ಲೋಕಸಭಾ ಚುನಾವಣೆ: ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ ಮೌಲ್ಯ ನಾಲ್ಕು ಪಟ್ಟು ಹೆಚ್ಚಳ!
ಬೆಂಗಳೂರು: ಹಾಸನ ಲೋಕಸಭಾ ಕ್ಷೇತ್ರದಿಂದ ಮರು ಸ್ಪರ್ಧಿಸುತ್ತಿರುವ ರಾಜ್ಯದ ಏಕೈಕ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು 40.85 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇದು 2019ರ ಚುನಾವಣಾ ಅಫಿಡವಿಟ್ ಗೆ ಹೋಲಿಸಿದರೆ ನಾಲ್ಕು ಪಟ್ಟು ಹೆಚ್ಚಳವಾಗಿದೆ. ಠೇವಣಿ, ಹೂಡಿಕೆ, ಇತರರಿಗೆ ನೀಡಿದ ಸಾಲ ಮತ್ತು ಆಭರಣ ಸೇರಿದಂತೆ ಒಟ್ಟು 5.45 ಕೋಟಿ ಮೌಲ್ಯದ ಚರ ಮತ್ತು 35.84 ಕೋಟಿ ಮೌಲ್ಯದ ಸ್ಥಿರಾಸ್ತಿಯನ್ನೂ ಹೊಂದಿರುವುದಾಗಿ 34 ವರ್ಷದ ಹಾಲಿ ಸಂಸದರು ಘೋಷಿಸಿದ್ದಾರೆ.
2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರು ತಮ್ಮ ಒಟ್ಟು ಆಸ್ತಿ ಮೌಲ್ಯ 9.78 ಕೋಟಿ ರೂಪಾಯಿ ಎಂದು ಘೋಷಿಸಿದ್ದರು. ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗನಾಗಿರುವ ಪ್ರಜ್ವಲ್ ಅವರು 4.49 ಕೋಟಿ ರೂ. ಬಾಧ್ಯತೆ ( liability) ಹೊಂದಿದ್ದು, ಸರ್ಕಾರದ ಬಾಕಿ 3.04 ಕೋಟಿ ರೂ. ಇರುವುದಾಗಿ ತಿಳಿಸಿದ್ದಾರೆ.
ಪ್ರಜ್ವಲ್ 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಎ ಮಂಜು ಅವರನ್ನು 1.40 ಲಕ್ಷ ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಮಾಜಿ ಸಚಿವ ದಿವಂಗತ ಜಿ ಪುಟ್ಟಸ್ವಾಮಿಗೌಡ ಅವರ ಮೊಮ್ಮಗ 31ರ ಹರೆಯದ ಶ್ರೇಯಸ್ ಎಂ ಪಟೇಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ