ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಬೆಂಗಳೂರು, ಶಿವಮೊಗ್ಗದಲ್ಲಿ ಎನ್ಐಎ ಅಧಿಕಾರಿಗಳ ದಾಳಿ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಐದು ಕಡೆ ದಾಳಿ ನಡೆಸಿದೆ.
ರಾಮೇಶ್ವರಂ ಕೆಫೆ (ಸಂಗ್ರಹ ಚಿತ್ರ)
ರಾಮೇಶ್ವರಂ ಕೆಫೆ (ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಯನ್ನು ಮುಂದುವರಿಸಿರುವ ರಾಷ್ಟ್ರೀಯ ತನಿಖಾ ದಳ ಐದು ಕಡೆ ದಾಳಿ ನಡೆಸಿದೆ.

ಶಂಕಿತ ವ್ಯಕ್ತಿಗಳ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನ್ನು ಶನಿವಾರ ಸಂಜೆ ವಶಕ್ಕೆ ಪಡೆದುಕೊಂಡಿರುವ ವಿಚಾರ ಮಂಗಳವಾರ ತಿಳಿದುಬಂದಿತ್ತು.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ 5ಕ್ಕೂ ಹೆಚ್ಚು ಕಡೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿ ಸೇರಿದಂತೆ 5 ಕಡೆ ದಾಳಿ ಮಾಡಲಾಗಿದೆ. ಬೆಂಗಳೂರಿನಿಂದ 5ಕ್ಕೂ ಹೆಚ್ಚು ವಾಹನಗಳಲ್ಲಿ ಬಂದಿರುವ ಎನ್​ಐಎ ತಂಡದಲ್ಲಿ 15ಕ್ಕೂ ಹೆಚ್ಚು ಅಧಿಕಾರಿಗಳಿದ್ದಾರೆ.

ರಾಮೇಶ್ವರಂ ಕೆಫೆ (ಸಂಗ್ರಹ ಚಿತ್ರ)
ರಾಮೇಶ್ವರಂ ಕೆಫೆ ಬಾಂಬರ್ ಕೃಷ್ಣಗಿರಿ ಅರಣ್ಯದಲ್ಲಿ ತರಬೇತಿ ಪಡೆದ ಬಗ್ಗೆ ಯಾವುದೇ ಮಾಹಿತಿ ಇಲ್ಲ: ತಮಿಳುನಾಡು ಪೊಲೀಸರು

ದೇ ವೇಳೆ ಚೆನ್ನೈನ ಮೂರು ಕಡೆ ಕೂಡ ಎನ್​ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಶಂಕಿತರ ಶೋಧ ನಡೆಸಿದೆ. ಉಗ್ರರಿಗೆ ಹಣದ ನೆರವು, ಉಗ್ರರ ಪರ ಹಣ ಸಂಗ್ರಹ ಆರೋಪದ ಮೇಲೆ ಶಂಕಿತರ ಮನೆಗಳಲ್ಲಿ ಶೋಧ ನಡೆಸಿದೆ. ತಮಿಳುನಾಡಿನಲ್ಲಿ ನಡೆದಿರುವ ಎನ್‌ಐಎ ದಾಳಿ ಕೂಡ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದ್ದೇ ಆಗಿದೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com