ಬರ ಪರಿಹಾರ: ದ್ವೇಷ ರಾಜಕಾರಣಕ್ಕೆ 'ಸುಪ್ರೀಂ' ಮೊರೆ ಹೋಗಿದ್ದಾರೆ; ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬರ ಪರಿಹಾರಕ್ಕೆ ಹಣ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಉನ್ನತ ನಾಯಕರು ತೀವ್ರವಾಗಿ ಕಿಡಿಕಾರಿದ್ದಾರೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಬರ ಪರಿಹಾರಕ್ಕೆ ಹಣ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಉನ್ನತ ನಾಯಕರು ತೀವ್ರವಾಗಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿನ ಬರ ಪರಿಸ್ಥಿತಿ ನಿಭಾಯಿಸುವಲ್ಲಿ ತಮ್ಮ ಅಸಾಮರ್ಥ್ಯವನ್ನು ಮುಚ್ಚಿಕೊಳ್ಳಲು ಮತ್ತು ದ್ವೇಷ ರಾಜಕಾರಣಕ್ಕೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆಂದು ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಬರ ಪರಿಹಾರ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ. ಕೇಂದ್ರದಿಂದ ಜಿಎಸ್ ಟಿ ಹಣ ಬಾಕಿ ಉಳಿಸಿಕೊಂಡಿಲ್ಲ, ಎಸ್ ಡಿಆರ್’ಎಫ್ ನಿಯಮಾವಳಿಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರಕ್ಕೆ ಅನುಕೂಲ ಮಾಡಿದ್ದೇವೆ. ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬರ ಪರಿಹಾರ, ಅನುದಾನ ಹಂಚಿಕೆಗೆ ಸಂಬಂಧಿಸಿದಂತೆ ಎಲ್ಲ ಪ್ರಶ್ನೆಗಳಿಗೆ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ
ಬರ ಪರಿಹಾರ, ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು ಏಕೆ?

ರಾಜ್ಯ ಸರ್ಕಾರ ಬರ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. ಬಹಳಷ್ಟು ಕಡೆಗೆ ಕುಡಿಯುವ ನೀರಿಗೆ ತಾತ್ವಾರ ಇದೆ. ಆದರೂ ಸಹಿತ ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್’ಗೆ ಹೋಗಿದ್ದು ಖಂಡನೀಯ, ಇದು ದ್ವೇಷದ ರಾಜಕಾರಣ ಎಂದು ಹರಿಹಾಯ್ದರು.

ಇದೇ ವೇಳ ಮೋದಿ ಮೋದಿ ಎಂದು ಘೋಷಣೆ ಕೂಗುವ ಯುವಕರ ಕಪ್ಪಾಳಕ್ಕೆ ಹೊಡೆಯಿರಿ ಎಂದು ಹೇಳಿಕೆ ಕೊಟ್ಟಿರುವ ಸಚಿವ ಶಿವರಾಜ ತಂಗಡಗಿ ಹೇಳಿಕೆಯನ್ನು ಖಂಡಿಸಿದ ಪ್ರಲ್ಹಾದ್ ಜೋಶಿ, ದೇಶದಲ್ಲಿ ಶೇ.70-80 ರಷ್ಟು ಯುವಕರು ಮೋದಿ ಮೋದಿ ಎಂದು ಕೂಗುತ್ತಾರೆ. ರಾಗಾ ಅವರ ಕಾರ್ಯಕ್ರಮದಲ್ಲೂ ಸ್ವಯಂ ಪ್ರೇರಣೆಯಿಂದ ಮೋದಿ ಮೋದಿ ಎಂದು ಘೋಷಣೆ ಹಾಕುತ್ತಾರೆ. ಕಾಂಗ್ರೆಸ್’ನವರು ತಮ್ಮ ಕೈಯಲ್ಲಿ ಎಷ್ಟು ಶಕ್ತಿಯಿದೆ ಎಂದು ತೋರಿಸಲಿ.‌ ದೇಶದ ಜನ ಅವರಿಗೆ ಬುದ್ದಿ ಕಲಿಸತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿ, ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್ ಎಫ್ ಹಣ ಬಂದಿದೆ ಅನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.

ರಾಜ್ಯ ಸರ್ಕಾರ ಅಧೋಗತಿಗೆ ಹೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ. ರಾಜ್ಯ ಸರ್ಕಾರ ಕೇಂದ್ರದಿಂದ ಹಣ ಬಂದಿಲ್ಲ ಎಂದು ಹೇಳುವುದನ್ನು ಬಿಟ್ಟು, ಯುಪಿಎ ಅವಧಿಯಲ್ಲಿ ಹಾಗೂ ಎನ್ ಡಿಎ ಅವಧಿಯಲ್ಲಿ ಎನ್ ಡಿ ಆರ್ ಎಫ್ ನಿಧಿಯಿಂದ ಎಷ್ಟು ಹಣ ಬಂದಿದೆ ಎಂದು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com