ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಸಭೆ: ಸಚಿವೆ ಹೆಬ್ಬಾಳ್ಕರ್ ವಿರುದ್ಧ ಎಫ್‌ಐಆರ್ ದಾಖಲು ಸಾಧ್ಯತೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರ ಜತೆಗೆ ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಈ ಬಗ್ಗೆ ಎಫ್ಐಆರ್ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಲಕ್ಷ್ಮೀ ಹೆಬ್ಬಾಳ್ಕರ್
ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ನೀತಿ ಸಂಹಿತೆ ಉಲ್ಲಂಘಿಸಿ ಅಂಗನವಾಡಿ ಕಾರ್ಯಕರ್ತೆಯರ ಜತೆಗೆ ಸಭೆ ನಡೆಸಿದ್ದಾರೆಂದು ಹೇಳಲಾಗುತ್ತಿದ್ದು, ಈ ಬಗ್ಗೆ ಎಫ್ಐಆರ್ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಳಗಾವಿಯ ಕುವೆಂಪು ನಗರದಲ್ಲಿರುವ ಗೃಹ ಕಚೇರಿಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ಕರೆಸಿಕೊಂಡು ಸಚಿವೆ ಸಭೆ ನಡೆಸಿದ್ದಾರೆಂದ ಹೇಳಲಾಗುತ್ತಿದ್ದು, ಈ ಬಗ್ಗೆ ಮಾಹಿತಿ ತಿಳಿದ ಚುನಾವಣಾ ಅಧಿಕಾರಿಗಳು, ಪ್ಲೇಯಿಂಗ್ ಸ್ಕ್ವಾಡ್ ಸಿಬ್ಬಂದಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆದ ಬಗ್ಗೆ ಸಾಕ್ಷಿಗಾಗಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು, ಸಭೆ ಆಯೋಜಿಸಿದ್ದರ ವಿರುದ್ಧ ಕ್ರಮ ಕೈಗೊಳ್ಳಳಾಗುವುದು ಎಂದು ಹೇಳಿದ್ದಾರೆ.

ಲಕ್ಷ್ಮೀ ಹೆಬ್ಬಾಳ್ಕರ್
ನಾನೇನು ಹೆಚ್ಚು ಓದಿಲ್ಲ ರೈತನ ಮಗಳು, 10ನೇ ಕ್ಲಾಸ್ ಇದ್ದಾಗ ನಮ್ಮಪ್ಪ ಮದ್ವೆ ಮಾಡಿಕೊಟ್ಬಿಟ್ಟ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಚುನಾವಣಾ ಅಧಿಕಾರಿಗಳು, ಪ್ಲೇಯಿಂಗ್ ಸ್ಕ್ವಾಡ್ ಸಿಬ್ಬಂದಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ. ಸಭೆ ನಡೆದ ಬಗ್ಗೆ ಸಾಕ್ಷಿಗಾಗಿ ವಿಡಿಯೋ ಚಿತ್ರೀಕರಣ ಮಾಡಲಾಗಿದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದ್ದು, ನ್ಯಾಯಾಲಯದಿಂದ ಅನುಮತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಯಾವುದೇ ಸಭೆ ಆಯೋಜಿಸಿಲ್ಲ. ಅಂಗನವಾಡಿ ಕಾರ್ಯಕರ್ತೆಯರು ಈಗಾಗಲೇ ಹೆಚ್ಚಿನ ಕೆಲಸದ ಒತ್ತಡವನ್ನು ಎದುರಿಸುತ್ತಿದ್ದು, ಇದೀಗ ಬೂತ್ ಮಟ್ಟದ ಅಧಿಕಾರಿಗಳ (ಬಿಎಲ್‌ಒ) ಜವಾಬ್ದಾರಿಯನ್ನೂ ವಹಿಸಿಕೊಳ್ಳುವಂತೆ ಸೂಚಿಸಲಾಗಿದೆ. ಹೀಗಾಗಿ ತಮ್ಮ ಸಮಸ್ಯೆಗಳನ್ನು ಚರ್ಚಿಸಲು ನನ್ನನ್ನು ಭೇಟಿಯಾಗಲು ಬಂದಿದ್ದರು. ಅವರ ಕರ್ತವ್ಯವನ್ನು ನಿಭಾಯಿಸುವಂತೆ ಅವರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ದೂರಿನ ಕುರಿತ ಪ್ರಶ್ನೆಗೆ ಅವರು, ಚುನಾವಣೆ ವೇಳೆ ದೂರು ನೀಡುವುದು ಸರ್ವೆ ಸಾಮಾನ್ಯ. ದೂರು ಕೊಡಲಿ, ಓರ್ವ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ನಾನು ನಿಯಮ ಉಲ್ಲಂಘಿಸಿಲ್ಲ. ನಾನು ದೇಶದ ಕಾನೂನಿಗೆ ಗೌರವ ಕೊಡುತ್ತೇನೆ. ನನಗೆ ಇದು 5ನೇ ಚುನಾವಣೆ. ನನಗೆ ಚುನಾವಣೆ ಎದುರಿಸುವುದು ಹೇಗೆ ಎಂಬುದು ಗೊತ್ತು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com