ಸಂಸದ ಡಿಕೆ ಸುರೇಶ್
ಸಂಸದ ಡಿಕೆ ಸುರೇಶ್PTI

Loksabha Polls: ಸಂಸದ ಡಿ.ಕೆ ಸುರೇಶ್‌ 598 ಕೋಟಿ ರೂಪಾಯಿ ಒಡೆಯ, ಕಳೆದ 5 ವರ್ಷದಲ್ಲಿ 259.19 ಕೋಟಿ ರೂ. ಹೆಚ್ಚಳ!

ಏಪ್ರಿಲ್ 26ರಂದು ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಅದರಂತೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.
Published on

ಬೆಂಗಳೂರು: ಏಪ್ರಿಲ್ 26ರಂದು ಮೊದಲ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು ಅದರಂತೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ನಾಮಪತ್ರ ಸಲ್ಲಿಸಿದ್ದು ತಮ್ಮ ಆಸ್ತಿ ಮೌಲ್ಯವನ್ನು ಘೋಷಿಸಿದ್ದಾರೆ.

598 ಕೋಟಿ ರೂಪಾಯಿ ಒಡೆಯರಾಗಿರುವ ಡಿಕೆ ಸುರೇಶ್ ಅವರ ಆಸ್ತಿಯಲ್ಲಿ ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಆಸ್ತಿ ಮೌಲ್ಯವು ಹೆಚ್ಚಳವಾಗಿದೆ. ಅಲ್ಲದೆ ಒಟ್ಟು 207 ಕೋಟಿ ರೂಪಾಯಿ ಸಾಲವಿದೆ. ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಅವರ ಕಿರಿಯ ಸಹೋದರ ಸುರೇಶ್ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂಪಾಯಿ ಆಸ್ತಿಯನ್ನು ಘೋಷಿಸಿದ್ದರು.

ಸಂಸದ ಡಿಕೆ ಸುರೇಶ್
Loksabha Election 2024: ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ನಾಮಪತ್ರ ಸಲ್ಲಿಕೆ

ಬೆಂಗಳೂರು ಗ್ರಾಮಾಂತರದಿಂದ ಪುನರಾಯ್ಕೆ ಬಯಸಿರುವ ಮೂರು ಬಾರಿ ಸಂಸದರಾಗಿರುವ ಅವರು ಇಂದು ಸಲ್ಲಿಸಿದ ನಾಮಪತ್ರದ ಜತೆಗೆ ಸಲ್ಲಿಸಿರುವ ಅಫಿಡವಿಟ್‌ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂಪಾಯಿ ಠೇವಣಿ ಹೊಂದಿದ್ದಾರೆ. 57 ವರ್ಷದ ಸಂಸದ ಸುರೇಶ್ 32.76 ಕೋಟಿ ಮೌಲ್ಯದ 21 ಸ್ಥಳಗಳಲ್ಲಿ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಮತ್ತು 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂಪಾಯಿ ಮೌಲ್ಯದ ಪೀಠೋಪಕರಣವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ ಹಾಗೂ ಮಾಜಿ ಮುಖ್ಯಮಂತ್ರಿ ಹಾಗೂ ರಾಜ್ಯ ಜೆಡಿಎಸ್ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರ ಸೋದರ ಮಾವ ಆಗಿರುವ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಮಂಜುನಾಥ್ ಅವರು 17 ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದ ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿದ್ದು ಈ ವರ್ಷದ ಜನವರಿಯಲ್ಲಿ ನಿವೃತ್ತರಾಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Advertisement

X
Kannada Prabha
www.kannadaprabha.com