ಕುರ್ಚಿಯ ಸ್ಥಾನ ಬದಲಾಯಿಸಿದ್ದಕ್ಕೆ ನನ್ನನ್ನು ಟ್ರೋಲ್ ಮಾಡಲಾಯಿತು: ಬೆಂಗಳೂರಿನಲ್ಲಿ ಸಿಜೆಐ ಚಂದ್ರಚೂಡ್

ಕುರ್ಚಿಯ ಸ್ಥಾನವನ್ನು ಸರಿಪಡಿಸಿಕೊಂಡಿದ್ದಕ್ಕಾಗಿ ತಮ್ಮನ್ನು 'ಟ್ರೋಲ್' ಮಾಡಿದ ಘಟನೆಯನ್ನು ಶನಿವಾರ ನೆನಪಿಸಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್.
ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ಸಮಾವೇಶ
ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ಸಮಾವೇಶ
Updated on

ಬೆಂಗಳೂರು: ಕುರ್ಚಿಯ ಸ್ಥಾನವನ್ನು ಸರಿಪಡಿಸಿಕೊಂಡಿದ್ದಕ್ಕಾಗಿ ತಮ್ಮನ್ನು 'ಟ್ರೋಲ್' ಮಾಡಿದ ಘಟನೆಯನ್ನು ಶನಿವಾರ ನೆನಪಿಸಿಕೊಂಡ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು, ನ್ಯಾಯಾಂಗದಲ್ಲಿ ಕಾರ್ಯನಿರ್ವಹಿಸುವವರು ಸಹ ಒತ್ತಡವನ್ನು ನಿರ್ವಹಿಸುವ ಅಗತ್ಯವನ್ನು ಎತ್ತಿ ತೋರಿಸಿದರು.

ಇಂದು ಬೆಂಗಳೂರಿನ ಜಿಕೆವಿಕೆಯ ಡಾ.ಬಾಬು ರಾಜೇಂದ್ರ ಪ್ರಸಾದ್​ ಅಂತಾರಾಷ್ಟ್ರೀಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಜೆಐ, ನ್ಯಾಯಾಲಯಗಳಲ್ಲಿ ಕಕ್ಷಿದಾರರು ಮತ್ತು ವಕೀಲರು ಕೆಲ ಸಂದರ್ಭಗಳಲ್ಲಿ ಮಿತಿ ಮೀರಿ ವರ್ತನೆ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನ್ಯಾಯಾಂಗ ನಿಂದನೆ ಅಸ್ತ್ರವನ್ನು ಬಳಕೆ ಮಾಡದೆ, ಅವರ ವರ್ತನೆಗೆ ಕಾರಣ ತಿಳಿದು ಪರಿಹಾರ ಕಂಡುಕೊಳ್ಳಬೇಕಾಗುತ್ತದೆ ಎಂದರು.

ಎರಡು ದಿನಗಳ ಈ ಸಮಾವೇಶದ ವಿಷಯಗಳಲ್ಲಿ ಒಂದಾದ ಕೆಲಸ-ಜೀವನ ಸಮತೋಲನ ಮತ್ತು ಒತ್ತಡ ನಿರ್ವಹಣೆ ಕುರಿತು ಮಾತನಾಡಿದ ಅವರು, ಒತ್ತಡವನ್ನು ನಿರ್ವಹಿಸುವ ಸಾಮರ್ಥ್ಯವು ನ್ಯಾಯಾಧೀಶರ ಜೀವನದಲ್ಲಿ ವಿಶೇಷವಾಗಿ ಜಿಲ್ಲಾ ನ್ಯಾಯಾಧೀಶರಿಗೆ ಹೆಚ್ಚು ಅಗತ್ಯವಾಗಿದೆ ಎಂದರು.

ನ್ಯಾಯಾಲಯಕ್ಕೆ ಬರುವ ಅನೇಕರು ಸಮಸ್ಯೆಗಳಿಗೆ ಸಿಲುಕಿದವರಾಗಿದ್ದು, ಅದರ ಪರಿಹಾರಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರುತ್ತಾರೆ. ಕೆಲ ಸಂದರ್ಭಗಳಲ್ಲಿ ನ್ಯಾಯಾಲಯದಲ್ಲಿ ಮಿತಿ ಮೀರಿ ವರ್ತಿಸುತ್ತಾರೆ. ಈ ಬೆಳವಣಿಗೆ ಬಳಿಕ ನ್ಯಾಯಾಂಗ ನಿಂದನೆ ಅಧಿಕಾರವನ್ನು ಬಳಸದೆ ಅವರು ಏಕೆ ಈ ರೀತಿಯಲ್ಲಿ ವರ್ತಿಸಿದರು ಎಂಬುದನ್ನು ಕಂಡುಕೊಳ್ಳಬೇಕಾಗಿದೆ. ಕೆಲ ಸಂದರ್ಭಗಳಲ್ಲಿ ನಮ್ಮ (ನ್ಯಾಯಾಧೀಶರ)ಕುಟುಂಬದಲ್ಲಿಯೂ ಈ ರೀತಿಯ ಬೆಳವಣಿಗೆಗಳು ಸಾಮಾನ್ಯವಾಗಿದ್ದು, ಅದನ್ನು ಸಹಿಸಿಕೊಂಡು ಹೋಗಬೇಕಾಗುತ್ತದೆ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಸಲಹೆ ನೀಡಿದರು.

ದೇಶದ ನ್ಯಾಯಾಂಗ ವ್ಯವಸ್ಥೆಯು ಸಮಾಜ ತಿದ್ದುವ ಕಾರ್ಯ ಮಾಡುತ್ತಿದೆ. ಪ್ರತಿಯೊಂದು ಸಿವಿಲ್ ಮತ್ತು ಕ್ರಿಮಿನಲ್​ ಪ್ರಕರಣಗಳಲ್ಲಿ ಆದೇಶಗಳ ಮೂಲಕ ನೀಡುವ ಸಂದೇಶಗಳನ್ನು ಸಮಾಜದ ಬದಲಾವಣೆಗೆ ಕಾರಣವಾಗುತ್ತಿದೆ ಎಂದರು.

ಜಿಲ್ಲಾ ನ್ಯಾಯಾಂಗವು ನಮ್ಮ ಕಾನೂನು ವ್ಯವಸ್ಥೆಯ ಬೆನ್ನೆಲುಬಾಗಿದೆ. ಹಾಗೂ ನ್ಯಾಯಾಂಗದ ಮೂಲಾಧಾರ ಎಂಬುದಾಗಿ ಬಲವಾಗಿ ನಂಬುತ್ತೇನೆ. ಜಿಲ್ಲಾ ನ್ಯಾಯಾಂಗ ನಮ್ಮ ನಾಗರೀಕರಿಗೆ ಸಂಪರ್ಕದ ಮೊದಲ ಬಿಂದುವಾಗಿದೆ. ನ್ಯಾಯಾಂಗ ಅಧಿಕಾರಿಗಳು ನ್ಯಾಯದ ವಿತರಣೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿದ್ದಾರೆ ಎಂದು ಸಿಜೆಐ ಹೇಳಿದರು.

ಕರ್ನಾಟಕ ರಾಜ್ಯ ನ್ಯಾಯಾಂಗ ಅಧಿಕಾರಿಗಳ 21ನೇ ದ್ವೈವಾರ್ಷಿಕ ರಾಜ್ಯ ಮಟ್ಟದ ಸಮಾವೇಶ
ಸಂಸತ್ತು, ಇಸಿ ಮತ್ತು ಸುಪ್ರೀಂ ಕೋರ್ಟ್ ಸಂದರ್ಭಕ್ಕೆ ತಕ್ಕಂತೆ ಪೂರಕವಾಗಿ ಕಾರ್ಯನಿರ್ವಹಿಸಬೇಕು: ಸಿಜೆಐ ಚಂದ್ರಚೂಡ್

ಇತ್ತೀಚೆಗೆ ಸಂಭವಿಸಿದ ತಮ್ಮ ವೈಯಕ್ತಿಕ ಅನುಭವವನ್ನು ಹಂಚಿಕೊಂಡ ಸಿಜೆಐ, "ಕೇವಲ ನಾಲ್ಕೈದು ದಿನಗಳ ಹಿಂದೆ ನಾನು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾಗ, ನನಗೆ ಸ್ವಲ್ಪ ಬೆನ್ನು ನೋವು ಕಾಣಿಸಿಕೊಂಡಿತು. ಆದ್ದರಿಂದ ನಾನು ನನ್ನ ಮೊಣಕೈಯನ್ನು ನ್ಯಾಯಾಲಯದಲ್ಲಿ ನನ್ನ ತೋಳನ್ನು ಕುರ್ಚಿಯಲ್ಲಿ ಇರಿಸಿದೆ ಮತ್ತು ನನ್ನ ಕುರ್ಚಿಯ ಸ್ಥಾನವನ್ನು ಬದಲಾಯಿಸಿದೆ". ಇದನ್ನು ಸಹ ಟ್ರೋಲ್ ಮಾಡಲಾಯಿತು.

ಭಾರತದ ಮುಖ್ಯ ನ್ಯಾಯಾಧೀಶರು "ತುಂಬಾ ಸೊಕ್ಕಿನವರು" ಎಂದು ಆರೋಪಿಸಿ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ಕಾಮೆಂಟ್‌ಗಳನ್ನು ಮಾಡಲಾಯಿತು ಎಂದು ಸಿಜೆಐ ಹೇಳಿದರು.

ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ಗಳಲ್ಲಿನ ನ್ಯಾಯಾಧೀಶರಿಗೆ ಇರುವ ರಕ್ಷಣೆ ತಾಲೂಕು ಮಟ್ಟದ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಇಲ್ಲ ಎಂದು ನ್ಯಾಯಮೂರ್ತಿ ಚಂದ್ರಚೂಡ್ ಅವರು ಕಳವಳ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com