ಬೆಂಗಳೂರು: ಅಂತರ್ಜಲ ವೃದ್ಧಿಗೆ ಸಮುದಾಯ ಮಳೆ ನೀರು ಕೊಯ್ಲು ವ್ಯವಸ್ಥೆ ಅಳವಡಿಕೆಗೆ ಜಲಮಂಡಳಿ ಚಿಂತನೆ!

ನಗರದಲ್ಲಿ ಅಂತರ್ಜಲ ವೃದ್ಧಿಗೆ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ಜಲ ಮಂಡಳಿಯಿಂದ ಸಮುದಾಯ ಮಳೆ ನೀರು ಕೊಯ್ಲು (community rainwater harvesting project) ಪ್ರಾರಂಭಿಸಲು ಚಿಂತನೆ ನಡೆಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದಲ್ಲಿ ಅಂತರ್ಜಲ ವೃದ್ಧಿಗೆ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ಜಲ ಮಂಡಳಿಯಿಂದ ಸಮುದಾಯ ಮಳೆ ನೀರು ಕೊಯ್ಲು (community rainwater harvesting project) ಪ್ರಾರಂಭಿಸಲು ಚಿಂತನೆ ನಡೆಸಿದೆ.

ನಗರದ ಕಟ್ಟಡಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಕಟ್ಟಡಗಳಲ್ಲಿನ ಜಾಗದ ಕೊರತೆ ಹಾಗೂ ನಿರ್ಲಕ್ಷ್ಯದಿಂದ ಅನುಷ್ಠಾನ ಸಾಧ್ಯವಾಗಿಲ್ಲ. ಬಹುತೇಕ ಕಡೆಗಳಲ್ಲಿ ಕೇವಲ ಅಗತ್ಯ ಅನುಮತಿ ಪಡೆದುಕೊಳ್ಳಲು ಮಳೆ ನೀರು ಕೊಯ್ಲು ಪದ್ಧತಿ ಅಳವಡಿಸಿದ್ದು, ಮಳೆ ನೀರನ್ನು ಸಂಗ್ರಹಿಸಿ ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ ಒಳಚರಂಡಿ ವ್ಯವಸ್ಥೆ ಒತ್ತಡಕ್ಕೆ ಒಳಗಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಅಲ್ಲದೆ, ಇದರಿಂದ ಅಮೂಲ್ಯ ನೀರು ವ್ಯರ್ಥವಾಗಿ ಚರಂಡಿಪಾಲಾಗುತ್ತಿದೆ. ಹೀಗಾಗಿ ನೀರು ವ್ಯರ್ಥವಾಗದಂತೆ ಅಮೂಲ್ಯ ಮಳೆ ನೀರನ್ನು ಸಂಗ್ರಹಿಸಿ, ಅದನ್ನು ಅಂತರ್ಜಲ ವೃದ್ಧಿಗೆ ಬಳಸಿಕೊಳ್ಳಲು ಕಮ್ಯೂನಿಟಿ ರೈನ್ ಹಾರ್ವೆಸ್ಟಿಂಗ್ ಯೋಜನೆ ರೂಪಸಲು ಮುಂದಾಗಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದ್ದಾರೆ.

ಮೊದಲ ಹಂತದಲ್ಲಿ ವರ್ತೂರು, ಬೆಳ್ಳಂದೂರು ಭಾಗದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಂಡಳಿ ಚಿಂತನೆ ನಡೆಸಿದ ಎಂದು ತಿಳಿಸಿದ್ದಾರೆ.

ಈ ನಡುವೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಕುಡಿಯುವ ನೀರಿನ ಕೊರತೆ ಕುರಿತು ಯಲಹಂಕ ಮತ್ತು ದಾಸರಹಳ್ಳಿ ವಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಪಾಲಿಕೆಯ ಅಧಿಕಾರಿಗಳು ಜಲಮಂಡಳಿಯ ಅಧಿಕಾರಿಗಳ ಜತೆ ಸಮನ್ವಯತೆ ಸಾಧಿಸಿಕೊಂಡು ನೀರಿನ ಸಮಸ್ಯೆಯ ಕುರಿತು ಗಮನಹರಿಸಿ ಕೂಡಲೇ ನೀರಿನ ವ್ಯವಸ್ಥೆ ಕಲ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಶುದ್ಧ ಕುಡಿವ ನೀರಿನ ಘಟಕ ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕು. ನೀರಿನ ಕೊರತೆಯಿರುವ ಘಟಕಗಳಿಗೆ ತಾತ್ಕಾಲಿಕ ನೀರಿನ ವ್ಯವಸ್ಥೆ ಮಾಡಿಕೊಂಡು ನೀರಿನ ಪೂರೈಕೆ ಮಾಡಬೇಕು ಹಾಗೂ ನೀರಿನ ಅಭಾವ ಹೆಚ್ಚಿರುವ ಕಡೆ ಸಿಂಟೆಕ್ಸ್ ಟ್ಯಾಂಕ್​ಗಳನ್ನು ಅಳವಡಿಸಿ ನೀರಿನ ಪೂರೈಕೆಯನ್ನು ಮಾಡಬೇಕು.

ಸಂಗ್ರಹ ಚಿತ್ರ
ಬೆಂಗಳೂರು: ನಗರದಲ್ಲಿ ಕೇವಲ 1.9 ಲಕ್ಷ ಕಟ್ಟಡಗಳಲ್ಲಿ ಮಾತ್ರ ಮಳೆನೀರು ಕೊಯ್ಲು ಅಳವಡಿಕೆ!

ಎರಡೂ ವಲಯಗಳಿಗೆ ಕೊಳವೆ ಬಾವಿಗಳ ನಿರ್ವಹಣೆ, ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಈಗಾಗಲೇ ಅನುದಾನ ನೀಡಲಾಗಿದೆ. ಬತ್ತಿ ಹೋಗಿರುವ ಕೊಳವೆ ಬಾವಿಗಳಲ್ಲಿ ರೀ ಡ್ರಿಲ್ ಮಾಡುವುದು ಹಾಗೂ ಹೊಸ ಕೊಳವೆ ಬಾವಿಗಳನ್ನು ಕೊರೆಸಿ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಆಯಾ ವಲಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ಗಳಲ್ಲಿ ನಿಯೋಜನೆ ಮಾಡಿರುವ ಟ್ಯಾಂಕರ್​ಗಳು ಎಷ್ಟು ಬಾರಿ ನೀರಿನ ಪೂರೈಕೆ ಮಾಡಲಿವೆ ಎಂಬುದನ್ನು ಮೇಲ್ವಿಚಾರಣೆ ಮಾಡಬೇಕು ಎಂದು ತಿಳಿಸಿದರು.

ಬತ್ತಿ ಹೋಗಿರುವ ಕೊಳವೆ ಬಾವಿಗಳಲ್ಲಿರುವ ಪಂಪ್​ಸೆಟ್​ಗಳನ್ನು ಹೊರತೆಗೆದು ಯಾವುದಾದರು ಯಂತ್ರ ಹಾಳಾಗಿರುವ ಸ್ಥಿತಿಯಲ್ಲಿದ್ದರೆ ಅದನ್ನು ದುರಸ್ತಿಪಡಿಸಿಕೊಂಡು ಒಂದು ಕಡೆ ಸಂಗ್ರಸಿಟ್ಟುಕೊಳ್ಳಬೇಕು. ಯಾವುದಾದರು ಕೊಳವೆ ಬಾವಿಯಲ್ಲಿ ಪಂಪ್ ಸೆಟ್ ಹಾಳಾದಲ್ಲಿ ಕೂಡಲೇ ಸಂಗ್ರಹಿಸಿಟ್ಟಿರುವ ಯಂತ್ರಗಳನ್ನು ಕೊಳವೆ ಬಾವಿಗೆ ಅಳವಡಿಸಿ ನೀರಿನ ಪೂರೈಕೆ ಮಾಡಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 110 ಹಳ್ಳಿಗಳ ಪೈಕಿ ಯಲಹಂಕ ವಲಯಕ್ಕೆ 16 ಹಳ್ಳಿ ಹಾಗೂ ದಾಸರಹಳ್ಳಿ ವಲಯಕ್ಕೆ 5 ಹಳ್ಳಿಗಳು ಬರಲಿವೆ. ಈ ಹಳ್ಳಿಗಳಿಗೆ ಪಾಲಿಕೆಯಿಂದ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. ಮಳೆಗಾಲ ಪ್ರಾರಂಭವಾಗುವವರೆಗೆ ಎಲ್ಲಿಯೂ ನೀರಿನ ಸಮಸ್ಯೆೆ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com