'ದ್ವೇಷ ಭಾಷಣ': ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರ್ ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ‌ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.
ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬೆಂಗಳೂರಿನ ನಗರ್ತಪೇಟೆಯಲ್ಲಿರುವ ಮೊಬೈಲ್ ಅಂಗಡಿ‌ ಮಾಲೀಕ ಮುಖೇಶ್ ಎಂಬುವರ ಮೇಲೆ ನಡೆದಿದ್ದ ಹಲ್ಲೆ ಖಂಡಿಸಿ ಬಿಜೆಪಿ ನಡೆಸಿದ ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಆರೋಪ ಹಿನ್ನೆಲೆಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗದ ಸೂಚನೆ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಳೆದ ಮಂಗಳವಾರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತ್ತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ತೇಜಸ್ವಿ ಸೂರ್ಯ ಅವರು, ಧಾರ್ಮಿ ಕ ಭಾವನೆ ಕೆರಳಿಸುವಂತೆ ದ್ವೇಷ ಭಾಷಣ‌ ಮಾಡಿದ್ದು ಸಮಾಜದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡಿದ್ದಾರೆ. ಹೀಗಾಗಿ ತೇಜಸ್ವಿ ಸೂರ್ಯ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಚಿಕ್ಕಪೇಟೆ ನಿವಾಸಿಯೊಬ್ಬರು ಚುನಾವಣಾಧಿಕಾರಿಗೆ ದೂರು ನೀಡಿದ್ದರು.

ಸಂಸದ ತೇಜಸ್ವಿ ಸೂರ್ಯ
'ಹನುಮಾನ್ ಚಾಲೀಸಾ' ಕೇಸ್: ನಗರತ್ ಪೇಟೆಯಲ್ಲಿ ಪರಿಸ್ಥಿತಿ ಉದ್ವಿಗ್ನ, ತೇಜಸ್ವಿ ಸೂರ್ಯ ಸೇರಿ ಹಲವು ಹಿಂದೂ ಪರ ಕಾರ್ಯಕರ್ತರು ವಶಕ್ಕೆ

ದೂರಿಗೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯಗೆ ನೋಟಿಸ್ ನೀಡಲಾಗುವುದು. ಅಗತ್ಯಬಿದ್ದರೆ ಹೆಚ್ಚಿನ ವಿಚಾರಣೆಗೆ ಕರೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com