ಜಾಹೀರಾತುಗಳಿಗೆ ಪೂರ್ವಾನುಮತಿ ಕಡ್ಡಾಯ; ಪ್ರಭಾವಿ ವ್ಯಕ್ತಿಗಳ ಪೋಸ್ಟ್ ಗಳ ಮೇಲೆ ಚುನಾವಣಾ ಆಯೋಗ ಕಣ್ಣು!

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದರ ನಡುವಲಲೇ ಅಕ್ರಮಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಇದರ ನಡುವಲಲೇ ಅಕ್ರಮಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮತದಾರರಿಗೆ ಯಾವುದೇ ಸ್ವರೂಪದಲ್ಲಿ ಆಮಿಷ ಒಡ್ಡಿ ಮತಗಳನ್ನು ಸೆಳೆಯಲು ಅಭ್ಯರ್ಥಿಗಳು ಯತ್ನಿಸುತ್ತಿದ್ದು, ಇದರ ಚುನಾವಣಾ ಆಯೋಗ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಆದರೂ ಕೆಲವು ರಾಜಕಾರಣಿಗಳು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಜನರನ್ನು ಸೆಳೆಯಲು ಪ್ರಯತ್ನ ನಡೆಸುವ ಸಾಧ್ಯತೆಗಳಿದ್ದು, ಅದರ ಮೇಲೂ ಆಯೋಗ ಕಣ್ಣಿಟ್ಟಿದೆ.

ವ್ಯಕ್ತಿ ಪ್ರಭಾವಿಯಾಗಿದ್ದರೆ, ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಫಾಲೋವರ್ಸ್ ಹೊಂದಿದ್ದರೆ, ಅವರ ಪೋಸ್ಟ್ ಗಳ ಮೇಲೆ ಚುನಾವಣಾ ಆಯೋಗ ಕಣ್ಣಿಟ್ಟಿದೆ.

ಯಾವುದೇ ವ್ಯಕ್ತಿ ದ್ವೇಷಪೂರಿತ ಭಾಷಣ, ನಿರೂಪಣೆಗಳನ್ನು ನೀಡುವುದು ಅಥವಾ ಮತದಾರರ ಮೇಲೆ ಪ್ರಭಾವ ಬೀರುವ ಯಾವುದೇ ಹೇಳಿಕೆಗಳನ್ನು ನೀಡಿದರ ಮೇಲೆ ಕ್ರಮ ಕೈಗೊಳ್ಳಲು ಆಯೋಗ ಮುಂದಾಗಿದೆ.

ಸಂಗ್ರಹ ಚಿತ್ರ
ಶೋಭಾ ಕರಂದ್ಲಾಜೆ ವಿರುದ್ಧ ಡಿಎಂಕೆ ದೂರು: ಸೂಕ್ತ ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ಈಗೀಗಲೇ ಆಯೋಗವು ರಾಜ್ಯ ಮಟ್ಟದಲ್ಲಿ 300 ಸಾಮಾಜಿಕ ಮಾಧ್ಯಮ ಪ್ರಭಾವಿಗಳ ಪಟ್ಟಿಯನ್ನು ಮಾಡಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಇನ್ನೂ ಪಟ್ಟಿಯನ್ನು ಸಿದ್ಧಪಡಿಸುತ್ತಿವೆ ಎಂದು ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿಯ ಐಟಿ ಮತ್ತು ಮಾಧ್ಯಮದ ವಿಶೇಷ ಅಧಿಕಾರಿ ಎವಿ ಸೂರ್ಯಸೇನ್ ಅವರು ಹೇಳಿದ್ದಾರೆ.

ಬುಧವಾರ ನಗರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಹಾತ್ಮಗಾಂಧಿ ಮಾಧ್ಯಮ ಕೇಂದ್ರದಲ್ಲಿ ಮುಖ್ಯ ಚುನಾವಣಾಧಿಕಾರಿ ಕಚೇರಿ ಹಾಗೂ ವಾರ್ತಾ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಲೋಕಸಭಾ ಚುನಾವಣೆ ಅಂಗವಾಗಿ ಮಾಧ್ಯಮ ಪ್ರತಿನಿಧಿಗಳಿಗೆ ಹಾಗೂ ಜಿಲ್ಲಾ ವಾರ್ತಾಧಿಕಾರಿಗಳಿಗೆ ಚುನಾವಣೆ ಕುರಿತ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಮಾಧ್ಯಮಗಳಲ್ಲಿ ಬಿತ್ತರಗೊಳ್ಳುವ ರಾಜಕೀಯ ಜಾಹೀರಾತುಗಳಿಗೆ ಮಾಧ್ಯಮ ಪ್ರಮಾಣೀಕರಣ ಮೇಲುಸ್ತುವಾರಿ ಸಮಿತಿ(ಎಂಸಿಎಂಸಿ)ಯಿಂದ ಪೂರ್ವಾನುಮತಿ ಕಡ್ಡಾಯ ಮಾಡಲಾಗಿದೆ. ಸಾಮಾಜಿಕ ಜಾಲತಾಣ, ಫೇಸ್‍ಬುಕ್, ಟ್ವಿಟರ್ ಗಳಲ್ಲಿ ಚುನಾವಣಾ ಜಾಹೀರಾತು ಕುರಿತು ನಿಗಾವಹಿಸಲಾಗಿದೆ. ಸುಳ್ಳು ಸುದ್ದಿ ಜನರಿಗೆ ದಿಕ್ಕು ತಪ್ಪಿಸುವ ವಿವಿಧ ಪೋಸ್ಟ್ ಗಳ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಜಕೀಯ ವ್ಯಕ್ತಿಗಳು ತಮ್ಮ ಅಧಿಕೃತ ಫೇಸ್‍ಬುಕ್, ಟ್ವಿಟರ್ ಖಾತೆ ಹೊರತಾಗಿ ಇತರೆಡೆ ಬಿಂಬಿಸುವ ಜಾಹೀರಾತುಗಳ ಬಗೆಗೆ ಕ್ರಮವಹಿಸಲಾಗುವುದು. ಅಭ್ಯರ್ಥಿಗಳು, ರಾಜಕೀಯ ಪಕ್ಷದವರು, ಅಧಿಕಾರಿಗಳು ಚುನಾವಣಾ ಸಂದರ್ಭದಲ್ಲಿ ನಡೆದುಕೊಳ್ಳಬಹುದಾದ ರೀತಿಯ ಬಗ್ಗೆ ಪ್ರತ್ಯೇಕ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ

ಸಿಇಒ ಕಚೇರಿಯ ಮತ್ತೊಬ್ಬ ಅಧಿಕಾರ ಮಾತನಾಡಿ, ಈ ಹಿಂದೆ, ವಾಟ್ಸಾಪ್ ಮತ್ತು ಫೇಸ್‌ಬುಕ್ ನಿರ್ಣಾಯಕ ಪಾತ್ರ ವಹಿಸಿದ್ದವು. ಈಗ, ಎಕ್ಸ್ (ಟ್ವಿಟರ್) ಮತ್ತು ರೀಲ್‌ಗಳನ್ನು ಪಟ್ಟಿಗೆ ಸೇರಿಸಲಾಗಿದೆ. ಜನರು ಈಗ ರೀಲ್‌ಗಳನ್ನು ವೀಕ್ಷಿಸಲು ಸಾಕಷ್ಟು ಸಮಯವನ್ನು ಮೊಬೈಲ್ ನಲ್ಲಿ ವ್ಯಯಿಸುತ್ತಿದ್ದಾರೆ. ಹೀಗಾಗಿ ಇದರ ಮೇಲೂ ಗಮನ ಹರಿಸಬೇಕಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಪಾವತಿಸಿದ ಸಂದೇಶಗಳ ಮೇಲೆ ನಿಗಾ ಇಡುವುದರ ಜೊತೆಗೆ, ಇತರ ರೀತಿಯ ಪೋಸ್ಟ್‌ಗಳನ್ನು ಕೂಡ ಪರಿಶೀಲಿಸಲಾಗುತ್ತಿದೆ. ನಗರ ಪ್ರದೇಶಗಳಲ್ಲಷ್ಟೇ ಅಲ್ಲ, ಜಿಲ್ಲಾ ಮಟ್ಟದಲ್ಲೂ ಬ್ಲಾಗರ್‌ಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಅವರನ್ನೂ ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಯಾರಾದರೂ ತಪ್ಪಿತಸ್ಥರೆಂದು ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹನುಮಾನ್ ಚಾಲೀಸಾ ವಿವಾರದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅಧಿಕಾರಿಗಳು, ದ್ವೇಷ, ಧಾರ್ಮಿಕ ಮತ್ತು ಪ್ರಚೋದನಕಾರಿ ಭಾಷಣಗಳ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.

ಯುಟ್ಯೂಬ್‌ನಲ್ಲಿ ಮಾತನಾಡುವುದನ್ನು ನಾವು ತಡೆಯಲು ಸಾಧ್ಯವಿಲ್ಲ, ಆದರೆ ವಿಷಯವನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ. ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಿಗೆ ದರ ಕಾರ್ಡ್ ಈಗಾಗಲೇ ಇದೆ. ಯಾವುದೇ ಜಾಹೀರಾತು ವಿಷಯವನ್ನು ಪೋಸ್ಟ್ ಮಾಡುವ ಮೊದಲು CEO ಕಚೇರಿಯಿಂದ ಅನುಮತಿಯನ್ನು ತೆಗೆದುಕೊಳ್ಳಬೇಕಾಗುತ್ತದೆ. ಸಂವಿಧಾನದ 19 ನೇ ವಿಧಿಯು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಮತಿಸುತ್ತದೆ, ಆದರೆ, ಇದರಲ್ಲಿ ನಾಗರೀಕರನಾಗಿ ಇರುವ ಜವಾಬ್ದಾರಿಗಳು ಮತ್ತು ನಿರ್ಬಂಧಗಳನ್ನೂ ತಿಳಿಸಲಾಗಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com