ಅರ್ಹ ಪ್ರಾಸಿಕ್ಯೂಷನ್‌ ನಿರ್ದೇಶಕರ ನೇಮಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಪ್ರಾಸಿಕ್ಯೂಷನ್ ನಿರ್ದೇಶನಾಲಯದ ಪ್ರಭಾರ ನಿರ್ದೇಶಕ ಎಚ್.ಕೆ.ಜಗದೀಶ್ ಅವರನ್ನು ಪದಚ್ಯುತಗೊಳಿಸಿ ಆದೇಶಿಸಿದ ಹೈಕೋರ್ಟ್, 8 ವಾರಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ಒಪ್ಪಿಗೆಯೊಂದಿಗೆ ಅರ್ಹ ಅಭ್ಯರ್ಥಿಯನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಪ್ರಾಸಿಕ್ಯೂಷನ್ ನಿರ್ದೇಶನಾಲಯದ ಪ್ರಭಾರ ನಿರ್ದೇಶಕ ಎಚ್.ಕೆ.ಜಗದೀಶ್ ಅವರನ್ನು ಪದಚ್ಯುತಗೊಳಿಸಿ ಆದೇಶಿಸಿದ ಹೈಕೋರ್ಟ್, 8 ವಾರಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳ ಒಪ್ಪಿಗೆಯೊಂದಿಗೆ ಅರ್ಹ ಅಭ್ಯರ್ಥಿಯನ್ನು ನೇಮಕ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಜಗದೀಶ್ ಅವರು ಸರ್ಕಾರದ ಕಾನೂನು ಸಚಿವಾಲಯದ ಅಧಿಕಾರಿಯಾಗಿರುವುದರಿಂದ ಕ್ವೋ ವಾರೆಂಟೊ ಹೊರಡಿಸಿ ಅವರನ್ನು ಪದಚ್ಯುತಗೊಳಿಸಲು ನಿರ್ದೇಶನ ನೀಡಬೇಕು ಎಂದು ಕೋರಿ ವಕೀಲೆ ಸುಧಾ ಕಟ್ವಾ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಅಂಗೀಕರಿಸಿತು.

ಕರ್ನಾಟಕ ಹೈಕೋರ್ಟ್
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಒಂದೇ ಜೈಲಿನಲ್ಲಿ ಇರಿಸಲು ಹೈಕೋರ್ಟ್ ನಕಾರ, ಉತ್ತಮ ವಿಡಿಯೊ ಕಾನ್ಫರೆನ್ಸಿಂಗ್ ವ್ಯವಸ್ಥೆ ಒದಗಿಸುವಂತೆ ಸೂಚನೆ

ವಿಚಾರಣೆ ವೇಳೆ 2019ರ ಆಗಸ್ಟ್‌ನಿಂದ 6 ತಿಂಗಳ ಕಾಲ ಹೆಚ್ಚುವರಿ ಪ್ರಭಾರ ನೀಡಲಾಗಿದ್ದ ಜಗದೀಶ್ ಅವರನ್ನು ಯಾವುದೇ ಸಕಾರಣವಿಲ್ಲದೆ ಪ್ರಭಾರಿ ಹುದ್ದೆಯಲ್ಲಿ ಮುಂದುವರೆಸಿರುವ ಸರ್ಕಾರದ ಕಾರ್ಯವೈಖರಿಯನ್ನು ಖಂಡಿಸಿತು.

‘ಈ ಹುದ್ದೆಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳ ಸಮ್ಮತಿ ಅಗತ್ಯ. ಆದರೆ, ಈ ಪ್ರಕರಣದಲ್ಲಿ ಅವರ ಸಮ್ಮತಿ ಪಡೆದಿಲ್ಲ. ಅರ್ಹತೆ ಇಲ್ಲದ ವ್ಯಕ್ತಿಯನ್ನು ಪ್ರಭಾರ ಹುದ್ದೆಗೆ ನೇಮಕ ಮಾಡುವಂತಿಲ್ಲ. ಅಂತೆಯೇ, ಪ್ರಭಾರ ನಿರ್ದೇಶಕ ಒಂದು ವರ್ಷದ ನಂತರ ಮುಂದುವರಿಯುವಂತಿಲ್ಲ. ಆದರೆ, ಹಾಲಿ ನೇಮಕಾತಿಯು 2019ರಿಂದಲೂ ಮುಂದುವರಿಯುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ. ಹೀಗಾಗಿ, ತಕ್ಷಣದಿಂದ ಜಾರಿಗೆ ಬರುವಂತೆ ಪ್ರಭಾರ ನಿರ್ದೇಶಕರನ್ನು ಹುದ್ದೆಯಿಂದ ವಜಾಗೊಳಿಸಲಾಗಿದೆ ಎಂದು ನ್ಯಾಯಪೀಠ ಹೇಳಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com