ಲೋಕಸಭಾ ಚುನಾವಣೆ: ಬೆಂಗಳೂರು ದಕ್ಷಿಣದ 935 ಬೂತ್‌ಗಳಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ತುಷಾರ್ ಗಿರಿನಾಥ್ ಸೂಚನೆ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 1,897 ಮತಗಟ್ಟೆಗಳ ಪೈಕಿ 935 ಮತಗಟ್ಟೆಗಳಲ್ಲಿ 2019ರಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶೇಕಡಾವರು ಮತದಾನ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತುಷಾರ್ ಗಿರಿನಾಥ್
ತುಷಾರ್ ಗಿರಿನಾಥ್

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ 1,897 ಮತಗಟ್ಟೆಗಳ ಪೈಕಿ 935 ಮತಗಟ್ಟೆಗಳಲ್ಲಿ 2019ರಲ್ಲಿ ಮತದಾನ ಪ್ರಮಾಣ ಕಡಿಮೆಯಾಗಿದೆ ಎಂದು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಶೇಕಡಾವರು ಮತದಾನ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಚುನಾವಣಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಗಿರಿನಾಥ್, ಬೂತ್ ಮಟ್ಟದ ಅಧಿಕಾರಿಗಳು ಆಯಾ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಭೇಟಿ ನೀಡಿ ನಾಗರಿಕರಲ್ಲಿ ತಪ್ಪದೇ ಮತದಾನ ಮಾಡುವಂತೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.

ಬೂತ್ ಮಟ್ಟದ ಅಧಿಕಾರಿಗಳು ಆಯಾ ಮತಗಟ್ಟೆ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಭೇಟಿ ನೀಡಿ ನಾಗರಿಕರಲ್ಲಿ ತಪ್ಪದೇ ಮತದಾನ ಕುರಿತು ಜಾಗೃತಿ ಮೂಡಿಸಬೇಕು

-ತುಷಾರ್ ಗಿರಿನಾಥ್

ಮತದಾರರು ತಮ್ಮ ಮತದಾರರ ಗುರುತಿನ ಚೀಟಿ ಸಂಖ್ಯೆಯನ್ನು ನಮೂದಿಸುವ ಮೂಲಕ ಮತಗಟ್ಟೆಗಳು ಮತ್ತು ವಿಳಾಸಗಳ ಕುರಿತು ಹೆಚ್ಚಿನ ಮಾಹಿತಿಗಾಗಿ ಮತದಾರರ ಸಹಾಯವಾಣಿಗೆ ಭೇಟಿ ನೀಡಬಹುದು.ಮತಗಟ್ಟೆಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸಲು ಸಾಫ್ಟ್‌ವೇರ್ ಸಹ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಇದಲ್ಲದೆ, ಬೂತ್ ಮಟ್ಟದಲ್ಲಿ ಸೂಕ್ಷ್ಮ ಮಟ್ಟದ ಕಾರ್ಯಕ್ರಮಗಳನ್ನು ರೂಪಿಸಬೇಕು ಮತ್ತು ಮತಗಟ್ಟೆಗಳಿಗೆ ನಿಗದಿಪಡಿಸಿದ ಮತದಾನದ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com