KRS, ಕಬಿನಿ ಜಲಾಶಯಗಳಲ್ಲಿ ಕುಡಿಯಲು ಸಾಕಾಗುವಷ್ಟು ನೀರಿದೆ: ಸಿಎಂ ಸಿದ್ದರಾಮಯ್ಯ

ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ಕ್ರಮವಾಗಿ 11.02 ಟಿಎಂಸಿ ಅಡಿ ಮತ್ತು 9.02 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಕುಡಿಯುವ ಉದ್ದೇಶಕ್ಕೆ ಸಾಕಷ್ಟು ನೀರಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.
ಸಿಎಂ ಸಿದ್ದರಾಮಯ್ಯ.
ಸಿಎಂ ಸಿದ್ದರಾಮಯ್ಯ.
Updated on

ಬೆಂಗಳೂರು: ಕೆಆರ್‌ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ಕ್ರಮವಾಗಿ 11.02 ಟಿಎಂಸಿ ಅಡಿ ಮತ್ತು 9.02 ಟಿಎಂಸಿ ಅಡಿ ನೀರು ಸಂಗ್ರಹವಿದ್ದು, ಕುಡಿಯುವ ಉದ್ದೇಶಕ್ಕೆ ಸಾಕಷ್ಟು ನೀರಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು.

ನೀರಿನ ಕೊರತೆ ನೀಗಿಸುವ ಕುರಿತು ನಗರಾಭಿವೃದ್ಧಿ ಇಲಾಖೆ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳೊಂದಿಗೆ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಹದೇವಪುರ, ಕೆಆರ್‌ ಪುರಂ, ಆರ್‌ಆರ್‌ ನಗರ, ಬೊಮ್ಮನಹಳ್ಳಿ ಮುಂತಾದ ಬಿಬಿಎಂಪಿ ಹೊರವಲಯಗಳಲ್ಲಿ ನೀರು ಸರಬರಾಜು ಮಾಡುವ ಕೊಳವೆಬಾವಿಗಳು ವಿಫಲವಾಗಿರುವುದೇ ಕುಡಿಯುವ ನೀರಿನ ಕೊರತೆಗೆ ಕಾರಣ ಎಂದು ಹೇಳಿದರು.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸರ್ಕಾರದಿಂದ ಕೊರೆದಿರುವ 14,000 ಕೊಳವೆಬಾವಿಗಳ ಪೈಕಿ 6,900 ಬತ್ತಿಹೋಗಿವೆ. ಬಿಬಿಎಂಪಿ ವ್ಯಾಪ್ತಿಗೆ ಹೊಸದಾಗಿ ಸೇರಿಸಿರುವ 110 ಹಳ್ಳಿಗಳ ಪೈಕಿ 55 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಉಂಟಾಗಿದೆ. ಸಮಸ್ಯೆ ಉಲ್ಬಣಿಸದಂತೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ.
ಬೆಂಗಳೂರು: ಬೃಹತ್ ಖರೀದಿದಾರರಿಗೆ ಟ್ಯಾಂಕರ್‌ಗಳ ಆದ್ಯತೆ; ಇಂಡಿಪೆಂಡೆಂಟ್ ಹೌಸ್ ಗಳಿಗೆ ಸಿಗುತ್ತಿಲ್ಲ ನೀರು!

ಕೊಳೆಗೇರಿಗಳು, ಎತ್ತರದ ಪ್ರದೇಶಗಳು ಮತ್ತು ಬಿಬಿಎಂಪಿಗೆ ಹೊಸದಾಗಿ ಸೇರಿರುವ 110 ಹಳ್ಳಿಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ. ಕೊಳವೆಬಾವಿಗಳನ್ನು ಅವಲಂಬಿಸಿರುವ ಪ್ರದೇಶಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಕೆಗೆ ಸೂಚಿಸಲಾಗಿದೆ. ಕರ್ನಾಟಕ ಹಾಲು ಮಹಾಮಂಡಳದ (ಕೆಎಂಎಫ್‌) ಟ್ಯಾಂಕರ್‌ಗಳು ಮತ್ತು ಖಾಸಗಿ ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆದು ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ. ಕೆಆರ್ ಎಸ್ ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 ಎಂಎಲ್‌ಡಿ ಹೆಚ್ಚುವರಿ ನೀರು ಸಿಗಲಿದೆ. ಇದು 110 ಹಳ್ಳಿಗಳಿಗೆ ಸರಬರಾಜು ಆಗಲಿದೆ.

ಸಿಎಂ ಸಿದ್ದರಾಮಯ್ಯ.
ಬತ್ತುತ್ತಿರುವ ಕೊಳವೆ ಬಾವಿಗಳು, ಸಿಗದ ನೀರು: ಟ್ಯಾಂಕರ್ ನೀರು ಪೂರೈಕೆಗೂ ಬಂತು ಕುತ್ತು!

ದಿನಕ್ಕೆ 2,600 ಮಿಲಿಯನ್ ಲೀಟರ್ (ಎಂಎಲ್‌ಡಿ) ನೀರಿನ ಅವಶ್ಯಕತೆ ಇರುವುದರಿಂದ, ಪ್ರಸ್ತುತ ಬಿಡಬ್ಲ್ಯುಎಸ್‌ಎಸ್‌ಬಿ ಕಾವೇರಿ ಮಾರ್ಗಗಳ ಮೂಲಕ 1,470 ಎಂಎಲ್‌ಡಿ ಮತ್ತು ಬೋರ್‌ವೆಲ್‌ಗಳ ಮೂಲಕ 650 ಎಂಎಲ್‌ಡಿ ಪೂರೈಸಲಾಗುತ್ತಿದೆ. ಅದಾಗ್ಯೂ 500 MLD ನೀರು ಕೊರತೆ ಇದೆ. ಈ ಕೊರತೆ ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ನೀರಿನ ದುರುಪಯೋಗ ತಡೆಗಟ್ಟಲು ಸೂಚಿಸಲಾಗಿದ್ದು, ಈ ಬಗ್ಗೆ 143 ಟಾಸ್ಕ್ ಫೋರ್ಸ್ ಗಳು ಕಾರ್ಯ ನಿರ್ವಹಿಸುತ್ತಿವೆ. ಈ ಪ್ರಮಾಣ ಹೆಚ್ಚಿಸಲು ಸೂಚನೆ ನೀಡಲಾಗಿದೆ. ಕೇಂದ್ರೀಯ ಸಹಾಯವಾಣಿ ಸಂಖ್ಯೆ 1916 ಹಾಗೂ ವಾಟ್ಸಾಪ್ ಮೂಲಕ ದೂರು ದಾಖಲಿಸಬಹುದು. ಈ ದೂರುಗಳನ್ನು ಕೂಡಲೇ ಬಗೆಹರಿಸಬೇಕು ಎಂದು ಸೂಚಿಸಲಾಗಿದೆ. ಬೆಂಗಳೂರು ನಗರದ ಪ್ರಮುಖ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸುವ ಮೂಲಕ ಅಂತರ್ಜಲ ಮಟ್ಟ ಹೆಚ್ಚಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com