ಮೇಕೆದಾಟು ಯೋಜನೆ: ಮಾಜಿ ಪ್ರಧಾನಿ ದೇವೇಗೌಡ ನಡೆ ಸ್ವಾಗತಿಸಿದ DK ಶಿವಕುಮಾರ್

ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಜೆಡಿಎಸ್ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆಯನ್ನು ಪ್ರಕಟಿಸುತ್ತೇವೆ. ಇದೇ ರೀತಿ ಬಿಜೆಪಿ, ಕಾಂಗ್ರೆಸ್ ಎಲ್ಲ ಪಕ್ಷಗಳೂ ಈ ಯೋಜನೆ ಬೆಂಬಲಿಸುವ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಬೇಕು ಎಂಬ ಮಾಜಿ ಪ್ರಧಾನಿ ಹೆಚ್, ಡಿ. ದೇವೇಗೌಡ ಅವರ ಹೇಳಿಕೆಯನ್ನು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸ್ವಾಗತಿಸಿದ್ದಾರೆ.

ದೇವೇಗೌಡ ಅವರ ಹೇಳಿಕೆ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನಾವು ಮಾಡಿದ ನಮ್ಮ ನೀರು, ನಮ್ಮ ಹಕ್ಕು ಹೋರಾಟಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರು ಧ್ವನಿಗೂಡಿಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

ಈಗ ಉದ್ಭವಿಸಿರುವ ಕುಡಿಯುವ ನೀರಿನ ಸಮಸ್ಯೆಯನ್ನಾದರೂ ಮನಗಂಡು ಕೇಂದ್ರ ಸರಕಾರ ಮೇಕೆದಾಟು ಆಣೆಕಟ್ಟು ಯೋಜನೆಗೆ ಅನುಮತಿ ನೀಡುತ್ತದೆ ಎಂಬ ವಿಶ್ವಾಸ ನನ್ನದು. ಈ ಎಲ್ಲ ಸಮಸ್ಯೆಗಳನ್ನು ನಿರೀಕ್ಷೆ ಮಾಡಿಯೇ ಕಾಂಗ್ರೆಸ್‌ ಪಕ್ಷವು ನಮ್ಮ ನೀರು ನಮ್ಮ ಹಕ್ಕು ಪಾದಯಾತ್ರೆ ಮಾಡಿತ್ತು. ಆ ಮೂಲಕ ನಮ್ಮ ಹಕ್ಕೊತ್ತಾಯವನ್ನು ಕನ್ನಡಿಗರ ಮನೆ-ಮನಗಳಿಗೆ ತಲುಪಿಸಿತ್ತು" ಎಂದು ತಿಳಿಸಿದ್ದಾರೆ.

ಡಿಕೆ.ಶಿವಕುಮಾರ್
ಎಲ್ಲ ಪಕ್ಷಗಳ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಬೆಂಬಲಿಸುವ ನಿರ್ಧಾರ ಪ್ರಕಟಿಸೋಣ- ಹೆಚ್. ಡಿ. ದೇವೇಗೌಡ

ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತರಬೇಕೆಂಬ ಸಂಕಲ್ಪದಿಂದಲೇ ನಾನು ಜಲಸಂಪನ್ಮೂಲ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದೇನೆ. ಮೇಕೆದಾಟು ಯೋಜನೆಗಾಗಿ ಕಾನೂನು ಹೋರಾಟ ಮುಂದುವರೆದಿದೆ. ನಮಗೆ ಗೆಲುವು ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಈ ಸಂದರ್ಭದಲ್ಲಿ ದೇವೇಗೌಡರು ನಮ್ಮ ಹೋರಾಟಕ್ಕೆ ಧ್ವನಿಗೂಡಿಸಿರುವುದನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ.

ಮೇಕೆದಾಟು ಯೋಜನೆ ಕುರಿತು ಈ ಹಿಂದೆ ಹೇಳಿಕೆ ನೀಡಿದ್ದ ದೇವೇಗೌಡ ಅವರು, ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯ. ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಕಾಂಗ್ರೆಸ್‌, ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಈ ವಿಚಾರದಲ್ಲಿ ಒಟ್ಟಿಗೆ ಹೆಜ್ಜೆಯಿಡಬೇಕು ಎಂದು ಸಲಹೆ ನೀಡಿದ್ದರು.

ಮೇಕೆದಾಟು ಯೋಜನೆ ವಿರೋಧಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನಿಲುವು ಖಂಡನೀಯ. ಈ ಯೋಜನೆ ಅನುಷ್ಠಾನ ಸಂಬಂಧ ಜೆಡಿಎಸ್‌ ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಿದೆ. ಕಾಂಗ್ರೆಸ್‌, ಬಿಜೆಪಿ ಕೂಡ ಬದ್ಧತೆ ಪ್ರದರ್ಶಿಸಲಿ. ಪ್ರಧಾನಿಯವರೂ ಮಧ್ಯಸ್ಥಿಕೆ ವಹಿಸಲಿ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com