ತುಮಕೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿ ಸಾವು

ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪಿದ ದಾರುಣ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ತುಮಕೂರು: ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಯೊಬ್ಬ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪಿದ ದಾರುಣ ಘಟನೆ ಸೋಮವಾರ ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಚಿಕ್ಕನಾಯಕನಹಳ್ಳಿ ತಾಲೂಕಿನ ಚಿಕ್ಕರಾಂಪುರ ನಿವಾಸಿ ಸಿದ್ದೇಶ್ ಅವರ ಮಗ ಮೋಹನ್ ಕುಮಾರ್ ಸಿಎಸ್(16) ಎಂದು ಗುರುತಿಸಲಾಗಿದೆ.

ಮೋಹನ್ ಕುಮಾರ್ ಇಂದು ತುರುವೇಕೆರೆ ಪಟ್ಟಣದ ಸರಸ್ವತಿ ಬಾಲಿಕಾ ಪ್ರೌಢ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡಿದ್ದಾನೆ. ತಕ್ಷಣ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಆದರೆ ವೈದ್ಯರು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಶಿಕ್ಷಕರಿಗೆ ಸೂಚಿಸಿದ್ದಾರೆ. ಕೂಡಲೇ ಆಂಬ್ಯೂಲೆನ್ಸ್ ಮೂಲಕ ಜಿಲ್ಲಾ ಆಸ್ಪತ್ರೆಗ ಸಾಗಿಸುವಾಗ ಗುಬ್ಬಿ ಸಮೀಪ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ
ಶಿವಮೊಗ್ಗ: ಸಾಗರ ತಾಲೂಕಿನ ಯಡೇಹಳ್ಳಿಯಲ್ಲಿ SSLC ವಿದ್ಯಾರ್ಥಿ ಆತ್ಮಹತ್ಯೆ

ಮೃತ ವಿದ್ಯಾರ್ಥಿ ಮೋಹನ್ ಕುಮಾರ್ ಲೋಕಮ್ಮನಹಳ್ಳಿ ಗೇಟ್ ನ ಕಂಚಿರಾಯ ಸನಿವಾಸ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com