ಮ ಸಮುದಾಯದ ಸಂಪೂರ್ಣ ಶ್ರೇಯೋಭಿವೃದ್ಧಿಗಾಗಿ ಹಾಗೂ ಸಾಮಾಜಿಕ ಬಹಿಷ್ಕಾರದ ವಿರುದ್ಧ ನನ್ನ ಹೋರಾಟ ಮುಂದುವರಿಸಲಿದ್ದೇನೆ” ಎಂದು ಅಕ್ಕಯ್ ಪದ್ಮಶಾಲಿ ತಿಳಿಸಿದ್ದಾರೆ.

ಅಕ್ಕಯ್ ಪದ್ಮಶಾಲಿ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಪುರುಷೋತ್ತ ಬಿಳಿಮಲೆ, ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಮುಕುಂದರಾಜ್ ನೇಮಕ

ತಾವುಗಳು ಇದರ ಬಗ್ಗೆ ಗಮನಹರಿಸಿ ನನ್ನನ್ನು ಮುಂಬರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸದಸ್ಯರನ್ನಾಗಿ ಅಥವಾ ರಾಜ್ಯಸಭೆಯ ಸದಸ್ಯರನ್ನಾಗಿಸಿ, ಶಾಸನಸಭೆಯ ಭಾಗವಾಗಿ ನಮ್ಮ ಸಮುದಾಯದ ರಾಜಕೀಯ ಪ್ರಾತಿನಿಧ್ಯತೆಯನ್ನು ‘ಸರ್ವ ಜನಾಂಗದ ಶಾಂತಿಯ ತೋಟದ’ ನಾಡಿನಲ್ಲಿ ಸಾಕ್ಷಿಯಾಗಬೇಕಾಗಿರುವ ವಾತಾವರಣ ನಿರ್ಮಾಣವಾಗಿದೆ. ಇದರ ಬಗ್ಗೆ ತಾವುಗಳು ವಿಶೇಷ ಕಾಳಜಿವಹಿಸಿ ಕ್ರಮವಹಿಸಬೇಕಾಗಿ ವಿನಂತಿಸುತ್ತಿದ್ದೇನೆ ಎಂದು ಕೂಡ ಇದೇ ಪತ್ರದಲ್ಲಿ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಮಾಡುವ ಮುನ್ನ 19 ವಿವಿಧ ಅಕಾಡೆಮಿ ಹಾಗೂ ಪ್ರಾಧಿಕಾರಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಿ ನಿನ್ನೆ ಆದೇಶ ಹೊರಡಿಸಿತ್ತು.

ಕರ್ನಾಟಕ ಸಾಹಿತ್ಯ ಅಕಾಡೆಮಿಗೆ ಹಿರಿಯ ಸಾಹಿತಿ ಎನ್ ಎನ್ ಮುಕುಂದರಾಜ್ ಅವರನ್ನು ಅಧ್ಯಕ್ಷರಾಗಿ ನೇಮಕಗೊಳಿಸಿದರೆ, ಅಕ್ಕಯ್ ಪದ್ಮಶಾಲಿ ಅವರನ್ನೂ ಒಳಗೊಂಡಂತೆ, ಸಿದ್ದಪ್ಪ ಹೊನಕಲ್, ಅರ್ಜುನ ಗೋಳಸಂಗಿ, ಡಾ. ಹೆಚ್. ಜಯಪ್ರಕಾಶ್ ಶೆಟ್ಟಿ, ಡಾ. ಚಂದ್ರಕಲಾ ಬಿದರಿ, ಡಾ. ಚಿಲಕ್ ರಾಗಿ, ಡಾ. ಗಣೇಶ್, ಶ್ರೀಮತಿ ಸುಮಾ ಸತೀಶ್, ಹೆಚ್ ಆರ್ ಸುಜಾತ, ಶ್ರೀಮತಿ ಪಿ ಚಂದ್ರಿಕಾ, ಪ್ರಕಾಶ್ ರಾಜ್ ಮೇಹು, ಮಲ್ಲಿಕಾರ್ಜುನ ಮಾನ್ಪಡೆ, ಅಜಮೀರ್ ನಂದಾಪುರ, ಚಂದ್ರಕಿರಣ, ಮಹದೇವ ಬಸರಕೋಡ ಅವರನ್ನು ಸದಸ್ಯರನ್ನಾಗಿ ನೇಮಕಗೊಳಿಸಿ, ರಾಜ್ಯ ಸರ್ಕಾರ ಶನಿವಾರ ಆದೇಶಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com