I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ; ಕಾಂಗ್ರೆಸ್ ಗೆ ಮುಜುಗರ!

ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ.
ಮೇಕೆದಾಟು
ಮೇಕೆದಾಟು

ಬೆಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಗೆದ್ದು ಅಧಿಕಾರಕ್ಕೆ ಬಂದರೆ ಕರ್ನಾಟಕದಲ್ಲಿ ಕಾವೇರಿ ನದಿಗೆ ನಿರ್ಮಿಸಲು ಯೋಜಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವುದು ರಾಜ್ಯಕಾಂಗ್ರೆಸ್ ಮುಖಂಡರಿಗೆ ತೀವ್ರ ಇರಿಸು ಮುರಿಸು ಉಂಟು ಮಾಡಿದೆ.

ಐಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ ಪಕ್ಷವಾಗಿದ್ದು, ಡಿಎಂಕೆ ಪ್ರಣಾಳಿಕೆಯಿಂದ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗುವ ಸಾಧ್ಯತೆ ಇದೆ. ಅದಲ್ಲದೇ ಡಿಎಂಕೆ ಪ್ರಣಾಳಿಕೆ ಐಎನ್‌ಡಿಐಎ ಒಕ್ಕೂಟದಲ್ಲಿ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ. ಡಿಕೆ ಶಿವಕುಮಾರ್‌ ನೇತೃತ್ವದಲ್ಲಿ ಚುನಾವಣೆಗೂ ಮುನ್ನ ನಮ್ಮ ನೀರು ನಮ್ಮ ಹಕ್ಕು ಎಂದು ದೊಡ್ಡ ಪಾದಯಾತ್ರೆಯನ್ನೇ ಕಾಂಗ್ರೆಸ್‌ ನಡೆಸಿತ್ತು. ಆದರೆ, ಈಗ ಕಾಂಗ್ರೆಸ್‌ನ ಮಿತ್ರಪಕ್ಷವೇ ಮೇಕೆದಾಟು ಡ್ಯಾಂಗೆ ತಡೆ ತರುತ್ತೇವೆ ಎಂದಿರುವುದು ಬಿಜೆಪಿಗೆ ಕರ್ನಾಟಕದಲ್ಲಿ ಅಸ್ತ್ರ ಸಿಕ್ಕಂತಾಗಿದೆ.

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I.A ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿಕೆ ಶಿವಕುಮಾರ್ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಮೇಕೆದಾಟು
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸರ್ಕಾರ ಸಿದ್ಧತೆ: ಫೆ.1ಕ್ಕೆ ಸಿಡಬ್ಲ್ಯುಎಂಎ ಪೂರ್ವಭಾವಿ ಸಭೆ

ಅಲ್ಲದೇ, ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್​ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಆರ್ ಅಶೋಕ್ ಕಿಡಿಕಾರಿದ್ದಾರೆ. ಮೇಕೆದಾಟು ಯೋಜನೆ ಜಾರಿಗಾಗಿ ವಿಧಾನಸಭಾ ಚುನಾವಣೆಗೂ ಮುನ್ನ ಬೃಹತ್ ರ್ಯಾಲಿಯನ್ನು ಕೈಗೊಂಡಿತ್ತು. ಆದರೆ ಸದ್ಯ ಡಿಎಂಕೆ ಪಕ್ಷದ ನಡೆ ಭಾರೀ ಚರ್ಚೆಗೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com