ಚುನಾವಣೆ ಕಾರಣ ನೇಮಕಾತಿ ಪ್ರಕ್ರಿಯೆಗಳ ನಿಲ್ಲಿಸಲು ಸಾಧ್ಯವಿಲ್ಲ; ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌

ಚುನಾವಣೆಯ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.
ಕರ್ನಾಟಕ ಹೈಕೋರ್ಟ್‌
ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಚುನಾವಣೆಯ ಕಾರಣಕ್ಕಾಗಿ ನೇಮಕಾತಿ ಪ್ರಕ್ರಿಯೆಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ಆರಂಭವಾಗಿದ್ದ ನೇಮಕಾತಿ ಪ್ರಕ್ರಿಯೆನ್ನು ಪೂರ್ಣಗೊಳಿಸಿಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ ನೀಡಿದೆ.

ಲೋಕಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ, ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಮೇಲ್ಮನವಿ ನ್ಯಾಯಾಧಿಕರಣಕ್ಕೆ ನಡೆಯುತ್ತಿದ್ದ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿ ಪ್ರಕ್ರಿಯೆಗಳನ್ನು ಸರ್ಕಾರ ಸ್ಥಗಿತಗೊಳಿಸಿತ್ತು. ಅದನ್ನು ಪ್ರಶ್ನಿಸಿ ಕೆಲ ಪತ್ರಕರ್ತರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಹಿಂದೆ, ಫೆಬ್ರವರಿ 26ರಂದು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠವು, ರೇರಾ ಮೇಲ್ಮನವಿ ನ್ಯಾಯಮಂಡಳಿಗೆ ಅದರ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸಬೇಕು ಮತ್ತು ಕ್ರಿಯಾತ್ಮಕಗೊಳಿಸಬೇಕು ಎಂದು ಹೇಳಿತ್ತು. ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶ ನೀಡಿತ್ತು.

ಕರ್ನಾಟಕ ಹೈಕೋರ್ಟ್‌
ದ್ವೇಷ ಭಾಷಣ: ಶೋಭಾ ಕರಂದ್ಲಾಜೆ, ತೇಜಸ್ವಿ ಸೂರ್ಯ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್ ತಡೆ

ಆ ಆದೇಶದ ಪಾಲನೆಗೆ ಸಂಬಂಧ ಹೈಕೋರ್ಟ್‌ ವಿಚಾರಣೆ ನಡೆಸಿದೆ. ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ ಅವರು, ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ಆದೇಶಗಳನ್ನು ಜಾರಿಗೊಳಿಸಲು ಚುನಾವಣೆ ಘೋಷಣೆ ಅಡ್ಡಿಯಾಗಿದೆ ಎಂದು ಹೇಳಿದರು.

ವಾದ ಆಲಿಸಿದ ನ್ಯಾಯಪೀಠ ಚುನಾವಣೆ ಕಾರಣ ನೇಮಕಾತಿಗಳನ್ನು ನಿಲ್ಲಿಸಲು ಸಾಧ್ಯವಿಲ್ಲ. ನೇಮಕಾತಿಯನ್ನು ಪೂರ್ಣಗೊಳಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com