ಲೋಕಸಭೆ ಚುನಾವಣೆ: ರಾಜ್ಯದಲ್ಲಿ 9.64 ಕೋಟಿ ರೂ. ನಗದು ವಶ

ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬಂದ ನಂತರ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರPTI
Updated on

ಬೆಂಗಳೂರು: ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿಗೆ ಬಂದ ನಂತರ ಯಾವುದೇ ಅಕ್ರಮ ನಡೆಯದಂತೆ ಕ್ರಮ ಕೈಗೊಂಡಿರುವ ಚುನಾವಣಾಧಿಕಾರಿಗಳು, ಪ್ರತಿಯೊಂದು ವಾಹನದ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 2.75 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಶುಕ್ರವಾರ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಇಂದಿನವರೆಗೆ ಒಟ್ಟು 9.64 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ.

ಸಾಂದರ್ಭಿಕ ಚಿತ್ರ
ಲೋಕಸಭೆ ಚುನಾವಣೆ: ಕರ್ನಾಟಕದಲ್ಲಿ ಭರ್ಜರಿ ಬೇಟೆ; 5.85 ಕೋಟಿ ರೂ. ನಗದು, 21.48 ಕೋಟಿ ರೂ. ಮೌಲ್ಯದ ಮದ್ಯ ವಶ!

ಚುನಾವಣಾ ಆಯೋಗದ ಅಧಿಕಾರಿಗಳ ಪ್ರಕಾರ, ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಫ್ಲೈಯಿಂಗ್ ಸ್ಕ್ವಾಡ್, ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 9.64 ಕೋಟಿ ರೂಪಾಯಿ ನಗದು, 15.6 ಲಕ್ಷ ರೂಪಾಯಿ ಉಚಿತ ಕೊಡುಗೆಗಳು, 7.20 ಲಕ್ಷ ಲೀಟರ್ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ,53 ಲಕ್ಷಕ್ಕೂ ಅಧಿಕ ಮೌಲ್ಯದ 52.12 ಕೆಜಿ ಮಾದಕ ವಸ್ತುಗಳು ಮತ್ತು 36 ಕೋಟಿ ರೂ.ಗೂ ಅಧಿಕ ಮೌಲ್ಯದ ಅಮೂಲ್ಯ ಲೋಹಗಳನ್ನು ಸಹ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ಲೋಹ ಮತ್ತು ಉಚಿತ ವಸ್ತುಗಳನ್ನು ವಶಪಡಿಸಿಕೊಂಡ ಪ್ರಕರಣಗಳಿಗೆ ಸಂಬಂಧಿಸಿದಂತೆ 402 ಎಫ್‌ಐಆರ್‌ಗಳನ್ನು ಅಧಿಕಾರಿಗಳು ದಾಖಲಿಸಿದ್ದಾರೆ ಮತ್ತು 65,432 ಶಸ್ತ್ರಾಸ್ತ್ರಗಳನ್ನು ವಾಪಸ್ ಪಡೆಯಲಾಗಿದೆ. 831 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ, ಎಂಟು ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಪಡಿಸಲಾಗಿದೆ ಮತ್ತು 4,136 ಜನರನ್ನು ವಶಕ್ಕೆ ಪಡೆಯಲಾಗಿದೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ನಾಯಕನಹಟ್ಟಿ ಕ್ರಾಸ್ ಚೆಕ್‌ಪೋಸ್ಟ್‌ನಲ್ಲಿ 38 ಲಕ್ಷ ರೂ. ನಗದು, ಗುಲ್ಬರ್ಗ ಕ್ಷೇತ್ರದ ಹಿರೋಳ್ಳಿ ಚೆಕ್‌ಪೋಸ್ಟ್‌ನಲ್ಲಿ ರೂ.12.68 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com