25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಲೋಕಾಯುಕ್ತ ಬಲೆಗೆ

ಮಂಗಳೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರು ಶನಿವಾರ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮನ್ಸೂರ್ ಅಲಿ
ಮನ್ಸೂರ್ ಅಲಿ

ಮಂಗಳೂರು: ಮಂಗಳೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಆಯುಕ್ತ ಮನ್ಸೂರ್ ಅಲಿ ಅವರು ಶನಿವಾರ 25 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಇಂದು ಮಂಗಳಾ ಕ್ರೀಡಾಂಗಣದ ಬಳಿ ಟಿಡಿಆರ್​ ಕ್ಲಿಯರೆನ್ಸ್ ಮಾಡಲು ಉದ್ಯಮಿ ಗಿರಿಧರ್ ಶೆಟ್ಟಿ ಅವರಿಂದ 25 ಲಕ್ಷ ರೂ. ಲಂಚ ಪಡೆಯುತ್ತಿದ್ದರು. ಈ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ಮನ್ಸೂರ್ ಅಲಿ ಮತ್ತು ದಲ್ಲಾಳಿ ಸಲೀಂ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ಲೋಕಾಯುಕ್ತ ಡಿವೈಎಸ್​ಪಿ ಚೆಲುವರಾಜ್, ಇನ್ಸ್ಪೆಕ್ಟರ್​ಗಳಾದ ಅಮಾನುಲ್ಲಾ, ಸುರೇಶ್ ಕುಮಾರ್ ನೇತೃತ್ವದ ಅಧಿಕಾರಿಗಳು ದಿಢೀರ್​ ದಾಳಿ ಮಾಡಿ, ಮುಡಾ ಆಯುಕ್ತ ಮನ್ಸೂರ್​ ಅಲಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮನ್ಸೂರ್ ಅಲಿ
1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್‌ ಮತ್ತು PSI ಲೋಕಾಯುಕ್ತ ಬಲೆಗೆ

ಆಯುಕ್ತ ಮನ್ಸೂರ್​ ಅಲಿ ಜೊತೆಗೆ ಬ್ರೋಕರ್ ಸಲೀಂ ಎಂಬುವವರನ್ನು ಕೂಡ ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com