Loksabha Election 2024: ಕರ್ನಾಟಕದಲ್ಲಿ 2 ಹಂತದ ಮತದಾನ, ಇಲ್ಲಿದೆ ಸಂಪೂರ್ಣ ವಿವರ!

ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ಲೋಕಸಭೆ ಚುನಾವಣೆ 2024
ಲೋಕಸಭೆ ಚುನಾವಣೆ 2024

ಬೆಂಗಳೂರು: ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದ್ದು, ಕರ್ನಾಟಕದಲ್ಲಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ಚುನಾವಣೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದ್ದು, ದೇಶಾದ್ಯಂತ ಒಟ್ಟು 543 ಕ್ಷೇತ್ರಗಳಿಗೆ ಒಟ್ಟು 7 ಹಂತಗಳಲ್ಲಿ ಸಂಸತ್‌ನ ಕೆಳಮನೆಗೆ ಚುನಾವಣೆ ನಡೆಯಲಿದೆ. ಅದರಂತೆ ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಮತದಾನ ನಡೆಯಲಿದೆ.

ಕರ್ನಾಟಕದಲ್ಲಿ ಒಟ್ಟು 2 ಹಂತದಲ್ಲಿ ಮತದಾನ ನಡೆಯಲಿದ್ದು, ಈ ಪೈಕಿ ಮೊದಲ ಹಂತದಲ್ಲಿ ಏಪ್ರಿಲ್‌ 26 ರಂದು 14 ಕ್ಷೇತ್ರಗಳಿಗೆ ಮತದಾನ ನಡೆದರೆ, ಎರಡನೇ ಹಂತದಲ್ಲಿ ಮೇ 07 ರಂದು 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಜೂನ್‌ 04ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಲೋಕಸಭೆ ಚುನಾವಣೆ 2024
ಲೋಕಸಭೆ ಚುನಾವಣೆ ಜತೆಗೆ ಸುರಪುರ ಉಪ ಚುನಾವಣೆ ಘೋಷಣೆ; ಮೇ 7 ರಂದು ಮತದಾನ

ಮೊದಲ ಹಂತ

ಮೊದಲ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಮಾರ್ಚ್‌ 28 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 04 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 05 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 08 ಕೊನೆಯ ದಿನವಾಗಿರುತ್ತದೆ. ಮೊದಲ ಹಂತದ ಮತದಾನ ಏಪ್ರಿಲ್‌ 26 ರಂದು ನಡೆಯಲಿದ್ದು, ಫಲಿತಾಂಶ ಜೂನ್‌ 04 ರಂದು ಬರಲಿದೆ.

ಉಡುಪಿ - ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ (ಎಸ್‌ಸಿ), ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ (ಎಸ್‌ಸಿ), ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ (ಎಸ್‌ಸಿ) ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.

ಲೋಕಸಭೆ ಚುನಾವಣೆ 2024
ಲೋಕಸಭೆ ಚುನಾವಣೆ 2024: ಚುನಾವಣಾ ಆಯೋಗ ಪತ್ರಿಕಾ ಗೋಷ್ಠಿ; ಐದು ಪ್ರಮುಖ ಅಂಶಗಳು!

2ನೇ ಹಂತ

ಎರಡನೇ ಹಂತದ ಚುನಾವಣಾ ಪ್ರಕ್ರಿಯೆಗೆ ಅಧಿಸೂಚನೆ ಏಪ್ರಿಲ್‌ 12 ರಂದು ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 20 ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 22 ಕೊನೆಯ ದಿನವಾಗಿರುತ್ತದೆ. ಎರಡನೇ ಹಂತದ ಮತದಾನ ಮೇ 07 ರಂದು ನಡೆಯಲಿದ್ದು, ಫಲಿತಾಂಶ ಜೂನ್‌ 4ರಂದು ಬರಲಿದೆ. ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ (ಎಸ್‌ಸಿ), ಗುಲ್ಬರ್ಗಾ (ಎಸ್‌ಸಿ), ರಾಯಚೂರು (ಎಸ್‌ಟಿ), ಬೀದರ್, ಕೊಪ್ಪಳ, ಬಳ್ಳಾರಿ (ಎಸ್‌ಟಿ), ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಸೇರಿ ಒಟ್ಟು 14 ಕ್ಷೇತ್ರಗಳಿಗೆ ಈ ಹಂತದಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕದ ಐದು ಸ್ಥಾನಗಳು ಪರಿಶಿಷ್ಟ ಜಾತಿಗಳಿಗೆ ಮತ್ತು ಎರಡು ಪರಿಶಿಷ್ಟ ಪಂಗಡಗಳಿಗೆ ಮೀಸಲಾಗಿದ್ದು, ರಾಜ್ಯದಲ್ಲಿ 58,834 ಮತಗಟ್ಟೆಗಳಲ್ಲಿ 53.7 ಮಿಲಿಯನ್ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಅವರು 18-19 ವಯಸ್ಸಿನ ಬ್ರಾಕೆಟ್‌ನಲ್ಲಿ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಜನರನ್ನು ಒಳಗೊಂಡಿರುತ್ತಾರೆ.

ಲೋಕಸಭೆ ಚುನಾವಣೆ 2024
'ಲೋಕ'ಸಮರಕ್ಕೆ ಮುಹೂರ್ತ ಫಿಕ್ಸ್: ಏಪ್ರಿಲ್ 19 ರಿಂದ 7 ಹಂತಗಳಲ್ಲಿ ಚುನಾವಣೆ, ರಾಜ್ಯದಲ್ಲಿ ಏ.26, ಮೇ 7 ರಂದು ಮತದಾನ

ಬದಲಾದ ರಾಜಕೀಯ ಸನ್ನಿವೇಶ; ಜೆಡಿಎಸ್-ಬಿಜೆಪಿ ಮೈತ್ರಿ

ಸೆಪ್ಟೆಂಬರ್‌ನಲ್ಲಿ, ಜನತಾ ದಳ (ಜಾತ್ಯತೀತ) ಅಥವಾ ಜೆಡಿಎಸ್ ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳ ನಂತರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮೈತ್ರಿ ಮಾಡಿಕೊಂಡಿವೆ. ಆದರೆ ಇದೇ ಜೆಡಿಎಸ್ 2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿತ್ತು.

ಕರ್ನಾಟಕದಲ್ಲಿ 2019 ರಲ್ಲೂ ಲೋಕಸಭಾ ಚುನಾವಣೆಗಳು ಏಪ್ರಿಲ್ 18 ಮತ್ತು ಏಪ್ರಿಲ್ 23 ರಂದು ಎರಡು ಹಂತಗಳಲ್ಲಿ ನಡೆದಿದ್ದವು. ಮಂಡ್ಯದಲ್ಲಿ ಅತಿ ಹೆಚ್ಚು 80.24% ಮತ್ತು ಬೆಂಗಳೂರು ದಕ್ಷಿಣದಲ್ಲಿ ಅತಿ ಕಡಿಮೆ (53.48%) ಮತದಾನವಾಗಿತ್ತು. 2019 ರಲ್ಲಿ ರಾಜ್ಯದಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ 28 ಲೋಕಸಭಾ ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದುಕೊಂಡಿತು. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿದ್ದವು. ಉಳಿದ ಸ್ಥಾನವನ್ನು ಬಿಜೆಪಿ ಬೆಂಬಲಿತ ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com