ವಿಶೇಷ ಅನುದಾನ ಹಿಂಪಡೆದು, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ: ನಿರ್ಮಲಾ ಸೀತಾರಾಮನ್ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಆರೋಪ

2020 ರ ಜನವರಿ 30 ರಂದು ಸಂಸತ್ತಿನಲ್ಲಿ ಮಂಡಿಸಿದ ಕ್ರಿಯಾ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನದ ಶಿಫಾರಸನ್ನು ಮರುಪರಿಶೀಲಿಸುವಂತೆ 15 ನೇ ಹಣಕಾಸು ಆಯೋಗಕ್ಕೆ ಸೂಚಿಸಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರು ಸೂಚಿಸಿದ್ದು, ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು...
ಕಂದಾಯ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: 2020 ರ ಜನವರಿ 30 ರಂದು ಸಂಸತ್ತಿನಲ್ಲಿ ಮಂಡಿಸಿದ ಕ್ರಿಯಾ ವರದಿಯಲ್ಲಿ 5,495 ಕೋಟಿ ರೂಪಾಯಿಗಳ ವಿಶೇಷ ಅನುದಾನದ ಶಿಫಾರಸನ್ನು ಮರುಪರಿಶೀಲಿಸುವಂತೆ 15 ನೇ ಹಣಕಾಸು ಆಯೋಗಕ್ಕೆ ಸೂಚಿಸಿದ್ದಾರೆ ಕೇಂದ್ರ ಹಣಕಾಸು ಸಚಿವೆ ನಿರಾಮಲಾ ಸೀತಾರಾಮನ್ ಅವರು ಸೂಚಿಸಿದ್ದು, ಈ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದ್ದಾರೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಆರೋಪಿಸಿದ್ದಾರೆ.

ವಿಕಾಸೌಧದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ರಾಜ್ಯಕ್ಕೆ 2019- 20ರಲ್ಲಿ ಕೊಟ್ಟಿದ್ದಕ್ಕಿಂತ ಕಡಿಮೆ ಅನುದಾನವನ್ನು ಕೊಡುವಂತಿಲ್ಲ ಎಂದು ಹಣಕಾಸು ಆಯೋಗವೇ ಹೇಳಿದೆ. 2019-20ರಲ್ಲಿ ರಾಜ್ಯಕ್ಕೆ ಕೇಂದ್ರದಿಂದ 36675 ಕೋಟಿ ರು. ತೆರಿಗೆ ಪಾಲು ಬಂದಿತ್ತು. 2020-21ಕ್ಕೆ ಇದು 31,180 ಕೋಟಿ ರು.ಗೆ ಕುಸಿದಿತ್ತು. ಹೀಗಾಗಿ ರಾಜ್ಯಕ್ಕೆ ಆಗಿರುವ 5495 ಕೋಟಿ ರು. ನಷ್ಟವನ್ನು ಕೇಂದ್ರ ಸರ್ಕಾರ ನೀಡಬೇಕು ಎಂದು ಆಯೋಗ ವಿಶೇಷ ಅನುದಾನಕ್ಕೆ ಶಿಫಾರಸು ಮಾಡಿದೆ. ಆದರೆ, ಈ ಹಣ ಈವರೆಗೆ ರಾಜ್ಯಕ್ಕೆ ಬಂದಿಲ್ಲ. 2021-26ನೇ ಸಾಲಿನಲ್ಲಿ ಸುಮಾರು 6,000 ಕೋಟಿ ರು. ನೀಡಬೇಕೆಂದು ಶಿಫಾರಸು ಮಾಡಲಾಗಿದೆ. ಒಟ್ಟಾರೆ, 11,495 ಕೋಟಿ ರು. ಹಣ ರಾಜ್ಯಕ್ಕೆ ಬರಬೇಕಿದೆ. ಆದರೆ, ನಿರ್ಮಲಾ ಅಂತಹ ಶಿಫಾರಸೇ ಎಂದು ಮರೆಮಾಚುತ್ತಿದ್ದಾರೆ. ಆಯೋಗ ಮಾಡಿದ್ದ ಶಿಫಾರಸನ್ನು ಹಿಂಪಡೆಯುವಂತೆ ಅವರೇ ಪತ್ರ ಬರೆದು ಕರ್ನಾಟಕದ ಜನರಿಗೆ ಅನ್ಯಾಯ ಮಾಡಿದ್ದಾರೆಂದು ಆರೋಪಿಸಿದ್ದಾರೆ.

ಕರ್ನಾಟದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಅವರಿಂದಲೇ ರಾಜ್ಯಕ್ಕೆ ತೆರಿಗೆ ಹಂಚಿಕೆ ಅನುದಾನದಲ್ಲಿ ಅನ್ಯಾಯವಾಗುತ್ತಿದೆ. ಮಾ.31ಕ್ಕೆ ಅವರು ಮೈಸೂರಿಗೆ ಆಗಮಿಸುತ್ತಿದ್ದು, ಈ ಬಗ್ಗೆ ಬಹಿರಂಗ ಚರ್ಚೆಗೆ ಸಿದ್ದರಿದ್ದಾರೆಯೇ ಹೇಳಲಿ. ಹಣಕಾಸು ಆಯೋಗದ 2021ನೇ ವರ್ಷದ ಅಂತಿಮ ವರದಿಯ 36ನೇ ಪುಟದಲ್ಲಿ ಕರ್ನಾಟಕಕ್ಕೆ ಆಗಿರುವ ನಷ್ಟ ತುಂಬಿಕೊಡಬೇಕು ಎಂದು ಬರೆದಿರುವುದು ಸುಳ್ಳೇ ಎಂದು ಅವರು ಉತ್ತರಿಸಲಿ ಎಂದು ಸಾಕ್ಷಿ ಸಮೇತ ತಿರುಗೇಟು ನೀಡಿದರು.

ಕಂದಾಯ ಸಚಿವ ಕೃಷ್ಣ ಬೈರೇಗೌಡ
ಶ್ರೀಮಂತರಿಂದ ತೆರಿಗೆ ಸಂಗ್ರಹಿಸಿ ಬಡವರಿಗೆ ಕೊಡುವುದು ನನ್ನ ಅರ್ಥಶಾಸ್ತ್ರ: ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ತೆರಿಗೆ ಪಾಲಿನ ಅನ್ಯಾಯದ ಬಗ್ಗೆ ಪತ್ರ ಬರೆದರೆ ಬಿಜೆಪಿಗರು ಸುಳ್ಳು ಎನ್ನುತ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ 20200 ಸೆ.17ರಂದು ಕೇಂದ್ರ ಹಣಕಾಸು ಸಚಿವರನ್ನು ಭೇಟಿಯಾಗಿ ವಿಶೇಷ ಅನುದಾನ ಬಿಡುಗಡೆ ಮಾಡಲು ಕೋರಿದ್ದರು. ಬೊಮ್ಮಾಯಿ ಮುಖ್ಯಮಂತ್ರಿಯಾಗಿ ದ್ದಾಗಲೂ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದರು. ಹಾಗಾದರೆ ಅವರು ಸಹ ಸುಳ್ಳು ಹೇಳಿದ್ದರಾ ಎಂದು ಸಚಿವ ಕುಟುಕಿದರು.

ಸಚಿವೆ ನಿರ್ಮಲಾ ಒಂದೆಡೆ ಹಣಕಾಸು ಆಯೋಗದ ಒಂದೇ ಒಂದು ಶಿಫಾರಸ್ಸನ್ನು ಸಹ ನಾವು ತಿದ್ದಲು ಹೋಗುವುದಿಲ್ಲ ಎನ್ನುತ್ತಾರೆ. ಮತ್ತೊಂದೆಡೆ ರಾಜ್ಯಗಳಿಗೆ ನೀಡುವ ವಿಶೇಷ ಅನುದಾನವನ್ನು ಹಿಂಪಡೆಯುವಂತೆ ಹಣಕಾಸು ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಲೋಕಸಭೆಯಲ್ಲೇ ಉತ್ತರ ನೀಡುತ್ತಾರೆ. ಹಾಗಾದರೆ ರಾಜ್ಯದ ಪಾಲಿನ ಹಣವನ್ನು ತಡೆಹಿಡಿಯಲು ಮಾತ್ರ ಇವರ ಕಾನೂನುಗಳು ಇರುವುದಾ? ಎಂದು ಆಕ್ರೋಶ ಹೊರಹಾಕಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com