ಮೇಕೆದಾಟು ಕಟ್ಟಲೆಂದೇ ನೀರಾವರಿ ಸಚಿವನಾಗಿದ್ದೇನೆ, ಕಟ್ಟುವುದು ಗ್ಯಾರಂಟಿ: ಡಿಕೆ.ಶಿವಕುಮಾರ್

ತಮಿಳುನಾಡು ಏನಾದರೂ ಮಾಡಿಕೊಳ್ಳಲಿ. ಮೇಕೆದಾಟು ಅಣೆಕಟ್ಟು ಕಟ್ಟಲೆಂದೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಅಣೆಕಟ್ಟು ಕಟ್ಟುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ತಮಿಳುನಾಡು ಏನಾದರೂ ಮಾಡಿಕೊಳ್ಳಲಿ. ಮೇಕೆದಾಟು ಅಣೆಕಟ್ಟು ಕಟ್ಟಲೆಂದೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿಯನ್ನು ತೆಗೆದುಕೊಂಡಿದ್ದೇನೆ. ಅಣೆಕಟ್ಟು ಕಟ್ಟುವುದು ಖಚಿತ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಹೇಳಿದರು.

ಡಿಎಂಕೆ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳಿರುವ ಬಗ್ಗೆ ಸುದ್ದಿಗಾರೊಂದಿಗೆ ಮಾತನಾಡಿ ಪ್ರತಿಕ್ರಿಯಿಸಿದ ಅವರು, ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ.ಅವರು ನಮಗೆ ನ್ಯಾಯ ಕೊಡಲೇಬೇಕು ಎಂದು ಹೇಳಿದರು.

ಮೇಕೆದಾಟು ವಿಚಾರದಲ್ಲಿ ಕೋರ್ಟ್​ನಲ್ಲೂ ನಮಗೆ ನ್ಯಾಯ ಸಿಗುತ್ತದೆ.‌ ಅದು ಡಿಎಂಕೆ ಪ್ರಣಾಳಿಕೆ. ಇಂಡಿಯಾ ಮೈತ್ರಿಕೂಟದ ಪ್ರಣಾಳಿಕೆಯಲ್ಲ. ಅದು ಅವರ ಪಕ್ಷದ ಪ್ರಣಾಳಿಕೆ. ಅದು ಅವರ ರಾಜಕೀಯ ಬಯಕೆ ಅಷ್ಟೇ ಎಂದು ತಿಳಿಸಿದರು.

ಡಿಕೆ.ಶಿವಕುಮಾರ್
I.N.D.I.A ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಗೆ ತಡೆ: ಪ್ರಣಾಳಿಕೆಯಲ್ಲಿ ಡಿಎಂಕೆ ಘೋಷಣೆ; ಕಾಂಗ್ರೆಸ್ ಗೆ ಮುಜುಗರ!

ಮೇಕೆದಾಟು ಯೋಜನೆ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಅವರಿಗೂ ಒಳ್ಳೆಯದು ಆಗಲಿ ಎಂದು ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com