ತುಮಕೂರು: ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ(85) ಇಂದು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸಿ.ಪಿ ಮೂಡಲಗಿರಿಯಪ್ಪ
ಸಿ.ಪಿ ಮೂಡಲಗಿರಿಯಪ್ಪ

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಂಸದ ಸಿ.ಪಿ. ಮೂಡಲಗಿರಿಯಪ್ಪ(85) ಇಂದು ಬೆಂಗಳೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿರತಹಳ್ಳಿ ಗ್ರಾಮದ ನಿವಾಸಿ‌ಯಾಗಿದ್ದ ಅವರು ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿದ್ದವರು. ಜೊತೆಗೆ ಶಿರಾ ಕ್ಷೇತ್ರದ ಮಾಜಿ ಶಾಸಕರು ಕೂಡ ಆಗಿದ್ದವರು.

ಸಿ.ಪಿ ಮೂಡಲಗಿರಿಯಪ್ಪ
ಶಿರಾದಲ್ಲೂ ಗೆಲುವಿನ ನಗೆ ಬೀರಿದ ಬಿಜೆಪಿ, 12,418 ಮತಗಳ ಅಂತರದಿಂದ ರಾಜೇಶ್ ಗೌಡ ಗೆಲುವು

1985 ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್​ ಮೂಲಕ ರಾಜಕೀಯ ಪ್ರವೇಶಿಸಿದ್ದ ಇವರು, ಮೊದಲ ಪ್ರಯತ್ನದಲ್ಲೇ ಶಿರಾ ವಿಧಾನಸಭೆ ಕ್ಷೇತ್ರದಿಂದ ಆಯ್ಕೆಯಾಗಿ ವಿಧಾನಸಭೆಗೆ ಎಂಟ್ರಿಕೊಟ್ಟಿದ್ದರು. ನಂತರ ರಾಷ್ಟ್ರ ರಾಜಕಾರಣದ ಕಡೆ ಮುಖಮಾಡಿದ ಮೂಡಲಗಿರಿಯಪ್ಪ ಅವರು, ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬರೊಬ್ಬರಿ ಮೂರು ಬಾರಿ, ಅಂದರೆ 1989, 1991 ಮತ್ತು 1998 ರಲ್ಲಿ ವಿಜಯಶಾಲಿ ಆಗಿದ್ದರು.

ಶಿರಾ ವಿಧಾನಸಭೆಗೆ 2020ರಲ್ಲಿ ನಡೆದ ಉಪಚುನಾವಣೆಯಲ್ಲಿ ಮೂಡಲಗಿರಿಯಪ್ಪ ಪುತ್ರ ಡಾ.ಸಿ.ಎಂ.ರಾಜೇಶ್‌ಗೌಡ ಶಾಸಕರಾಗಿ ಆಯ್ಕೆಯಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com