ಕೊಳವೆ ಬಾವಿ ನಿರ್ವಹಣೆಗೆ ‘AI’ ತಂತ್ರಜ್ಞಾನ ಅಳವಡಿಕೆ; BWSSB ಮುಂದು!

ನಗರದಲ್ಲಿನ ಕೊಳವೆ ಬಾವಿಗಳ ನಿರ್ವಹಣೆಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಮುಂದಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಬೆಂಗಳೂರು: ನಗರದಲ್ಲಿನ ಕೊಳವೆ ಬಾವಿಗಳ ನಿರ್ವಹಣೆಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಮುಂದಾಗಿದೆ.

ನಗರದ ಚಿನ್ನಪ್ಪ ಗಾರ್ಡನ್​ನಲ್ಲಿ ಸೋಮವಾರ ಕೊಳವೆ ಬಾವಿಗೆ ಅಳವಡಿಸಿರುವ ಎಐ ಮತ್ತು ಐಓಟಿ ತಂತ್ರಜ್ಞಾನದ ಪ್ರಾಯೋಗಿಕ ಪರೀಕ್ಷೆಯನ್ನು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ಅವರು ಪರಿಶೀಲನೆ ನಡೆಸಿದರು.

ಬಳಿಕ ಮಾತಾಡಿದ ಅವರು, ನಗರದಲ್ಲಿ 14 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿವೆ. ಇವುಗಳಲ್ಲಿ ಹಲವು ಕೊಳವೆ ಬಾವಿಗಳು ಸಮರ್ಪಕ ನಿರ್ವಹಣೆ ಇಲ್ಲದೆ ಬತ್ತಿ ಹೋಗಿವೆ. ಕೊಳವೆ ಬಾವಿಗಳ ಪಂಪ್‌ ಸೆಟ್‌ಗಳನ್ನ ಹೆಚ್ಚಿನ ಸಮಯ ಬಳಸುವುದು. ನೀರು ಇಲ್ಲದೇ ಇರುವುದು ಗೊತ್ತಾಗದೆ ಮೋಟಾರ್‌ ಓಡಿಸುವುದರಿಂದ ಬಹಳಷ್ಟು ಕೊಳವೆ ಬಾವಿಗಳು ರಿಪೇರಿಗೆ ಬರುತ್ತಿವೆ. ಕೊಳವೆಬಾವಿಗಳು ಪದೇಪದೇ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆಧುನಿಕ ಎ ಐ ಮತ್ತು ಐಓಟಿ (IOT) ತಂತ್ರಜ್ಞಾನ ಅಳವಡಿಸಿರುವ ಕೊಳವೆ ಬಾವಿಯ ಟ್ರಯಲ್ ರನ್ ನ ಕಾರ್ಯವನ್ನು ಇಂದು ಪರಿಶೀಲಿಸಲಾಗಿದೆ ಎಂದು ಹೇಳಿದರು.

ಸಂಗ್ರಹ ಚಿತ್ರ
ಬೆಂಗಳೂರು: ಅನುಮತಿ ಇಲ್ಲದೆ 20 ಕೊಳವೆ ಬಾವಿ ಕೊರೆದವರ ವಿರುದ್ಧ ಕ್ರಮಕ್ಕೆ BWSSB ಆದೇಶ!

ಈ ನೂತನ ತಂತ್ರಜ್ಞಾನದ ಅಳವಡಿಕೆಯಿಂದ ಕೊಳವೆಬಾವಿಗಳನ್ನು ಸಮರ್ಥ ಹಾಗೂ ವೈಜ್ಞಾನಿಕವಾಗಿ ನಿರ್ವಹಿಸಬಹುದು. ಬಾವಿಯಲ್ಲಿ ನೀರಿಲ್ಲದ ಸಮಯದಲ್ಲಿ ಮೋಟರ್‌ ಬಳಸುವುದನ್ನು ತಪ್ಪಿಸಿ, ಕೊಳವೆ ಬಾವಿಗಳು ನಿಷ್ಕ್ರಿಯವಾಗುವುದನ್ನು ತಡೆಯಬಹುದು. ಕೊಳವೆ ಬಾವಿಗಳನ್ನು ಸುಸ್ಥಿರವಾಗಿ ಹಾಗೂ ತಾಂತ್ರಿಕವಾಗಿ ಬಳಸುವುದಲ್ಲದೆ, ಪದೇಪದೇ ಮೋಟರ್ ಸುಟ್ಟು ಹೋಗುವಂತಹ ಹಾಗೂ ಇನ್ನಿತರ ತಾಂತ್ರಿಕ ಸಮಸ್ಯೆಗೆ ಸಿಲುಕುವುದನ್ನು ತಪ್ಪಿಸುವುದಲ್ಲದೆ ನಿರ್ವಹಣೆಯ ವೆಚ್ಚವನ್ನು ಕಡಿಮೆಗೊಳಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದೇ ವೇಳೆ ಬೆಂಗಳೂರು ಜಲಮಂಡಳಿ ಹಾಗೂ ಬಿಬಿಪಿಎಂಪಿ ವತಿಯಿಂದ ಸಾರ್ವಜನಿಕರಿಗೆ ಕುಡಿಯುವ ನೀರನ್ನು‌ ಪೂರೈಸಲು ಖಾಸಗಿ ಟ್ಯಾಂಕರ್ ಗಳನ್ನು ಪಡೆದುಕೊಳ್ಳಲಾಗಿದ್ದು, ಈ ಖಾಸಗಿ ಟ್ಯಾಂಕರ್ ಗಳ ಮೂಲಕ‌ ಅಗತ್ಯವಿರುವ ಕಡೆಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಕುಡಿಯುವ ನೀರನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಉಚಿತವಾಗಿ ಕುಡಿಯುವ ನೀರು ಒದಗಿಸಬೇಕಾದ ನೀರನ್ನು ಅನ್ಯ ಉದ್ದೇಶಗಳಿಗೆ ಮಾರಾಟ ಮಾಡಿದ್ದು ಕಂಡುಬಂದರೇ ಮಂಡಳಿಯಿಂದ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com