ಮಾಜಿ ಸಂಸದರ ವಿರುದ್ಧ ನಕಲಿ ಪ್ರಮಾಣ ಪತ್ರ ಸೃಷ್ಟಿಸಿದ ಆರೋಪ: ಇಬ್ಬರ ವಿರುದ್ಧ ದೂರು ದಾಖಲು

ತಮ್ಮ ವಿರುದ್ಧ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಎಂದು ಆರೋಪಿಸಿರುವ ಮಾಜಿ ಸಂಸದ ಬಿಎನ್ ಚಂದ್ರಪ್ಪ ಇಬ್ಬರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಿ ಎನ್ ಚಂದ್ರಪ್ಪ
ಬಿ ಎನ್ ಚಂದ್ರಪ್ಪ

ಬೆಂಗಳೂರು: ತಮ್ಮ ವಿರುದ್ಧ ಶಾಲಾ ದಾಖಲಾತಿ ಮತ್ತು ಜಾತಿ ಪ್ರಮಾಣ ಪತ್ರ ನಕಲು ಮಾಡಿ ಷಡ್ಯಂತ್ರ ನಡೆಸಲಾಗಿದೆ ಎಂದು ಎಂದು ಆರೋಪಿಸಿರುವ ಮಾಜಿ ಸಂಸದ ಬಿಎನ್ ಚಂದ್ರಪ್ಪ ಇಬ್ಬರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಚಿತ್ರದುರ್ಗದ ಕೆಇಬಿ ಹೌಸ್ ಗೋಪಾಲಪುರ ರಸ್ತೆಯ ರಾಜಪ್ಪ ಮತ್ತು ಚಳ್ಳಕೆರೆ ತಾಲೂಕು ಅಬ್ಬೇನಹಳ್ಳಿಯ ಬಾಬು ಅವರ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಜಾತಿ ಪ್ರಮಾಣ ಪತ್ರ ಮತ್ತು ಶಾಲಾ ದಾಖಲೆಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಲಾಗಿದೆ,

2014ರ ಲೋಕಸಭೆ ಚುನಾವಣೆಯಲ್ಲಿ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಚಂದ್ರಪ್ಪ ಜಯಗಳಿಸಿದ್ದರು. 2019 ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಈ ಬಾರಿ ಅವರು ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ಮಾಡಿಕೊಂಡಿದ್ದು, ಅವರು ಚುನಾವಣೆಗೆ ಸ್ಪರ್ಧಿಸಿದಂತೆ ತಡೆಯಲು ಅವರ ಜಾತಿಯನ್ನು ಆದಿ ಕರ್ನಾಟಕದ ಬದಲಾಗಿ ಮಾಸಾಳ ಎಂದು ಬಿಂಬಿಸಿ ಶಾಲಾ ವರ್ಗಾವಣೆ ಪತ್ರದ ನಕಲಿ ಪ್ರಮಾಣ ಪತ್ರಗಳನ್ನು ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.

ಬಿ ಎನ್ ಚಂದ್ರಪ್ಪ
ನಕಲಿ ಜಾತಿ ಪ್ರಮಾಣ ಪತ್ರ ವಿರುದ್ಧ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಕೆಲವು ವಿರೋಧಿಗಳು ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಪರಿಶಿಷ್ಟ ಜಾತಿಯಲ್ಲಿ ಒಡಕು ಮೂಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಚಂದ್ರಪ್ಪ ದೂರು ನೀಡಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಿಸಿಕೊಂಡಿರುವ ಹಲಸೂರು ಗೇಟ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com