2026ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿ: BWSSB

ಜಲ ಸಂರಕ್ಷಣೆ, ಸಂಸ್ಕರಿತ ನೀರು ಬಳಕೆ ಮತ್ತು ಅಂತರ್ಜಲ ಹೆಚ್ಚಳಕ್ಕೆ ಮೂರು ಹಂತದ ಕಾರ್ಯತಂತ್ರವನ್ನು ಘೋಷಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 2026 ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದೆ.
ಟ್ಯಾಂಕರ್ ಮೂಲಕ ಜನರಿಗೆ ನೀರು ಪೂರೈಕೆ ಮಾಡುತ್ತಿರುವ ಬಿಡಬ್ಲ್ಯೂಎಸ್ಎಸ್ಬಿ
ಟ್ಯಾಂಕರ್ ಮೂಲಕ ಜನರಿಗೆ ನೀರು ಪೂರೈಕೆ ಮಾಡುತ್ತಿರುವ ಬಿಡಬ್ಲ್ಯೂಎಸ್ಎಸ್ಬಿ

ಬೆಂಗಳೂರು: ಜಲ ಸಂರಕ್ಷಣೆ, ಸಂಸ್ಕರಿತ ನೀರು ಬಳಕೆ ಮತ್ತು ಅಂತರ್ಜಲ ಹೆಚ್ಚಳಕ್ಕೆ ಮೂರು ಹಂತದ ಕಾರ್ಯತಂತ್ರವನ್ನು ಘೋಷಿಸಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, 2026 ರ ಜುಲೈ ವೇಳೆಗೆ ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿಯಾಗಿದೆ ಎಂದು ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾತ್ ಮನೋಹರ್ ಅವರು, ಬೆಂಗಳೂರಿನಲ್ಲಿ ನೀರಿನ ಕೊರತೆ ನೀಗಿಸಲು ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಪ್ರತಿ ನಲ್ಲಿಗಳಿಗೂ ಏರೇಟರ್ ಅಳವಡಿಕೆ, ಶುದ್ದೀಕರಿಸಿದ ನೀರಿನ ಬಳಕೆ ಹೆಚ್ಚಿಸುವುದು, ಮರುಬಳಕೆ ನೀರನ್ನು ಕೆರೆಗೆ ತುಂಬಿಸುವ ಕೆಲಸ ಮಾಡಲಾಗುವುದು. ಈ ಎಲ್ಲಾ ಕ್ರಮದಿಂದ 2026ರ ಜುಲೈ 1ರಷ್ಟರಲ್ಲಿ ಬೆಂಗಳೂರಿನ ಅಂತರ್ಜಲ ವೃದ್ಧಿ ಮಾಡುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಈ ಅಭಿಯಾನದಲ್ಲಿ ನೀರಿನ ಉಳಿತಾಯ ಹಾಗೂ ಅದರಿಂದಾಗುವ ಗಳಿಕೆಯ ಬಗ್ಗೆಯೂ ಸಾರ್ವಜನಿಕರಿಗೆ ತಿಳಿವಳಿಕೆ ನೀಡಲಿದ್ದೇವೆ. ನೀರಿನ ಉಳಿತಾಯ, ಸಂಸ್ಕರಿಸಿದ ನೀರಿನ ಬಳಕೆ ಹಾಗೂ ಮಳೆ ನೀರು ಮರುಪೂರಣದ ಮೂರು ಪ್ರಮುಖ ಯೋಜನೆಯಡಿ ಈ ಅಭಿಯಾನವನ್ನು ಪ್ರಾರಂಭಿಸಿದ್ದೇವೆ.

ಟ್ಯಾಂಕರ್ ಮೂಲಕ ಜನರಿಗೆ ನೀರು ಪೂರೈಕೆ ಮಾಡುತ್ತಿರುವ ಬಿಡಬ್ಲ್ಯೂಎಸ್ಎಸ್ಬಿ
ಬೆಂಗಳೂರು ನೀರು ಬಿಕ್ಕಟ್ಟು ನಡುವಲ್ಲೇ ಗಮನ ಸೆಳೆಯುತ್ತಿದೆ ಯಡಿಯೂರಿನ ಜಲಸಂರಕ್ಷಣಾ ಕ್ರಮ!

ಕಾವೇರಿ ನೀರು ಹಾಗೂ ಕೊಳವೆ ಬಾವಿಗಳ ಮೂಲಕ ಲಭ್ಯವಾಗುತ್ತಿರುವ ಶುದ್ದ ನೀರಿನ ಸಮರ್ಪಕ ಬಳಕೆ ಹಾಗೂ ಅದರ ದುರ್ಬಳಕೆಯನ್ನು ತಪ್ಪಿಸಿ ಉಳಿತಾಯಕ್ಕೆ ಒತ್ತು ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಾರ್ವಜನಿಕರಿಗೆ ಹಲವಾರು ಸೂಚನೆ ನೀಡಿದ್ದೇವೆ. ಕುಡಿಯುವ ನೀರನ್ನು ಅನಗತ್ಯವಾಗಿ ಬಳಕೆ ಮಾಡದಂತೆ, ವಾಹನಗಳನ್ನು ತೊಳೆಯಲು ಬಳಸದಂತೆ ಹಾಗೂ ಏರಿಯೇಟರ್‌ ಮತ್ತು ಫ್ಲೋ ಕಂಟ್ರೋಲ್‌ ಬಳಸುವಂತೆ ಸೂಚನೆ ನೀಡಲಾಗಿದೆ. ಇದರ ಜೊತೆ ಆದಷ್ಟು ಕಡಿಮೆ ನೀರನ್ನು ಬಳಕೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ಹೇಳಿದರು.

ಅಂತರ್ಜಲ ಕುಸಿತದ ಕಾರಣ ಎದುರಾಗಿರುವ ಅಭಾವವನ್ನು ಸರಿದೂಗಿಸುವ ಹಿನ್ನೆಲೆಯಲ್ಲಿ ಈಗಾಗಲೇ ಬಲ್ಕ್‌ ಯೂಸರ್ಸ್‌ ಗಳಿಗೆ ಹಂತ ಹಂತವಾಗಿ ಶೇಕಡಾ 20 ರಷ್ಟು ನೀರನ್ನು ಕಡಿತಗೊಳಿಸುವ ಸೂಚನೆ ನೀಡಿದ್ದೇವೆ. ಅವರ ಸ್ವಚ್ಚತೆ ಹಾಗೂ ಇನ್ನಿತರ ಅವಶ್ಯಕತೆಗಳಿಗಾಗಿ ರಿಯಾಯಿತಿ ದರದಲ್ಲಿ ವೈಜ್ಞಾನಿಕವಾಗಿ ಸಂಸ್ಕರಿಸಿದ ನೀರನ್ನು ಒದಗಿಸುತ್ತಿದ್ದೇವೆ. ಸಂಸ್ಕರಿಸಿದ ನೀರಿನ ಬಳಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಗೆ ಅಗತ್ಯವಿರುವಷ್ಟು ಸಂಸ್ಕರಿಸಿದ ನೀರನ್ನು ನೀಡಲಾಗುತ್ತಿದೆ. 49 ಸಂಸ್ಥೆಗಳು ಸಂಸ್ಕರಿಸಿದ ನೀರನ್ನು ಈಗಾಗಲೇ ಬಳಸುತ್ತಿವೆ. 1300 ಎಂಎಲ್‌ಡಿ ಅಷ್ಟು ಸಂಸ್ಕರಿಸಿದ ನೀರು ನಮಗೆ ಲಭ್ಯವಿದ್ದು, ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು ತಮ್ಮ ನಿತ್ಯದ ಕುಡಿಯುವ ಅವಶ್ಯಕತೆಯನ್ನು ಹೊರತುಪಡಿಸಿ ಬೇರೆ ಕಾರ್ಯಗಳಿಗೆ ಉಪಯೋಗಿಸುವಂತೆ ಸೂಚನೆಯನ್ನು ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಟ್ಯಾಂಕರ್ ಮೂಲಕ ಜನರಿಗೆ ನೀರು ಪೂರೈಕೆ ಮಾಡುತ್ತಿರುವ ಬಿಡಬ್ಲ್ಯೂಎಸ್ಎಸ್ಬಿ
ಬೆಂಗಳೂರು ಜಲ ಬಿಕ್ಕಟ್ಟಿಗೆ ಸಂಸ್ಕರಿಸಿದ ಕೊಳಚೆ ನೀರು ಬಳಸುವುದೊಂದೇ ಪರಿಹಾರ: ಜಲತಜ್ಞ ಸುಬ್ರಹ್ಮಣ್ಯ ಕುಸ್ನೂರು

ನಗರದ ಶೇಕಡಾ 40 ನೀರಿನ ಬೇಡಿಕೆ ಕೊಳವೆ ಬಾವಿಗಳ ಮೇಲೆ ಅವಲಂಬಿತರಾಗಿದ್ದೇವೆ. 1300 ಎಂ ಎಲ್ ಡಿ ನೀರನ್ನು ಬಳಸಿಕೊಂಡು ಈಗಾಗಲೇ 14 ಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸಲಾಗುತ್ತಿದೆ. ಇನ್ನು ಹೆಚ್ಚಿನ ಕೆರೆಗಳನ್ನು ತುಂಬಿಸುವುದು ನಮ್ಮ ಆದ್ಯತೆಯಾಗಿದೆ. ಅದಲ್ಲದೇ, ನಮ್ಮ ವ್ಯಾಪ್ತಿ ಬತ್ತಿಹೋಗಿರುವ ಕೊಳವೆ ಬಾವಿಗಳನ್ನ ಬಳಸಿಕೊಂಡು ಅಂತರ್ಜಲ ಮತ್ತು ಮಳೆ ನೀರು ಮರುಪೂರಣಕ್ಕೆ ಆದ್ಯತೆ ನೀಡಿದ್ದೇವೆ. ಉಪಯೋಗಿಸುತ್ತಿರುವಷ್ಟು ಅಂತರ್ಜಲ ಮರುಪೂರಣಗೊಳಿಸಬೇಕಿದೆ. ಇದಕ್ಕಾಗಿ ಪ್ರತಿಯೊಂದು ಹೊಸ ಕೊಳವೆ ಬಾವಿಗಳನ್ನು ಕೊರೆಯುವ ಸಂದರ್ಭದಲ್ಲಿ 2 ಇಂಗುಗುಂಡಿಗಳನ್ನು ನಿರ್ಮಿಸುವುದನ್ನು ಕಡ್ಡಾಯಗೊಳಿಸಲಿದ್ದೇವೆ. ಸರಕಾರಿ ಸಂಸ್ಥೆಯಾದ ನಮ್ಮಿಂದಲೇ ಈ ಅಭಿಯಾನ ಪ್ರಾರಂಭಿಸುತ್ತೇವೆ ಎಂದು ಹೇಳಿದರು.

ನೀರಿನ ದುರ್ಬಳಕೆ ತಪ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಸಾರ್ವಜನಿಕರಿಗೆ ಗೈಡ್‌ಲೈನ್ಸ್‌ ಕೊಡಲಾಗಿತ್ತು. ಆದರೂ ಕೆಲ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಇನ್ನೂ ನೀರಿನ ದುರ್ಬಳಕೆಯನ್ನು ಮುಂದುವರೆಸಿದ್ದಾರೆ ಎನ್ನುವ ದೂರುಗಳು ಮಂಡಳಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ ಹಾಗೂ ಜನರಿಗೆ ಇನ್ನಷ್ಟು ತಿಳಿವಳಿಕೆ ನೀಡುವ ಉದ್ದೇಶದಿಂದ ದಂಡ ವಿಧಿಸುವ ಅಭಿಯಾನವನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

ಹೋಟೆಲ್‌, ರೆಸ್ಟೋರೆಂಟ್'ಗಳಿಗೆ ರಿಯಾಯಿತಿ ದರದಲ್ಲಿ ಸಂಸ್ಕರಿಸಿದ ನೀರು

ಸ್ವಚ್ಚತೆಗಾಗಿ ಸಂಸ್ಕರಿಸಿದ ನೀರು ಬಳಸುವಂತೆ ಹೋಟೆಲ್ ಹಾಗೂ ರೆಸ್ಟೋರೆಂಟ್ ಗಳಿಗೆ ಮನವಿ ಮಾಡಿಕೊಂಡಿರುವ ಬೆಂಗಳೂರು ಜಲಮಂಡಳಿಯುಸ ರಿಯಾಯಿತಿ ದರದಲ್ಲಿ ನೀರು ಪೂರೈಕೆ ಮಾಡುವುದಾಗಿ ತಿಳಿಸಿದೆ.

ಹೆಚ್ಚು ನೀರು ಬಳಕೆ ಮಾಡುವ ಹಾಗೂ ಜನಸಂಖ್ಯೆ ಹೆಚ್ಚಾಗಿರುವ ಹೋಟೇಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ನೀರಿನ ಉಳಿತಾಯ ಬಹಳ ಮುಖ್ಯ. ಸ್ವಚ್ಛತೆ ಇನ್ನಿತರ ಉದ್ದೇಶಗಳಿಗಾಗಿ ಸಂಸ್ಕರಿಸಿದ ನೀರನ್ನು ಬಳಬೇಕು. ಸ್ವಚ್ಚತಾ ಕಾರ್ಯಗಳಿಗೆ ಬಳಸಲು ಏಪ್ರಿಲ್‌ 1 ರಿಂದ ಹೋಟೇಲ್‌ಗಳಿಗೆ ರಿಯಾಯತಿ ದರದಲ್ಲಿ ಸಂಸ್ಕರಿಸಿದ ನೀರು ಸರಬರಾಜು ಮಾಡಲಾಗುವುದು ಎಂದು ಹೇಳಿದರು.

ಟ್ಯಾಂಕರ್ ಮೂಲಕ ಜನರಿಗೆ ನೀರು ಪೂರೈಕೆ ಮಾಡುತ್ತಿರುವ ಬಿಡಬ್ಲ್ಯೂಎಸ್ಎಸ್ಬಿ
ದರ ಪರಿಷ್ಕರಣೆಯಿಂದ ಜವಾಬ್ದಾರಿಯುತ ನೀರು ಬಳಕೆ ಸಾಧ್ಯವೇ? ತಜ್ಞರ ಅಭಿಪ್ರಾಯವೇನು?

ನಗರಕ್ಕೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ನೀರಿನ ಲಭ್ಯತೆಯಿದೆ. ನೀರಿನ ಉಳಿತಾಯದಿಂದ ನಿಮ್ಮ ನೀರಿನ ಬಿಲ್‌ ಕೂಡಾ ಉಳಿತಾಯವಾಗುತ್ತದೆ. ನೀರು ಉಚಿತ ಎನ್ನುವ ಭಾವನೆಯಿಂದ ಜನರು ಅಮೂಲ್ಯ ಸಂಪತ್ತನ್ನ ಅನಗತ್ಯವಾಗಿ ಪೋಲು ಮಾಡುತ್ತಿದ್ದಾರೆ. ಇದನ್ನ ತಡೆಗಟ್ಟಲು ಎಲ್ಲರ ಸಹಕಾರ ಅಗತ್ಯವಿದೆ ಎಂದು ಕೋರಿದರು.

ಕುಡಿಯುವ ಉದ್ದೇಶಕ್ಕೆ ಹೊರತು ಪಡಿಸಿ ಸಂಸ್ಕರಿಸಿದ ನೀರನ್ನ ಬಹಳಷ್ಟು ಇತರ ಉದ್ದೇಶಗಳಿಗಾಗಿ ಬಳಸಿಕೊಳ್ಳಬಹುದಾಗಿದೆ. ಇದಕ್ಕಾಗಿ ಬೆಂಗಳೂರು ಜಲಮಂಡಳಿ ಹೊಟೇಲ್‌ ಮತ್ತು ರೆಸ್ಟೋರೆಂಟ್‌ಗಳ ಕೈಜೋಡಿಸಲು ಸಿದ್ದವಿದೆ. ಅಗತ್ಯವಿರುವ ಹೋಟೇಲ್‌ ಗಳಿಗೆ ರಿಯಾಯಿತಿ ದರದಲ್ಲಿ ಸಂಸ್ಕರಿಸಿದ ನೀರನ್ನ ನಿಮ್ಮ ಬಾಗಿಲಿಗೆ ಕೊಡುವ ವ್ಯವಸ್ಥೆ ಮಾಡುತ್ತೇವೆ. ಈ ಬಗ್ಗೆ ಸಂಘದ ಪದಾಧಿಕಾರಿಗಳು ತಮ್ಮ ಸದಸ್ಯರುಗಳಿಗೆ ಮಾಹಿತಿ ನೀಡಬೇಕು. ಝೋನ್‌ ವೈಸ್‌ ಸಭೆಯನ್ನು ನಡೆಸಿದಲ್ಲಿ ನಾನು ಮಾಲೀಕರಿಗೆ ಖುದ್ದು ಮನವಿ ಮಾಡಬೇಕಿದೆ ಎಂದರು.

ನೀರಿನ ಸಂರಕ್ಷಣೆ, ಮರುಬಳಕೆ ಮತ್ತು ಅಂತರ್ಜಲ ಅಭಿವೃದ್ಧಿಗೆ ಕೊಡುಗೆ ನೀಡುವ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಿಗೆ ‘ಗ್ರೀನ್ ಸ್ಟಾರ್’ ರೇಟಿಂಗ್ ನೀಡಲಾಗುವುದು. ಮುಂದಿನ ಕೆಲವು ತಿಂಗಳುಗಳಲ್ಲಿ ನೀರಿನ ಸಂರಕ್ಷಣೆ ಕುರಿತು ಮಾಹಿತಿ ಸಂಗ್ರಹಿಸಿದ ನಂತರ ಸ್ಟಾರ್ ರೇಟಿಂಗ್ ನೀಡಲಾಗುವುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com