ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಹಲ್ಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ

ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸರು ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಅಂಗಡಿ ಬಳಿ ನಿಂತಿರುವ ಆರೋಪಿಗಳು.
ಅಂಗಡಿ ಬಳಿ ನಿಂತಿರುವ ಆರೋಪಿಗಳು.

ಬೆಂಗಳೂರು: ಮೊಬೈಲ್ ಶಾಪ್ ನಲ್ಲಿ ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರುಗೇಟ್ ಪೊಲೀಸರು ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ನಗರತ್​ಪೇಟೆಯಲ್ಲಿರುವ ಮೊಬೈಲ್ ಶಾಪ್​ನಲ್ಲಿ ಯುವಕ ಹುನುಮಾನ್​ ಚಾಲಿಸಾ ಹಾಕಿ, ಜೋರು ಸೌಂಡ್​ ಇಟ್ಟಿದ್ದರು. ಈ ವೇಳೆ ಅಂಗಡಿಗೆ ಬಂದ ಆರು ಜನ ಯುವಕರು ಮಸೀದಿಯಲ್ಲಿ ಪ್ರಾರ್ಥನೆ ಮಾಡುವಾಗ ಜೋರು ಸೌಂಡ್ ಇಟ್ಟು ಹಾಡು ಹಾಕಬೇಡ ಎಂದಿದ್ದರು. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ನಂತರ ಆರು ಜನ ಯುವಕರು ಅಂಗಡಿಯಲ್ಲಿದ್ದ ಯುವಕ ಮುಖೇಶ್​ ಅವರ ಕೊರಳ ಪಟ್ಟಿ ಹಿಡಿದು, ಅಂಗಡಿಯಿಂದ ಹೊರಗೆ ಎಳೆದೊಯ್ದು ಹಲ್ಲೆ ಮಾಡಿದ್ದಾರೆ.

ಅಂಗಡಿ ಬಳಿ ನಿಂತಿರುವ ಆರೋಪಿಗಳು.
ಹನುಮಾನ್ ಚಾಲೀಸಾ ಹಾಕಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆದಿಲ್ಲ: ಪೊಲೀಸರ ಸ್ಪಷ್ಟನೆ

​ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಇನ್ನು ಗಾಯಗೊಂಡ ಮುಖೇಶ್​ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದು, ದೂರು ಬೆನ್ನಲ್ಲೇ ನಿನ್ನೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು. ಇಂದು ಮತ್ತಿಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. ಬಂಧಿತರನ್ನು ಸುಲೇಮಾನ್, ಶಹನವಾಜ್, ರೋಹಿತ್, ದ್ಯಾನೀಶ್, ತರುಣ್ ಎಂದು ಗುರ್ತಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com