ಬೆಂಗಳೂರು: ಕೌಟುಂಬಿಕ ಕಲಹ; ಎರಡು ವರ್ಷದ ಮಗು ಕೊಂದು ಮಹಿಳೆ ಆತ್ಮಹತ್ಯೆ ಯತ್ನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 24 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಕೊಂದು ತಾನು ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸೀಗೆಹಳ್ಳಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 24 ವರ್ಷದ ಮಹಿಳೆಯೊಬ್ಬಳು ತನ್ನ 2 ವರ್ಷದ ಮಗುವನ್ನು ಕೊಂದು ತಾನು ಕೂಡ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಸೀಗೆಹಳ್ಳಿಯಲ್ಲಿ ನಡೆದಿದೆ.

ಪತಿ ಮತ್ತು ಅತ್ತೆ ಜೊತೆ ಆಗಾಗ್ಗೆ ಜಗಳವಾಡುತ್ತಿದ್ದ ಚಿನ್ನಾ ಎಂಬಾಕೆ ತನ್ನ ಎರಡು ವರ್ಷದ ಮಗು ಶ್ರೀಕಿತಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮಾರ್ಚ್ 17 ರಂದು ಕೆಆರ್ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಘಟನೆ ನಡೆದಿದ್ದು, ಗೃಹಿಣಿ ಚಿನ್ನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾರ್ಚ್ 17 ರಂದು ಬೆಳಿಗ್ಗೆ ಲಕ್ಷ್ಮಿನಾರಾಯಣ (31) ದೇವಾಸ್ಥಾನದಿಂದ ವಾಪಸಾದ ನಂತರ ತನ್ನ 2 ವರ್ಷದ ಮಗಳನ್ನು ಹೆಂಡತಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಲಕ್ಷ್ಮೀನಾರಾಯಣ್ ಕೂಡಲೇ ನೆರೆಹೊರೆಯವರಿಗೆ ವಿಷಯ ತಿಳಿಸಿದ್ದು, ತಮ್ಮ ಹೆಂಡತಿ ಮತ್ತು ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು, ಪರೀಕ್ಷಿಸಿದ ವೈದ್ಯರು ಮಗಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ
ಬೆಂಗಳೂರು: ಪ್ರೇಯಸಿಯೊಂದಿಗೆ ಬ್ರೇಕಪ್; ಮನನೊಂದು 20 ವರ್ಷದ ಯುವಕ ಆತ್ಮಹತ್ಯೆ

ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಚಿನ್ನಾ ತನ್ನ ಮಗುವನ್ನು ತಲೆದಿಂಬಿನಿಂದ ಉಸಿರುಕಟ್ಟಿಸಿ ಕೊಂದು ನಂತರ ಚಾಕುವಿನಿಂದ ಆಕೆಯ ಕುತ್ತಿಗೆ ಮತ್ತು ಮಣಿಕಟ್ಟನ್ನು ಕತ್ತರಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಚಿನ್ನಾ ಮತ್ತು ಲಕ್ಷ್ಮಿನಾರಾಯಣ ಅವರ ಕುಟುಂಬ ಸದಸ್ಯರೊಂದಿಗೆ ಕೌಟುಂಬಿಕ ಸಮಸ್ಯೆಗಳಿದ್ದವು ಎನ್ನಲಾಗಿದೆ. ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿ ಡಿಸೆಂಬರ್‌ನಲ್ಲಿ ಆಂಧ್ರಪ್ರದೇಶದ ಚಿತ್ತೂರಿನಿಂದ ಬೆಂಗಳೂರಿಗೆ ತೆರಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com