ಲೋಕಸಭಾ ಚುನಾವಣೆ 2024: ಶೀಘ್ರದಲ್ಲೇ ರಾಜ್ಯದಲ್ಲಿ ಮೋದಿ, ಯೋಗಿ, ಶಾ 2-3 ಸುತ್ತಿನ ಪ್ರಚಾರ!

ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಕರ್ನಾಟಕದಲ್ಲಿ ಪ್ರಚಾರಕ್ಕೆ ಧುಮುಕಲು ಸಿದ್ಧತೆ ಆರಂಭಿಸಿದ್ದಾರೆ.
ಪ್ರಧಾನಿ ಮೋದಿ.
ಪ್ರಧಾನಿ ಮೋದಿ.
Updated on: 

ಬೆಂಗಳೂರು: ಲೋಕಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಇದರ ಬೆನ್ನಲ್ಲೇ ಬಿಜೆಪಿಯ ಪ್ರಮುಖ ರಾಷ್ಟ್ರೀಯ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಕರ್ನಾಟಕದಲ್ಲಿ ಪ್ರಚಾರಕ್ಕೆ ಧುಮುಕಲು ಸಿದ್ಧತೆ ಆರಂಭಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಇತರ ಬಿಜೆಪಿ ನಾಯಕರು ಮುಂದಿನ ಕೆಲವು ವಾರಗಳಲ್ಲಿ ಕನಿಷ್ಠ 2-3 ಬಾರಿ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಮತದಾರರನ್ನು ತಲುಪಲು ಬಿಜೆಪಿ ಮೆಗಾ ರ‍್ಯಾಲಿಗಳು ಸೇರಿದಂತೆ ಕನಿಷ್ಠ 70 ಸಮಾವೇಶಗಳನ್ನು ಆಯೋಜಿಸಲಿದೆ.

ಲೋಕಸಭೆ ಚುನಾವಣೆಯ 2ನೇ ಹಂತದಲ್ಲಿ (ಏಪ್ರಿಲ್ 26) ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯಲಿದ್ದು, ಇನ್ನು ಕೇವಲ ಒಂದು ತಿಂಗಳು ಬಾಕಿ ಉಳಿದಿದೆ. ದಕ್ಷಿಣ ಕರ್ನಾಟಕದ ಭಾಗಗಳಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿ ರಾಜ್ಯ ತಂಡವು ಇದರ ಮೇಲೆ ಹೆಚ್ಚು ಗಮನ ಹರಿಸಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಆರ್ ಅಶೋಕ ನೇತೃತ್ವದಲ್ಲಿ ಬಿಜೆಪಿ ತಲಾ ನಾಲ್ಕು ಪ್ರಚಾರ ಸಮಿತಿಗಳನ್ನು ರಚಿಸಲಿದೆ. ಇದರೊಂದಿಗೆ ಕೇಂದ್ರ ನಾಯಕರನ್ನು ಒಳಗೊಂಡಿರುವ ತಂಡವನ್ನೂ ರಚಿಸಲಿದೆ. ಈ ತಂಡಗಳು ಪ್ರತಿದಿನ 2-3 ಲೋಕಸಭಾ ಕ್ಷೇತ್ರಗಳಲ್ಲಿ ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳಲಿವೆ.

ಪ್ರಧಾನಿ ಮೋದಿ.
ಲೋಕಸಭಾ ಚುನಾವಣೆ 2024: ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ, ಏಪ್ರಿಲ್ 4 ಕೊನೆ ದಿನ

ಪ್ರಧಾನಿ ಮೋದಿ ಸೇರಿದಂತೆ ರಾಷ್ಟ್ರೀಯ ನಾಯಕರು ಯಾವಾಗ ಪ್ರಚಾರಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಬೇಕು, ಸಮಾವೇಶಗಳು ಹೇಗಿರಬೇಕು ಎಂಬ ಬಗ್ಗೆ ಬಿಜೆಪಿ ಕಾರ್ಯತಂತ್ರ ರೂಪಿಸಿದೆ. ಅದರಂತೆ, ಕೇಂದ್ರ ನಾಯಕರು ಪ್ರಚಾರಕ್ಕೆ ಬಂದಾಗ ವಿಜಯೇಂದ್ರ, ಅಶೋಕ ಅಥವಾ ಇತರ ರಾಜ್ಯ ನಾಯಕರು ಆ ಸಮಾವೇಶಗಳಿಗೆ ಹಾಜರಾಗುವುದಿಲ್ಲ. ಬದಲಾಗಿ ಈ ನಾಯಕರು ಬೇರೆ ಕಡೆ ಪ್ರಚಾರ ನಡೆಸಲಿದ್ದಾರೆ. ಆದರೆ, ಬಿಜೆಪಿಯ ಉನ್ನತ ನಾಯಕರು ಭಾಗವಹಿಸುವ ಈ ಎಲ್ಲಾ ಸಭೆಗಳಲ್ಲಿ ಯಡಿಯೂರಪ್ಪ ಉಪಸ್ಥಿತರಿರಲಿದ್ದಾರೆ.

ಬಿಜೆಪಿಯ ಹಿರಿಯ ನಾಯಕರೊಬ್ಬರು ಮಾತನಾಡಿ, ಮೋದಿ ರಾಜ್ಯಕ್ಕೆ ಇನ್ನೂ 4 ಬಾರಿ ಭೇಟಿ ನೀಡಲಿದ್ದಾರೆ. ಮೋದಿ ಈಗಾಗಲೇ ಶಿವಮೊಗ್ಗ ಹಾಗೂ ಕಲಬುರಗಿಗೆ ಭೇಟಿ ನೀಡಿ ಪ್ರಚಾರ ನಡೆಸಿದ್ದಾರೆ. ಅದೇ ರೀತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನಾಲ್ಕು ಬಾರಿ, ಅಮಿತ್ ಶಾ ಆರು ಬಾರಿ ಮತ್ತು ಯೋಗಿ ಆದಿತ್ಯನಾಥ್ 4 ಬಾರಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ಹೇಳಿದ್ದಾರೆ.

"ಪ್ರಧಾನಿ ಕರ್ನಾಟಕಕ್ಕೆ ಬಂದಾಗಲೆಲ್ಲಾ, ಪಕ್ಷವು ಮೂರು ಬಾರಿ ಪರಿಸ್ಥಿತಿಯನ್ನು ಅವಲೋಕನ ನಡೆಸುತ್ತದೆ. ಭೇಟಿಯ ಒಂದು ವಾರದ ಮೊದಲು, ಭೇಟಿ ನೀಡುವ ವಾರ ಮತ್ತು ಅಂತಿಮವಾಗಿ ಭೇಟಿಯ ನಂತರ ಅವಲೋಕನ ನಡೆಸುತ್ತದೆ. ಸ್ಥಳೀಯ ಸಮಸ್ಯೆಗಳ ಬಗ್ಗೆಯೂ ಸಂಗ್ರಹಿಸಲಾಗುತ್ತದೆ. ಪಿಎಂಒ ಕನ್ನಡದಲ್ಲಿ ಕೆಲವು ನುಡಿಗಟ್ಟುಗಳನ್ನು ನೀಡುತ್ತದೆ, ಪ್ರಧಾನಿ ಮೋದಿಯವರು ತಮ್ಮ ಭಾಷಣಗಳನ್ನು ಅದನ್ನು ಬಳಕೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಮೋದಿ.
ಬಿಜೆಪಿ, ಮೋದಿ, ಸಿಟಿ ರವಿಗೆ ಕಪಾಳಮೋಕ್ಷ ಮಾಡಿ ಎಂದು ಹೇಳಿಲ್ಲ: ಸಚಿವ ಶಿವರಾಜ್ ತಂಗಡಗಿ

ಮಾರ್ಚ್ 29 ರಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ

ಮಾರ್ಚ್ 29ರಂದು ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮಾಹಿತಿ ನೀಡಿದ್ದಾರೆ.

ಸಭೆ ಬಳಿಕ ನಾಮಪತ್ರ ಸಲ್ಲಿಕೆ ಹಾಗೂ ಸಭೆ ನಡೆಯಲಿದೆ. ನಮ್ಮ ಮೈತ್ರಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ಎರಡೂ ಪಕ್ಷಗಳ ಮುಖಂಡರು ಹಾಜರಿರುತ್ತಾರೆ. ಪ್ರಧಾನಿ ಮೋದಿಯವರು ನಡೆಸುವ ಸಭೆಯೊಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಕೂಡ ಉಪಸ್ಥಿತರಿರುತ್ತಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com