ಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ

ಮೇಘನಾ ಫುಡ್ಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಐಟಿ ದಾಳಿ
ಐಟಿ ದಾಳಿ
Updated on

ಬೆಂಗಳೂರು: ಮೇಘನಾ ಫುಡ್ಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ನಗರದ ಕೋರಮಂಗಲ, ಇಂದಿರಾನಗರ, ಜಯನಗರ ಸೇರಿ ಹಲವೆಡೆ ಇರುವ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಐಟಿ ದಾಳಿ
ಐಟಿ, ಇಡಿ ದಾಳಿ ಬಳಿಕ 30 ಸಂಸ್ಥೆಗಳು ಬಿಜೆಪಿಗೆ 335 ಕೋಟಿ ರೂ. ದೇಣಿಗೆ ನೀಡಿವೆ: ಕಾಂಗ್ರೆಸ್

ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ನಡೆಸುತ್ತಿರುವ ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ಭಾರೀ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳ ತಂಡ ನಗರದಲ್ಲಿರುವ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com