ತನಿಖೆ ತನಗೇ ವಹಿಸುವಂತೆ ಒತ್ತಾಯಿಸಲು ಲೋಕಾಯುಕ್ತಕ್ಕೆ ಯಾವುದೇ ಅಧಿಕಾರವಿಲ್ಲ: ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕರ್ತವ್ಯಲೋಪ ಎಸಗಿದ ಅಧಿಕಾರಿಯ ವಿರುದ್ಧ ಇಲಾಖಾ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಲೋಕಾಯುಕ್ತಕ್ಕೆ ಅಧಿಕಾರವಿದೆಯೇ ಹೊರತು, ತನಿಖೆಯನ್ನು ತನಗೇ ವಹಿಸುವಂತೆ ಶಿಫಾರಸ್ಸು ಮಾಡಲು ಅಥವಾ ಒತ್ತಾಯಿಸಲು ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 12 (3) ರ ಅಡಿಯಲ್ಲಿ ಕರ್ತವ್ಯಲೋಪ ಎಸಗಿದ ಅಧಿಕಾರಿಯ ವಿರುದ್ಧ ಇಲಾಖಾ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಲೋಕಾಯುಕ್ತಕ್ಕೆ ಅಧಿಕಾರವಿದೆ, ಆದರೆ ತನಿಖೆಯನ್ನು ತನಗೇ ವಹಿಸುವಂತೆ ಶಿಫಾರಸು ಮಾಡುವ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಕರ್ನಾಟಕ ನಾಗರಿಕ ಸೇವೆಗಳ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ನಿಯಮ 14-ಎ ಅಡಿಯಲ್ಲಿ ಸರ್ಕಾರವು ಅಂತಹ ತನಿಖೆಯನ್ನು ಲೋಕಾಯುಕ್ತ, ಉಪ ಲೋಕಾಯುಕ್ತ ಅಥವಾ ಶಿಸ್ತು ಪ್ರಾಧಿಕಾರಕ್ಕೆ ವಹಿಸಬಹುದು ಎಂದು ಕೋರ್ಟ್ ಅಭಿಪ್ರಾಪಯಪಟ್ಟಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಹಿರಿಯ ಪರಿಸರ ಅಧಿಕಾರಿ ಯತೀಶ್ ಜಿ ವಿರುದ್ಧದ ಪ್ರಕರಣವನ್ನು ಉಪ ಲೋಕಾಯುಕ್ತಕ್ಕೆ ವಹಿಸಲು ರಾಜ್ಯ ಸರ್ಕಾರ ಸೆಪ್ಟೆಂಬರ್ 7, 2023 ರ ಆದೇಶವನ್ನು ರದ್ದುಗೊಳಿಸಿ, ನ್ಯಾಯಮೂರ್ತಿ ಎನ್‌ಎಸ್ ಸಂಜಯ್ ಗೌಡ ಅವರು ಅರ್ಜಿ ಸಲ್ಲಿಸಲು ಸರ್ಕಾರಕ್ಕೆ ಸ್ವಾತಂತ್ರ್ಯ ನೀಡಿದ್ದರು.
ಉಪ ಲೋಕಾಯುಕ್ತರು ಮಾಡಿದ ಶಿಫಾರಸಿನ ಮೇಲೆ ಸ್ವತಂತ್ರವಾಗಿ ಮತ್ತು ಉಪ ಲೋಕಾಯುಕ್ತರು ಮಾಡಿದ ಶಿಫಾರಸಿನಿಂದ ಪ್ರಭಾವಿತರಾಗದೆ ತನಿಖೆಯನ್ನು ಲೋಕಾಯುಕ್ತ, ಉಪ ಲೋಕಾಯುಕ್ತ ಅಥವಾ ಶಿಸ್ತು ಪ್ರಾಧಿಕಾರಕ್ಕೆ ವಹಿಸಬೇಕೇ ಎಂದು ನಿರ್ಧಾರ ತೆಗೆದುಕೊಳ್ಳಿ. ಲೋಕಾಯುಕ್ತ ಅಥವಾ ಉಪ ಲೋಕಾಯುಕ್ತ, ತನಿಖೆಯ ನಂತರ, ತಾನು ಸ್ವೀಕರಿಸಿದ ದೂರಿನ ಬಗ್ಗೆ ಅಭಿಪ್ರಾಯವನ್ನು ರಚಿಸಲು ಮತ್ತು ಅದನ್ನು ದಾಖಲಿಸಲು ಮತ್ತು ಅದರ ಶಿಫಾರಸಿನೊಂದಿಗೆ ವರದಿಯನ್ನು ಸಲ್ಲಿಸಲು ಅಧಿಕಾರವನ್ನು ಹೊಂದಿದೆ ಎಂದು ನ್ಯಾಯಾಲಯ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ