402 PSI ಹುದ್ದೆಗಳ ಲಿಖಿತ ಪರೀಕ್ಷೆ ಮುಂದೂಡಿಕೆ

ಮೇ 8 ರಂದು ನಿಗದಿಯಾಗಿದ್ದ ಪರೀಕ್ಷೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಿಕೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು : ಮೇ 8 ರಂದು ನಿಗದಿಯಾಗಿದ್ದ 402 PSI(Police Sub Inspector) ಹುದ್ದೆಗಳ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದೆ.

402 PSI ಹುದ್ದೆಗಳ ನೇಮಕಾತಿಗೆ ಮೇ 8 ರಂದು ನಡೆಸಲು ಉದ್ದೇಶಿಸಿದ್ದ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಸದ್ಯದಲ್ಲೇ ತಿಳಿಸಲಾಗುತ್ತದೆ ಎಂದು ತಿಳಿಸಿದೆ.

ಸರ್ಕಾರದ ಆದೇಶ ಸಂಖ್ಯೆ ಒಇ 22 ಪಿಇಐ 2024 ದಿನಾಂಕ 22-02-2024 ರನ್ವಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಸಿವಿಲ್) (ಪುರುಷ & ಮಹಿಳಾ) ಹಾಗೂ ಸೇವೆಯಲ್ಲಿರುವವರು (ಮಿಕ್ಕುಳಿದ) ಮತು ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶಿಸಲಾಗಿತ್ತು. ಅದರಂತೆ ಮೇ8ರಂದು ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ, ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಮುಂದಿನ ಪರೀಕ್ಷಾ ದಿನಾಂಕವನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ0u5 ಪ್ರಕಟಿಸಲಾಗುವುದು ಎಂದು ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com