ಸಾಂದರ್ಭಿಕ ಚಿತ್ರ
ರಾಜ್ಯ
ಶಿವಮೊಗ್ಗ: ರಸ್ತೆ ಅಪಘಾತ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ಸಾವು
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ನಡೆದಿದೆ.
ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹೊರಟ್ಟಿದ್ದ ವಿದ್ಯಾರ್ಥಿನಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೂಡಲ ವಿಠಲಾಪುರದಲ್ಲಿ ನಡೆದಿದೆ.ಜಂಬರಘಟ್ಟ ಗ್ರಾಮದ ನಿವಾಸಿ ಉಮೈ ಖುಲ್ಸುಂ (16) ಮೃತಪಟ್ಟ ವಿದ್ಯಾರ್ಥಿನಿ.
ಶಿವಮೊಗ್ಗಕ್ಕೆ ತೆರಳಲು ಬಸ್ ಹತ್ತಲೆಂದು ಮೂಡಲ ವಿಠಲಾಪುರದಲ್ಲಿ ರಸ್ತೆ ದಾಟುವಾಗ ಚನ್ನಗಿರಿ ಕಡೆಯಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಇನ್ನೋವಾ ಕಾರು ಡಿಕ್ಕಿ ಹೊಡೆದಿದೆ. ಇದರಿಂದಾಗಿ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ ಎಂದು ವರದಿಯಾಗಿದೆ. ಈ ಬಗ್ಗೆ ಹೊಳೆಹೊನ್ನೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ