BJPಗೆ ಜನಾರ್ದನ ರೆಡ್ಡಿ ಮರು ಸೇರ್ಪಡೆ. ಹಿಂದೂ ಕುಟುಂಬದ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ. SSLC ವಿದ್ಯಾರ್ಥಿನಿ ಸಾವು! - ಈ ದಿನದ ಸುದ್ದಿ ಮುಖ್ಯಾಂಶಗಳು: 25-03-2024

ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

1. ಗಣಿ ಉದ್ಯಮಿ ಜನಾರ್ದನ ರೆಡ್ಡಿ BJPಗೆ ಮರು ಸೇರ್ಪಡೆ

ಮಾಜಿ ಸಚಿವ, ಗಣಿ ಉದ್ಯಮಿ ಜಿ ಜನಾರ್ದನ ರೆಡ್ಡಿ ಅವರು ಇಂದು ಬಿಜೆಪಿಗೆ ಮರು ಸೇರ್ಪಡೆಗೊಂಡಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿರುವ ಗಂಗಾವತಿ ಶಾಸಕ, ಕಳೆದ ವರ್ಷ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಸ್ಥಾಪಿಸಿ ಬಿಜೆಪಿಯೊಂದಿಗಿನ ಎರಡು ದಶಕಗಳ ಹಿಂದಿನ ಒಡನಾಟವನ್ನು ಮುರಿದುಕೊಂಡಿದ್ದರು. ಇದೀಗ ಬಿಜೆಪಿ ಸೇರ್ಪಡೆಯಾದಿಗೆ ಜನಾರ್ದನ ರೆಡ್ಡಿ ತಮ್ಮ ಕೆಆರ್‌ಪಿಪಿಯನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದ್ದು, ಪತ್ನಿ ಅರುಣಾ ಲಕ್ಷ್ಮಿ ಮತ್ತು ಕೆಲವು ಕುಟುಂಬ ಸದಸ್ಯರೊಂದಿಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮತ್ತು ಇತರರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

2. SSLC ಪರೀಕ್ಷೆ ವಿದ್ಯಾರ್ಥಿ ಆತ್ಮಹತ್ಯೆ, ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

ರಾಜ್ಯದಲ್ಲಿ ಇಂದಿನಿಂದ SSLC ಪರೀಕ್ಷೆಗಳು ಆರಂಭಗೊಂಡಿದೆ. ಒಟ್ಟು 8,69,968 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಈ ಮಧ್ಯೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. 16 ವರ್ಷದ ವಿದ್ಯಾರ್ಥಿ ಪರಶುರಾಮ ಬಾಬು ಅಂದೋಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಂದು ಪೊಲೀಸರು ಹೇಳಿದ್ದಾರೆ. ಮತ್ತೊಂದೆಡೆ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಉಮೈ ಖುಲ್ಸುಂ ಶಿವಮೊಗ್ಗಕ್ಕೆ ತೆರಳಲು ಮೂಡಲ ವಿಠಲಾಪುರದಲ್ಲಿ ರಸ್ತೆ ದಾಟುವಾಗ ಇನ್ನೋವಾ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

3. ಮಂಡ್ಯದಲ್ಲಿ ಪಟಾಕಿ ಸ್ಫೋಟ: ಓರ್ವ ಸಾವು

ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಡ್ಯ ತಾಲೂಕಿನ ಜಿ ಕೆಬ್ಬಳ್ಳಿ ಗ್ರಾಮದಲ್ಲಿ ಸಂಗ್ರಹಿಸಿಟ್ಟಿದ್ದ ಪಟಾಕಿ ಸ್ಫೋಟಗೊಂಡು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕೆಬ್ಬಳ್ಳಿ ಗ್ರಾಮದಲ್ಲಿ ಕಾಲಭೈರವೇಶ್ವರ ಹಬ್ಬಕ್ಕೆಂದು ಪಟಾಕಿ ಸಿಡಿಸಲು ತಮಿಳುನಾಡಿನಿಂದ ನಾಲ್ವರು ಆಗಮಿಸಿದ್ದರು. ನಿನ್ನೆ ರಾತ್ರಿ ಗ್ರಾಮದಲ್ಲಿ ಹಬ್ಬ ಮುಗಿದ ನಂತರ ಆಲೆಮನೆಯೊಂದರಲ್ಲಿ ನಾಲ್ವರು ಮಲಗಿದ್ದರು. ಇಂದು ಬೇರೊಂದು ಗ್ರಾಮಕ್ಕೆ ಹೋಗಲು ಪಟಾಕಿಗಳ ತುಂಬುವಾಗ ಸ್ಪೋಟ ಸಂಭವಿಸಿದೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

4. ಬೆಂಗಳೂರಿನ ಹಿಂದೂ ಕುಟುಂಬದ ಮೇಲೆ ಮುಸ್ಲಿಂ ಯುವಕರ ಗುಂಪಿನಿಂದ ಹಲ್ಲೆ

ನಗರತ್ ಪೇಟೆ ಹಲ್ಲೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಗುಂಪು ಘರ್ಷಣೆ ಪ್ರಕರಣ ವರದಿಯಾಗಿದೆ. ಕ್ಷುಲ್ಲಕ ವಿಚಾರಕ್ಕೆ ಮಧ್ಯರಾತ್ರಿ ಮುಸ್ಲಿಂ ಯುವಕರ ಗುಂಪೊಂದು ಕುಟುಂಬವೊಂದರ ಮೇಲೆ ಹಲ್ಲೆ ಮಾಡಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಪ್ರಗತಿಪರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ತಡರಾತ್ರಿ ಆಟೋ ಪಾರ್ಕಿಂಗ್ ವಿಚಾರಕ್ಕೆ ಎರಡು ಕೋಮುಗಳ ನಡುವೆ ಗಲಾಟೆ ನಡೆದಿದೆ. ಬನಶಂಕರಿಯ ಪ್ರಗತಿಪರ ಬಡಾವಣೆಯಲ್ಲಿ ಆಟೋ ಪಾರ್ಕಿಂಗ್ ವಿಚಾರಕ್ಕೆ ಮುಸ್ಲಿಂ ಯುವಕರು ಮನೆಗೆ ನುಗ್ಗಿ ಮಹಿಳೆಯರು, ಪುರುಷರು, ಮಕ್ಕಳು ಸೇರಿ 8 ಮಂದಿ ಮೇಲೆ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆ, ಗಲಾಟೆ ಸಂಬಂಧ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳ ಪತ್ತೆಯಾಗಿ ಪೊಲೀಸರು ಜಾಲ ಬೀಸಿದ್ದಾರೆ.

5. ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ

ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನುಶ್ರೀನಿವಾಸಗೌಡಗೆ ಕೋರ್ಟ್ ಏಪ್ರಿಲ್ 8ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಮಗುವನ್ನು ಅಕ್ರಮವಾಗಿ ಸಾಕುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನುಶ್ರೀನಿವಾಸಗೌಡಗೆ ಸಿಜೆಎಂ ಕೋರ್ಟ್ ನ್ಯಾಯಾಧೀಶರು 14 ದಿನಗಳ‌ ಕಾಲ ನ್ಯಾಯಾಂಗ ಬಂಧನ ಒಪ್ಪಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೋನುಳನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಕಾನೂನು ಬಾಹಿರವಾಗಿ ಮಗುವನ್ನ ದತ್ತು ತೆಗೆದುಕೊಂಡು ಪೊಲೀಸ್ ವಶದಲ್ಲಿದ್ದ ಸೋನು ಶ್ರೀನಿವಾಸಗೌಡರನ್ನು ಬೆಂಗಳೂರಿನ ಬ್ಯಾಡರಳ್ಳಿ ಪೊಲೀಸರು ನಿನ್ನೆ ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರಕ್ಕೆ ಕರೆದುಕೊಂಡು ಬಂದ ಸ್ಥಳ ಮಹಜರು ನಡೆಸಿದ್ದರು.

6.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com