ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
16 ವರ್ಷದ ಬಾಲಕ ಪರಶುರಾಮ ಬಾಬು ಅಂದೋಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ ನಿನ್ನೆ ರಾತ್ರಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಂದು ಪೊಲೀಸರು ಹೇಳಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿ ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಬುದರ ಬಗ್ಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಮತ್ತು ಪರೀಕ್ಷೆಯಿಂದಾಗಿ ಒತ್ತಡದಲ್ಲಿದ್ದರೆ ಎಂಬುದು ಸಹ ಇನ್ನೂ ಖಚಿತವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಭಾನುವಾರ ಸಂಜೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಳ್ಳುವ ಕೆಲವೇ ಗಂಟೆಗಳ ಮುನ್ನ ತನ್ನ ತಂದೆ ಮತ್ತು ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಎನ್ನಲಾಗಿದೆ.
ಆಗಾಗ್ಗೆ ಪರಸ್ಪರ ಜಗಳವಾಡುತ್ತಿದ್ದರು ಮತ್ತು ಆತನ ತಂದೆಗೆ ಕುಡಿತದ ಚಟ ಇತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯಿಂದ ಈ ಬಾಲಕ ಎರಡು ವರ್ಷಗಳ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದುಬಂದಿದೆ.
ಈ ತಿಂಗಳ ಆರಂಭದಲ್ಲಿ, ಪರಶುರಾಮ ಆತ್ಮಹತ್ಯೆ ಮಾಡಿಕೊಳ್ಳಲು ರೈಲ್ವೆ ನಿಲ್ದಾಣಕ್ಕೆ ಹೋಗಿದ್ದರು. ಆದರೆ ಸಾರ್ವಜನಿಕರು ಆತನನ್ನು ಗುರುತಿಸಿ ಸುರಕ್ಷಿತವಾಗಿ ಮನೆಗೆ ಕರೆತಂದಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ನಾವು ಎಲ್ಲಾ ದೃಷ್ಟಿಕೋನದಿಂದಲೂ ತನಿಖೆ ಮಾಡುತ್ತೇವೆ. ಘಟನಾ ಸ್ಥಳದಲ್ಲಿ ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Advertisement